AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಸೋಲಾಪುರದಲ್ಲಿ ಯಾತ್ರಿಕರಿದ್ದ ವ್ಯಾನ್ ಬಾವಿಗೆ ಉರುಳಿ 8 ಮಂದಿ ಸಾವು, 7 ಮಂದಿಗೆ ಗಾಯ, ಪ್ರಧಾನಿ ನೆರವು

ಮಹಾರಾಷ್ಟ್ರದ ಸೋಲಾಪುರದಲ್ಲಿ ಜೂನ್ 14ರಂದು ಭಾನುವಾರ ಯಾತ್ರಿಕರಿದ್ದ ವ್ಯಾನ್ ಬಾವಿಗೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ರಂಜನಿ ಗ್ರಾಮದ ನಿವಾಸಿಗಳು ತೀರ್ಥಯಾತ್ರೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಬಾವಿಗೆ ಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ.

ಮಹಾರಾಷ್ಟ್ರ: ಸೋಲಾಪುರದಲ್ಲಿ ಯಾತ್ರಿಕರಿದ್ದ ವ್ಯಾನ್ ಬಾವಿಗೆ ಉರುಳಿ 8 ಮಂದಿ ಸಾವು, 7 ಮಂದಿಗೆ ಗಾಯ, ಪ್ರಧಾನಿ ನೆರವು
ಬಾವಿ Image Credit source: X Account-Dharm
ನಯನಾ ರಾಜೀವ್
|

Updated on: Jun 15, 2026 | 7:14 AM

Share

ಸೋಲಾಪುರ, ಜೂನ್ 15: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಭಾನುವಾರ( ಜೂ.14) ಸಂಜೆ ಅಪಘಾತ(Accident)ವೊಂದು ಸಂಭವಿಸಿದೆ. ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ರಸ್ತೆ ಬದಿಯಿದ್ದ ಬಾವಿಗೆ ಉರುಳಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಮಕ್ಕಳು ಸೇರಿ 8 ಮಂದಿ ಪ್ರಾಣಬಿಟ್ಟಿದ್ದಾರೆ. ಅಪಘಾತದಲ್ಲಿ ಇತರೆ 7 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಪಂಢರಪುರ ಪ್ರದೇಶದ ರಂಜನಿ ಗ್ರಾಮದ ನಿವಾಸಿಗಳಾಗಿದ್ದು, ದುರಂತ ಸಂಭವಿಸಿದಾಗ ತೀರ್ಥಯಾತ್ರೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಸೋಲಾಪುರ ಅಪಘಾತ ಸಂಭವಿಸಿದ್ಹೇಗೆ? ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್​ನ ತಂಡುಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ಇದ್ದಕ್ಕಿದ್ದಂತೆ ರಸ್ತೆಯಿಂದ ಹೊರಟು ರಸ್ತೆ ಬದಿಯ ಬಾವಿಗೆ ಉರುಳಿ ಬಿದ್ದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಸೋಲಾಪುರ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ನಿನ್ನೆಯೇ ಧಾವಿಸಿತ್ತು.

ವಾಹನ ಬಾವಿಗೆ ಬಿದ್ದ ಕೂಡಲೇ ಸ್ಥಳೀಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಪ್ರತಿಕ್ರಿಯೆ ನೀಡುವವರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಾಳುಗಳನ್ನು ಹೊರತೆಗೆದು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

ಮತ್ತಷ್ಟು ಓದಿ: ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್

ಗಾಯಾಳುಗಳ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಆಸ್ಪತ್ರೆ ಅಧಿಕಾರಿಗಳಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಪಿಕಪ್ ವ್ಯಾನ್‌ನಲ್ಲಿದ್ದ 15 ಮಂದಿಯೂ ರಂಜನಿ ಗ್ರಾಮಕ್ಕೆ ಸೇರಿದವರಾಗಿದ್ದು, ಧಾರ್ಮಿಕ ಪ್ರಯಾಣದ ಭಾಗವಾಗಿ ಒಟ್ಟಿಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತವು ಸ್ಥಳೀಯ ಸಮುದಾಯದಲ್ಲಿ ಆಘಾತದ ಅಲೆಗಳನ್ನು ಉಂಟುಮಾಡಿದ್ದು, ತಮ್ಮ ಪ್ರೀತಿಪಾತ್ರರನ್ನು ಹಠಾತ್ ಕಳೆದುಕೊಂಡ ಕುಟುಂಬಗಳು ಶೋಕದಲ್ಲಿ ಮುಳುಗಿವೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ವಿಡಿಯೋ

ಮಹಾರಾಷ್ಟ್ರದ ಸೋಲಾಪುರ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು
ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು
ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ
ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!