ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ಸೋನಿಯಾ ದಾಖಲು

ಹೊಟ್ಟೆನೋವು, ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನ ದೆಹಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ದೆಹಲಿಯಲ್ಲಿಂದು ಮೋದಿ ಱಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪೂರ್ವ ದೆಹಲಿಯ ಕರಕೂರಡೂಮಾದಲ್ಲಿಂದು ಪ್ರಧಾನಿ ಮೋದಿ ಮೊದಲ ಱಲಿ ನಡೆಸಲಿದ್ದಾರೆ. ನಾಳೆ ದ್ವಾರಕಾ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, 11ನೇ ತಾರೀಖು ಫಲಿತಾಂಶ […]

ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ಸೋನಿಯಾ ದಾಖಲು
ಸಾಧು ಶ್ರೀನಾಥ್​

Updated on: Feb 03, 2020 | 6:58 AM

ಹೊಟ್ಟೆನೋವು, ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನ ದೆಹಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.

ದೆಹಲಿಯಲ್ಲಿಂದು ಮೋದಿ ಱಲಿ:
ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪೂರ್ವ ದೆಹಲಿಯ ಕರಕೂರಡೂಮಾದಲ್ಲಿಂದು ಪ್ರಧಾನಿ ಮೋದಿ ಮೊದಲ ಱಲಿ ನಡೆಸಲಿದ್ದಾರೆ. ನಾಳೆ ದ್ವಾರಕಾ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, 11ನೇ ತಾರೀಖು ಫಲಿತಾಂಶ ಹೊರಬೀಳಲಿದೆ.

ಮೂರು ಕಚೇರಿಗಳು ಶಿಫ್ಟ್:
ಆಂಧ್ರಕ್ಕೆ 3 ರಾಜಧಾನಿ ಘೋಷಿಸಿದ್ದ ಸರ್ಕಾರ ಈಗ ಮತ್ತೊಂದು ತೀರ್ಮಾನ ಕೈಗೊಂಡಿದೆ. ಅಮರಾವತಿಯಿಂದ ವಿಚಾರಣಾ ಆಯುಕ್ತರು ಸೇರಿ 3ಕಚೇರಿಗಳನ್ನು ಕರ್ನೂಲ್‌ಗೆ ಸ್ಥಳಾಂತರಿಸಲು ಮುಂದಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆಡಳಿತದ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

ಮೋದಿ ವಿರುದ್ಧ ಮಾತಾಡಿದ್ರೆ ದೇಶದ್ರೋಹ ಪಟ್ಟ:
ಮೋದಿ ವಿರುದ್ಧ ಯಾರಾದರೂ ಮಾತನಾಡಿದರೆ ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗುತ್ತಿದೆ ಅಂತಾ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಅಲ್ದೆ, ಜೈಲ್ ಭರೋ ಆಂದೋಲನ ಪ್ರಾರಂಭಿಸುವ ಸಮಯ ಬರಲಿದ್ದು, ಜನ ರಸ್ತೆಗಿಳಿದ್ರೆ ಜೈಲುಗಳು ಸಾಕಾಗಲ್ಲ ಅಂತಾನೂ ವಾಗ್ದಾಳಿ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us