AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಇಂದು ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಅಂತಿಮಗೊಳಿಸಿದ ವ್ಯಾಪಾರ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದರು. ಭಾರತದ ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಮೋದಿ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Rahul Gandhi
ಸುಷ್ಮಾ ಚಕ್ರೆ
|

Updated on:Feb 11, 2026 | 6:10 PM

Share

ನವದೆಹಲಿ, ಫೆಬ್ರವರಿ 11: ಅಮೆರಿಕದೊಂದಿಗಿನ ವ್ಯಾಪಾರ ಮತ್ತು ಸುಂಕ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಕೇಂದ್ರ ಸರ್ಕಾರ “ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು” ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ. ಯುಎಸ್ ಸುಂಕಗಳು 2025ರ ಮೊದಲು ಸರಾಸರಿ ಶೇ. 3 ಇದ್ದುದು ಈ ತಿಂಗಳ ಒಪ್ಪಂದದ ಅಡಿಯಲ್ಲಿ ಶೇ. 18ಕ್ಕೆ ಏರಿದೆ ಎಂದು ರಾಹುಲ್ ಗಾಂಧಿ (Rahul Gandhi) ಆರೋಪಿಸಿದ್ದಾರೆ.

ಅಮೆರಿಕದ ಸರಕುಗಳನ್ನು ಭಾರತದೊಳಗೆ ಪ್ರವೇಶಿಸಲು ಅನುಮತಿಸುವ ಮೂಲಕ ಭಾರತ-ಯುಎಸ್ ವ್ಯಾಪಾರ ಒಪ್ಪಂದವು ಕೋಟ್ಯಂತರ ರೈತರ, ವಿಶೇಷವಾಗಿ ಸಣ್ಣ ಅಥವಾ ಕನಿಷ್ಠ ಹಿಡುವಳಿಗಳನ್ನು ಹೊಂದಿರುವವರ ಜೀವನೋಪಾಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ

“ನೀವು ಭಾರತವನ್ನು ಮಾರಾಟ ಮಾಡಿದ್ದೀರಿ. ಭಾರತವನ್ನು ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ನಮ್ಮ ರೈತರು ಬಿರುಗಾಳಿಯನ್ನು ಎದುರಿಸುತ್ತಿದ್ದಾರೆ. ನೀವು ನಮ್ಮ ಬಡ ರೈತರನ್ನು ಹತ್ತಿಕ್ಕಲು ಬಾಗಿಲು ತೆರೆದಿದ್ದೀರಿ. ಈ ಹಿಂದೆ ಯಾವುದೇ ಪ್ರಧಾನಿ ಎಂದಿಗೂ ಈ ರೀತಿ ಮಾಡಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಇದು ಸಂಪೂರ್ಣ ಶರಣಾಗತಿ. ದುರಂತವೆಂದರೆ ಇದು ಪ್ರಧಾನಿಯೊಬ್ಬರ ಶರಣಾಗತಿಯಲ್ಲ. ಅವರು 1.5 ಬಿಲಿಯನ್ ಭಾರತೀಯರ ಭವಿಷ್ಯವನ್ನು ಶರಣಾಗಿಸಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Wed, 11 February 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!