ಡ್ಯಾನ್ಸ್ ಮಾಡುತ್ತಿದ್ದಾಗ ಮಗನ ಸಾವು, ಅದೇ ಶಾಕ್​ನಲ್ಲಿ ಹೃದಯಾಘಾತದಿಂದ ಅಪ್ಪ ಸಹ ಸಾವು

ಮಗ ಕಾರ್ಯಕ್ರಮವೊಂದರಲ್ಲಿ ಹೈ ಎನರ್ಜಿಯಿಂದ ಸಖತ್​ ಡ್ಯಾನ್ಸ್​ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬೀಳುತ್ತಾನೆ. ಆದರೆ ತಕ್ಷಣ ಅಲ್ಲೇ ಇದ್ದ ಅಪ್ಪ, 66 ವರ್ಷದ ನಾರಪ್​ಜಿ ಸೋನಿಗ್ರಾ ಅವರು ತಮ್ಮ ಮಗನನ್ನು ಆಸ್ಪತ್ರೆಗೆ ಸಾಗಿಸುತ್ತಾರೆ.

ಡ್ಯಾನ್ಸ್ ಮಾಡುತ್ತಿದ್ದಾಗ ಮಗನ ಸಾವು, ಅದೇ ಶಾಕ್​ನಲ್ಲಿ ಹೃದಯಾಘಾತದಿಂದ ಅಪ್ಪ ಸಹ ಸಾವು
ಡ್ಯಾನ್ಸ್ ಮಾಡುತ್ತಿದ್ದಾಗ ಮಗನ ಸಾವು, ಅದೇ ಶಾಕ್​ನಲ್ಲಿ ಹೃದಯಾಘಾತದಿಂದ ಅಪ್ಪ ಸಹ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 04, 2022 | 12:37 PM

ಮಹಾರಾಷ್ಟ್ರ: ಇದು ನಿಜಕ್ಕೂ ದುರದೃಷ್ಟಕರ! ಡ್ಯಾನ್ಸ್ ಮಾಡುತ್ತಿದ್ದಾಗ ಮಗ ಕುಸಿದುಬಿದ್ದು ಸಾವಿನತ್ತ ಮುಖ ಮಾಡುತ್ತಾನೆ. ಆದರೆ ಅಲ್ಲೇ ಇಲ್ಲ ತಂದೆ ಆ ಮಗನನ್ನು ಆಸ್ಪತ್ರೆಗೆ ಸಾಗಿಸುತ್ತಾರೆ. ಆದರೆ ಈ ಮಧ್ಯೆ ಅದೇ ಶಾಕ್​ನಲ್ಲಿ ಅಪ್ಪನಿಗೆ ಹೃದಯಾಘಾತವಾಗಿ ಸಾವಿಗೀಡಾಗುತ್ತಾರೆ.

ಹೌದು ಮಗ ಕಾರ್ಯಕ್ರಮವೊಂದರಲ್ಲಿ ಹೈ ಎನರ್ಜಿಯಿಂದ ಸಖತ್​ ಡ್ಯಾನ್ಸ್​ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬೀಳುತ್ತಾನೆ. ಆದರೆ ತಕ್ಷಣ ಅಲ್ಲೇ ಇದ್ದ ಅಪ್ಪ, 66 ವರ್ಷದ ನಾರಪ್​ಜಿ ಸೋನಿಗ್ರಾ ಅವರು ತಮ್ಮ ಮಗನನ್ನು ಆಸ್ಪತ್ರೆಗೆ ಸಾಗಿಸುತ್ತಾರೆ. ಆ ವೇಳೆಗೆ ಮಗ ಸತ್ತಿರುತ್ತಾನೆ. ಇನ್ನು ಹೃದಯಾಘಾತಕ್ಕೀಡಾದ ಅಪ್ಪ ಕುಸಿದ್ದು ಬಿದ್ದಾಗ ವೈದ್ಯರು ಪರೀಕ್ಷಿಸುತ್ತಾರೆ. ಆದರೆ ಆ ವೇಳೆಗೆ ಅಪ್ಪ ಅಸುನೀಗಿರುತ್ತಾರೆ.

ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದ ಯುವಕನ ಸಾವು; ಮೊಬೈಲ್​ನಲ್ಲಿ ಸೆರೆಯಾಗಿತ್ತು ಶಾಕಿಂಗ್ ವಿಡಿಯೋ

ಅಹಮದಾಬಾದ್: ಗುಜರಾತ್‌ನ (Gujarat) ಆನಂದ್ ಜಿಲ್ಲೆಯಲ್ಲಿ ನವರಾತ್ರಿ ಪ್ರಯುಕ್ತ ವೇದಿಕೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದ 21 ವರ್ಷದ ವೀರೇಂದ್ರ ಎಂಬ ವ್ಯಕ್ತಿಯೊಬ್ಬರು ನೃತ್ಯ ಮಾಡುವಾಗಲೇ ಹೃದಯಾಘಾತದಿಂದ (Heart Attack) ಕುಸಿದು ಬಿದ್ದಿದ್ದಾರೆ. ಗರ್ಬಾ ನೃತ್ಯ (Garba Dance) ಮಾಡುವಾಗ ಆನಂದ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತಾರಾಪುರದ ಶಿವಶಕ್ತಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೀರೇಂದ್ರ ಸಿಂಗ್ ರಮೇಶ್ ಭಾಯಿ ರಜಪೂತ್ ಅವರು ಗರ್ಬಾ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಈ ಇಡೀ ಘಟನೆಯನ್ನು ಆತನ ಸ್ನೇಹಿತ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನವರಾತ್ರಿ ಪ್ರಯುಕ್ತ ಈ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಹೃದಯಾಘಾತದಿಂದ ಕುಸಿದುಬಿದ್ದ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವೀರೇಂದ್ರ ಸಿಂಗ್ ಮೃತಪಟ್ಟಿದ್ದಾರೆ. ವೈದ್ಯರ ಪ್ರಕಾರ, ಅವರಿಗೆ ಹಠಾತ್ತಾಗಿ ಹೃದಯಾಘಾತ ಉಂಟಾಗಿದ್ದು, ಇದೇ ಕಾರಣದಿಂದ ಅವರು ನಿಧನರಾಗಿದ್ದಾರೆ. ವೀರೇಂದ್ರ ಅವರ ತಂದೆ ಗುಜರಾತ್‌ನ ಮೊರಾಜ್ ಗ್ರಾಮದ ಶಾಲೆಯೊಂದರಲ್ಲಿ ಪ್ರಾಂಶುಪಾಲರಾಗಿದ್ದಾರೆ.

ವೇದಿಕೆಯಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದ ಕಲಾವಿದ

ಶ್ರೀನಗರ: ಜಮ್ಮುವಿನಲ್ಲಿ ಯೋಗೇಶ್ ಗುಪ್ತಾ (Yogesh Gupta) ಎಂಬ ರಂಗ ಕಲಾವಿದ ವೇದಿಕೆಯಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ಬುಧವಾರ ಜಮ್ಮುವಿನ ಬಿಷ್ನಾಹ್ ಪ್ರದೇಶದಲ್ಲಿ ಹೃದಯಾಘಾತದಿಂದ (Heart Attack) ವೇದಿಕೆಯ ಮೇಲೆ ಪ್ರದರ್ಶನ ನೀಡುತ್ತಿದ್ದಾಗ ಕಲಾವಿದ ಸಾವನ್ನಪ್ಪಿದ್ದಾರೆ. ಜಮ್ಮುವಿನ ಕೋಥೇ ಗ್ರಾಮದಲ್ಲಿ ಗಣೇಶ ಉತ್ಸವ ಕಾರ್ಯಕ್ರಮದ ವೇಳೆ ನೃತ್ಯ ಪ್ರದರ್ಶನ ನೀಡುತ್ತಿದ್ದ ವೇಳೆ 20 ವರ್ಷದ ಕಲಾವಿದ ಕುಸಿದು ಬಿದ್ದಿದ್ದಾರೆ.

ಈ ವಿಡಿಯೋ ಕ್ಲಿಪ್‌ನಲ್ಲಿ, ಕಲಾವಿದ ಯೋಗೇಶ್ ಮಹಿಳೆಯಂತೆ ವೇಷ ಧರಿಸಿ ನೃತ್ಯ ಮಾಡುತ್ತಿದ್ದರು. ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಮುಂದೆ ನೃತ್ಯ ಮಾಡುತ್ತಿರುವಾಗಲೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಪ್ರದರ್ಶನ ಮಾಡುವಾಗ, ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅವರು ಆ ನಾಟಕದಲ್ಲಿ ತಮ್ಮ ಪಾತ್ರ ಮಾಡುತ್ತಾ ಕೆಳಗೆ ಬಿದ್ದಿರಬಹುದು ಎಂದು ಪ್ರೇಕ್ಷಕರು ಭಾವಿಸಿದ್ದರು. ಆದರೆ, ಕೆಳಗೆ ಬಿದ್ದ ಕಲಾವಿದ ಎಷ್ಟು ಹೊತ್ತಾದರೂ ಏಳದಿದ್ದಾಗ ಅವರು ಪ್ರಜ್ಞೆ ತಪ್ಪಿ ಬಿದ್ದಿರುವುದು ಗೊತ್ತಾಗಿದೆ.

ಈ ಹಿಂದೆ, ಖ್ಯಾತ ಬಾಲಿವುಡ್ ಗಾಯಕ ಕೆಕೆ ಅವರು ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದಾಗ ಕುಸಿದುಬಿದ್ದ ನಿಧನರಾಗಿದ್ದರು. ಮಲಯಾಳಂ ಗಾಯಕ ಎಡವ ಬಶೀರ್ ಕೂಡ ಮೇ 28ರಂದು ಶೋ ವೇಳೆ ವೇದಿಕೆಯ ಮೇಲೆ ಕುಸಿದು ಬಿದ್ದು ಮೃತಪಟ್ಟಿದ್ದರು.

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ