AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು

Sonam Wangchuk Hospitalized: ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣವೂ ನಿರ್ಮಾಣವಾಯಿತು.

20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು
ಸೋನಮ್ ವಾಂಗ್ಚುಕ್ ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದರುImage Credit source: PTI
ಗಣಪತಿ ಶರ್ಮಾ
|

Updated on:Jul 18, 2026 | 10:24 AM

Share

ಮುಖ್ಯಾಂಶಗಳು

  • 20 ದಿನಗಳ ಉಪವಾಸದ ಬಳಿಕ ಆಸ್ಪತ್ರೆಗೆ ದಾಖಲು
  • ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ಕ್ರಮ
  • ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು-ಪೊಲೀಸರ ನಡುವೆ ಗೊಂದಲ

ನವದೆಹಲಿ, ಜುಲೈ 18: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್ (Sonam Wangchuk) ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಜ್ಞೆಯಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಹೈಕೋರ್ಟ್ ನಿರ್ದೇಶನ ಹಾಗೂ ವೈದ್ಯಕೀಯ ತಜ್ಞರ ಸಲಹೆಯಂತೆ ವಾಂಗ್ಚುಕ್ ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಾಗಿದ್ದರಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೆಲ ಪ್ರತಿಭಟನಾಕಾರರು ಪೊಲೀಸರ ಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಗೊಂದಲ ಉಂಟಾಯಿತು. ಆದರೆ, ಸಂಪೂರ್ಣ ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನಾಕಾರರ ಮೇಲೆ ಬಲಪ್ರಯೋಗದ ಆರೋಪ

ಇನ್ನೊಂದೆಡೆ, ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಘಟನೆಯ ಮುಖಂಡರು ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ನಡೆಸಲಾಗಿದೆ. ಲಾಠಿ ಚಾರ್ಜ್ ಮಾಡಲಾಗಿದೆ ಮತ್ತು ವಾಂಗ್ಚುಕ್ ಅವರನ್ನು ಬಲವಂತವಾಗಿ ಕರೆದೊಯ್ಯಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ಲಾಠಿ ಚಾರ್ಜ್ ಮಾಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿರುವುದೇಕೆ?

ನೀಟ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಜೂನ್ 20ರಿಂದ ಪ್ರತಿಭಟನೆ ನಡೆಯುತ್ತಿದೆ. ಸೋನಮ್ ವಾಂಗ್ಚುಕ್ ಜೂನ್ 28 ರಿಂದ ಈ ಹೋರಾಟದಲ್ಲಿ ತೊಡಗಿಕೊಂಡಿದ್ದು, ಅಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದಾರೆ.

ಹೋರಾಟಗಾರರ ಬೇಡಿಕೆ ಏನು?

ಪರೀಕ್ಷಾ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

ಇದನ್ನೂ ಓದಿ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರಿಸಿದರೆ ಏನಾಗುತ್ತದೆ? ಸರ್ಕಾರ ಬಲವಂತವಾಗಿ ಆಹಾರ ನೀಡಬಹುದೇ?

ಉಪವಾಸದ 20ನೇ ದಿನ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ವಾಂಗ್ಚುಕ್, ತಮ್ಮ ದೇಹದ ತೂಕ ಮತ್ತು ಶಕ್ತಿ ಗಣನೀಯವಾಗಿ ಕುಸಿದಿರುವುದಾಗಿ ಹೇಳಿದ್ದರು. ಇದೇ ವೇಳೆ ಜುಲೈ 20ರಂದು ಸಂಸತ್‌ ಚಲೋ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದರು. ಜನರ ಬೆಂಬಲವೇ ಈ ಹೋರಾಟದ ನಿಜವಾದ ಶಕ್ತಿ ಎಂದು ಅವರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Sat, 18 July 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ