AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ. ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ. ವಿಡಿಯೋ ನೋಡಿ:  https://www.youtube.com/watch?v=KlTjN4nXHL4 ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ […]

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 22, 2019 | 5:00 PM

Share

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ.

ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ.

ವಿಡಿಯೋ ನೋಡಿ:  https://www.youtube.com/watch?v=KlTjN4nXHL4

ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ ಸಹಾಯ ಮಾಡಿ ಎಂದು ಆತ ಶವವನ್ನು ಹೊತ್ತುಕೊಂಡೆ, ಅಲ್ಲಿದ್ದವರನ್ನ ಬೇಡಿಕೊಂಡಿದ್ದಾನೆ. ಕೊನೆಗೆ ಗ್ರಾಮಸ್ಥರೊಬ್ಬರ ಸಹಾಯದಿಂದ, ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಬಡ ಜನರಿಗಾಗಿ ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಸ್ಮಶಾನಕ್ಕೆ ಸಾಗಿಸಲು‌ ವಾಹನ ವ್ಯವಸ್ಥೆ ಮಾಡಬೇಕು. ಅಂತ್ಯಸಂಸ್ಕಾರ ಮಾಡಲು ಸಹ ಶಕ್ತಿ ಇಲ್ಲದ ಬಡ ಜನರಿಗೆ ನೆರವಾಗುವಂತಹ ಯೋಜನೆಯನ್ನು ಸರಕಾರದಿಂದ‌ ಒದಗಿಸಬೇಕು ಎಂದು ಸುರೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On - 2:28 pm, Thu, 21 November 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್