AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ತನಗೆ ಹೇಳಿರುವನೆಂದು ಕಿರುತೆರೆ ನಟನೊಬ್ಬನ ಮಗ ಮುಂಬೈ ಪೊಲೀಸರಿಗೆ ದೂರಿದ್ದಾರೆ!

ಪೊಲೀಸರು ರೆಕಾರ್ಡ್ ಮಾಡಿಕೊಂಡಿರುವ ಹೇಳಿಕೆಯಲ್ಲಿ ನಟನ ಮಗ ಬೆದರಿಕೆ ಹಾಕಿದ ವ್ಯಕ್ತಿ ವಿಡಿಯೊ ಚ್ಯಾಟ್  ಆ್ಯಪ್ ಮೂಲಕ ತನ್ನ ಸಂಪರ್ಕಕ್ಕೆ ಬಂದನೆಂದು ಹೇಳಿದ್ದಾರೆ.

ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ತನಗೆ ಹೇಳಿರುವನೆಂದು ಕಿರುತೆರೆ ನಟನೊಬ್ಬನ ಮಗ ಮುಂಬೈ ಪೊಲೀಸರಿಗೆ ದೂರಿದ್ದಾರೆ!
ಮುಂಬೈ ಪೊಲೀಸ್​​
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Nov 21, 2021 | 12:37 AM

Share

ಮುಂಬೈ: ಹಿಂದಿ ಕಿರುತೆರೆಯ ನಟರೊಬ್ಬರ ಮಗ ಶನಿವಾರ ಬೆಳಗಿನ ಜಾವ ಮದ್ಯದ ಅಮಲಿನಲ್ಲಿ ಮುಂಬೈ ಮಹಾನಗರದ ಪೊಲೀಸ್ ಕಂಟ್ರೋಲ್ ರೂಮಿಗೆ ಫೋನ್ ಮಾಡಿ ತನ್ನೊಂದಿಗೆ ವಿಡಿಯೋ ಚಾಟ್ ನಲ್ಲಿ ಮಾತಾಡುತ್ತಿದ್ದ ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಅಂತ ದೂರಿದ್ದಾರೆ. ಪೊಲೀಸರು ಅವರ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಟನ 26-ವರ್ಷ ವಯಸ್ಸಿನ ಮಗ ಅಂಧೇರಿಯ ವರ್ಮ ನಗರದಲ್ಲಿ ವಾಸವಾಗಿದ್ದಾರೆ. ಶುಕ್ರವಾರ ತಡರಾತ್ರಿ ತಾನು ಮದ್ಯ ಸೇವಿಸಿದ್ದ ವಿಷಯವನ್ನು ಅವರು ಪೋಲಿಸರಿಗೆ ಬಹಿರಂಗಪಡಿಸಿದ್ದಾರೆ.

ಪೊಲೀಸರು ರೆಕಾರ್ಡ್ ಮಾಡಿಕೊಂಡಿರುವ ಹೇಳಿಕೆಯಲ್ಲಿ ನಟನ ಮಗ ಬೆದರಿಕೆ ಹಾಕಿದ ವ್ಯಕ್ತಿ ವಿಡಿಯೊ ಚ್ಯಾಟ್  ಆ್ಯಪ್ ಮೂಲಕ ತನ್ನ ಸಂಪರ್ಕಕ್ಕೆ ಬಂದನೆಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ವಿಶ್ವಕಪ್ ಪಂದ್ಯದ ಬಗ್ಗೆ ಅವರ ನಡುವೆ ಸಂಭಾಷಣೆ ಆರಂಭವಾದ ಬಳಿಕ ಅವನು ಭಾರತ ಪಂದ್ಯ ಸೋತ ಬಗ್ಗೆ ಪದೇಪದೆ ಮೂದಲಿಸಿದನಂತೆ. ಆಗ ಕೋಪಗೊಂಡ ಇವರು ಅವನನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡರಂತೆ.

ಅದಾದ ನಂತರವೇ ಆ ವ್ಯಕ್ತಿ ಮುಂಬೈನಲ್ಲಿ ಬಾಂಬ್ ಗಳನ್ನು ಸ್ಫೋಟಿಸುವ ಬೆದರಿಕೆ ಹಾಕಿದನಂತೆ. ಆದರೆ ಎಲ್ಲಿ, ಯಾವಾಗ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲವಂತೆ.

ಅವನೊಂದಿಗೆ ಸಂಭಾಷಣೆ ಕೊನೆಗೊಂಡ ನಂತರ ಅಂದರೆ ಶನಿವಾರದ ಬೆಳಗಿನ ಜಾವ ನಟನ ಮಗ ಪೊಲೀಸ್ ಕಂಟ್ರೋಲ್ ರೂಮಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸ್ ತಂಡವೊಂದು ಅವರ ಮನೆಗೆ ತೆರಳಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಇದನ್ನೂ ಓದಿ:  ಮುಂಬಯಿಯಲ್ಲಿ ಗುರುವಾರದಿಂದ ಗರ್ಭಿಣಿ ಮಹಿಳೆಯರಿಗೂ ಕೊವಿಡ್​ ಲಸಿಕೆ ನೀಡುವ ಅಭಿಯಾನ ಆರಂಭ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ