Razia Sultana ನವಜೋತ್ ಸಿಂಗ್ ಸಿಧುಗೆ ಬೆಂಬಲ ಸೂಚಿಸಿ ಸಚಿವ ಸ್ಥಾನಕ್ಕೆ ರಜಿಯಾ ಸುಲ್ತಾನಾ ರಾಜೀನಾಮೆ

Punjab Politics ರಜಿಯಾ ಸುಲ್ತಾನಾ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ "ನವಜೋತ್ ಸಿಂಗ್ ಸಿಧುಗೆ ಬೆಂಬಲ ಸೂಚಿಸಿ" ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.

Razia Sultana ನವಜೋತ್ ಸಿಂಗ್ ಸಿಧುಗೆ ಬೆಂಬಲ ಸೂಚಿಸಿ ಸಚಿವ ಸ್ಥಾನಕ್ಕೆ ರಜಿಯಾ ಸುಲ್ತಾನಾ ರಾಜೀನಾಮೆ
ರಜಿಯಾ ಸುಲ್ತಾನಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 28, 2021 | 7:18 PM

ಚಂಡೀಗಢ: ಪಂಜಾಬ್ ಸಚಿವೆ ರಜಿಯಾ ಸುಲ್ತಾನಾ (Razia Sultana)ಮಂಗಳವಾರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದರು. ನವಜೋತ್ ಸಿಂಗ್ ಸಿಧು (Navjot Singh Sidhu) ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ರಜಿಯಾ ಸುಲ್ತಾನಾ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ “ನವಜೋತ್ ಸಿಂಗ್ ಸಿಧುಗೆ ಬೆಂಬಲ ಸೂಚಿಸಿ” ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ಚರಣ್​​ಜಿ​ತ್ ಸಿಂಗ್ ಚನ್ನಿ ನೇತೃತ್ವದ ಪಂಜಾಬ್ ಕ್ಯಾಬಿನೆಟ್‌ನಲ್ಲಿ ನೀರು ಸರಬರಾಜು ಮತ್ತು ನೈರ್ಮಲ್ಯ, ಸಾಮಾಜಿಕ ಭದ್ರತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮುದ್ರಣ ಮತ್ತು ಸ್ಟೇಷನರಿ ವಿಭಾಗಗಳ ಹೊಣೆಯನ್ನು ರಜಿಯಾ ಅವರಿಗೆ ನೀಡಲಾಗಿತ್ತು.

ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮದವರಲ್ಲಿ ಮಾತನಾಡಿದ ರಜಿಯಾ ಸಿಧು ಸಾಹಬ್ ಸಿದ್ಧಾಂತಗಳ ವ್ಯಕ್ತಿ. ಅವರು ಪಂಜಾಬ್ ಮತ್ತು ಪಂಜಾಬಿಯತ್​​ಗಾಗಿ  ಹೋರಾಡುತ್ತಿದ್ದಾರೆ ಎಂದಿದ್ದಾರೆ.

55 ವರ್ಷದ ರಜಿಯಾ ಸುಲ್ತಾನಾ ಅವರು 2002 ರಲ್ಲಿ ಮೊದಲ ಬಾರಿಗೆ ಪಂಜಾಬ್ ವಿಧಾನ ಸಭೆಗೆ ಆಯ್ಕೆಯಾದರು ನಂತರ 2007 ರಲ್ಲಿ ಮತ್ತು 2017 ರಲ್ಲಿ ಮತ್ತೆ ಆಯ್ಕೆಯಾಗಿದ್ದರು.

ರಜಿಯಾ ಅವರ ರಾಜೀನಾಮೆ ನಿರ್ಧಾರವನ್ನು ಅವರ ಪತಿ ಮೊಹಮ್ಮದ್ ಮುಸ್ತಫಾ ಶ್ಲಾಘಿಸಿದ್ದಾರೆ. ಕಾಂಗ್ರೆಸ್ ಮತ್ತು ನಾಯಕತ್ವದ ಹಿತಾಸಕ್ತಿಗಾಗಿ ನನ್ನ ಪತ್ನಿ ರಜಿಯಾ ಸುಲ್ತಾನಾ ತೆಗೆದುಕೊಂಡ ಸೂಕ್ತ ನಿರ್ಧಾರವನ್ನು ನಾನು ಶ್ಲಾಘಿಸುತ್ತೇನೆ ಎಂದು ಮುಸ್ತಫಾ ಟ್ವೀಟ್ ಮಾಡಿದ್ದಾರೆ. ಸಿಧು ಅವರ ಸಲಹೆಗಾರರಾಗಿದ್ದಾರೆ ಮುಸ್ತಫಾ.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು ರಾಜೀನಾಮೆಗೆ ಕಾರಣವೇನು?: ಪಂಜಾಬ್ ರಾಜಕೀಯದಲ್ಲಿನ ಪ್ರಮುಖ ಬೆಳವಣಿಗೆಗಳು ಇಲ್ಲಿವೆ

ಇದನ್ನೂ ಓದಿ: Navjot Singh Sidhu ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

(Solidarity with Navjot Singh Sidhu Punjab Minister Razia Sultana resigned from the Cabinet)

Published On - 6:59 pm, Tue, 28 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ