IndiGo Emergency Landing: ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ
ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಮಂಗಳವಾರ ಬೆಳಗ್ಗೆ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾಹಿತಿ ನೀಡಿದೆ.
ಬೆಂಗಳೂರಿನಿಂದ ಹೊರಟಿದ್ದ ವಿಮಾನ ಸಂಖ್ಯೆ 6E897 ಇಂದು ಬೆಳಗ್ಗೆ 6.15ಕ್ಕೆ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದಾಗ 137 ಪ್ರಯಾಣಿಕರಿದ್ದರು. ANI ವರದಿಗಳ ಪ್ರಕಾರ ಎಲ್ಲಾ 137 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು DGCA ಮಾಹಿತಿ ನೀಡಿದೆ.
ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸ್ವೀಡನ್ನಲ್ಲಿ ತುರ್ತು ಭೂಸ್ಪರ್ಶ
137 ಪ್ರಯಾಣಿಕರಿದ್ದ ಬೆಂಗಳೂರಿನಿಂದ ವಾರಾಣಸಿ ತೆರಳುತ್ತಿದ್ದ ಇಂಡಿಗೋ ವಿಮಾನ (6E897) ತಾಂತ್ರಿಕ ಸಮಸ್ಯೆಯಿಂದಾಗಿ ಇಂದು ಬೆಳಗ್ಗೆ 6.15ಕ್ಕೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಭಾರತೀಯ ನಾಗರಿಕ ವಿಮಾನಯಾನ ನಿಯಂತ್ರಕ ತಿಳಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:03 am, Tue, 4 April 23