ಸೇನಾ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ರಕ್ಷಣಾ ಇಲಾಖೆಯ ಸಿಬ್ಬಂದಿ ಬಂಧನ

Soldier Recruitment Exam: ಈ ಪ್ರಕರಣವನ್ನು ಅತಿ ದೊಡ್ಡ ಹಗರಣವೆಂದು ವ್ಯಾಖ್ಯಾನಿಸಲಾಗಿದ್ದು, ಇದೇ ತೆರನಾದ ಎರಡು ಪ್ರಕರಣಗಳಲ್ಲಿ ಒಟ್ಟು 10 ಜನರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

ಸೇನಾ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ರಕ್ಷಣಾ ಇಲಾಖೆಯ ಸಿಬ್ಬಂದಿ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 7:19 PM

ಚೆನ್ನೈ: ಸೇನಾ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ತಮಿಳುನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಕ್ಷಣಾ ಇಲಾಖೆಯ ಮುಖ್ಯ ಹುದ್ದೆಯಲ್ಲಿದ್ದ ಸಿಬ್ಬಂದಿಯನ್ನು ಶನಿವಾರ ಬಂಧಿಸಲಾಗಿದೆ. ಸೇನಾ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪುಣೆ ನಗರ ಪೊಲೀಸ್ ಹಾಗೂ ಮಿಲಿಟರಿ ಇಂಟಲಿಜೆನ್ಸ್ ನಡೆಸಿದ ತನಿಖೆಯಲ್ಲಿ ಈ ಅಕ್ರಮಕ್ಕೆ ಕಾರಣರಾದವರ ಹೆಸರು ಬೆಳಕಿಗೆ ಬಂದಿದೆ. ಈ ವಿಷಯವನ್ನು ಪುಣೆ ಪೊಲೀಸ್ ಕಮಿಷನರ್​ ಅಮಿತಾಭ್ ಗುಪ್ತಾ ಸ್ಪಷ್ಟಪಡಿಸಿದ್ದು, ಹಗರಣದಲ್ಲಿ ಪಾಲ್ಗೊಂಡ ಅಧಿಕಾರಿಯನ್ನು ಬಂಧನದಲ್ಲಿಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಪ್ರಕರಣವನ್ನು ಅತಿ ದೊಡ್ಡ ಹಗರಣವೆಂದು ವ್ಯಾಖ್ಯಾನಿಸಲಾಗಿದ್ದು, ಇದೇ ತೆರನಾದ ಎರಡು ಪ್ರಕರಣಗಳಲ್ಲಿ ಒಟ್ಟು 10 ಜನರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ. ಈ ಮೂಲಕ ಸೇನೆಯ ಸಾಮಾನ್ಯ ಪ್ರವೇಶಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಫೆಬ್ರವರಿಯಿಂದಲೂ ತನಿಖೆ ನಡೆಸುತ್ತಿದ್ದ ಅಧಿಕಾರಿಗಳು ಕೊನೆಗೂ ಅಕ್ರಮದ ಮೂಲ ಪತ್ತೆ ಮಾಡಿದ್ದಾರೆ. ಫೆಬ್ರವರಿ 28ರಂದು ನಡೆಯಬೇಕಾಗಿದ್ದ ಸದರಿ ಪರೀಕ್ಷೆ ಇದೇ ಕಾರಣದಿಂದ ಮುಂದೂಡಲ್ಪಟ್ಟಿದ್ದು, ಈಗ ಭದ್ರತಾ ಸಿಬ್ಬಂದಿಯೇ aಕ್ರಮದ ಭಾಗಿಯಾಗಿದ್ದಾರೆ ಎನ್ನುವ ವಿಚಾರ ಸಂಚಲನ ಮೂಡಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ನಂತರ ಪುಣೆಯ ವಾನವಾಡಿ ಮತ್ತು ವಿಶ್ರಾಂತ್​ವಾಡಿ ಪೊಲೀಸ್​ ಠಾಣೆಗಳಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಪ್ರತ್ಯೇಕ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ವಿಶ್ರಾಂತ್​ವಾಡಿ ಪೊಲೀಸ್​ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ನಿವೃತ್ತ ಸೇನಾ ಅಧಿಕಾರಿ ಸೇರಿದಂತೆ ಮೂವರ ಬಂಧನವಾಗಿದ್ದರೆ, ವಾನವಾಡಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಸೇವೆಯಲ್ಲಿದ್ದ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ.

ಈ ಸಂಬಂಧ ಮಾತನಾಡಿರುವ ಸೇನಾ ಸಿಬ್ಬಂದಿ ಮುಂದಿನ ದಿನಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಸೋರಿಕೆಗೆ ಅವಕಾಶವಿಲ್ಲದಂತೆ ಏರ್ಪಡಿಸುವ ಬಗ್ಗೆ ಆಲೋಚನೆ ನಡೆಸುತ್ತಿದ್ದಾರೆ. ಅಲ್ಲದೇ, ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸೇನೆಯು ಆಂತರಿಕ ತನಿಖೆಯನ್ನೂ ನಡೆಸಿ ಹೆಚ್ಚಿನ ಮಾಹಿತಿ ಕಲೆಹಾಕಲು ನಿರ್ಧರಿಸಿದೆ.

ಇದನ್ನೂ ಓದಿ: JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಇದನ್ನೂ ಓದಿ: Toolkit Case: ದಿಶಾ ರವಿ ಪ್ರಕರಣದ ಖಾಸಗಿ ಚಾಟ್ ಸೋರಿಕೆ ಮಾಡದಂತೆ ಮಾಧ್ಯಮಗಳಿಗೆ ದೆಹಲಿ ಹೈಕೋರ್ಟ್ ನೋಟೀಸ್

Published On - 8:04 pm, Mon, 8 March 21

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’