AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ಶೀಘ್ರದಲ್ಲೇ ಪ್ರಕಟವಾಗಲಿದೆ ಸೋನಿಯಾ ಗಾಂಧಿ ಆತ್ಮಕತೆ

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಕಥನ ಶೀಘ್ರದಲ್ಲೇ ಪ್ರಕಟವಾಗಲಿದ್ದು, ಇದರ ಕೆಲಸ ನಡೆಯುತ್ತಿದೆ. ಈಗಾಗಲೇ ಆತ್ಮಚರಿತ್ರೆಯ ಪುಸ್ತಕ ಪ್ರಕಟಣೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ವರದಿಗಳು ಹೇಳಿವೆ. ಹಲವು ವರ್ಷಗಳಿಂದ ಸೋನಿಯಾ ಗಾಂಧಿ ಆತ್ಮಚರಿತ್ರೆಯ ಕೆಲಸ ನಡೆಯುತ್ತಿದ್ದು, ಕೊನೆಗೂ ಅದು ಅಂತಿಮ ಹಂತ ತಲುಪಿದೆ. ಇದು ನೆಹರು ಕುಟುಂಬದ ಮೊದಲ ಸಮಗ್ರ ಆತ್ಮಕತೆಯಾಗಿದೆ.

Sonia Gandhi: ಶೀಘ್ರದಲ್ಲೇ ಪ್ರಕಟವಾಗಲಿದೆ ಸೋನಿಯಾ ಗಾಂಧಿ ಆತ್ಮಕತೆ
ಸೋನಿಯಾ ಗಾಂಧಿ
ಸುಷ್ಮಾ ಚಕ್ರೆ
|

Updated on:Oct 05, 2024 | 10:51 PM

Share

ನವದೆಹಲಿ: ಸೋನಿಯಾ ಗಾಂಧಿಯವರ ಆತ್ಮಚರಿತ್ರೆಯ ಕೆಲಸಗಳು ಹಲವು ವರ್ಷಗಳಿಂದ ನಡೆಯುತ್ತಿವೆ. ಕೊನೆಗೂ ಇದೀಗ ಅದು ಪ್ರಕಟಣೆಗೆ ಅಣಿಯಾಗಿದೆ. ಆದರೆ, ಆತ್ಮಕಥನದ ಪ್ರಕಟಣೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಸೋನಿಯಾ ಗಾಂಧಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾರ್ಪರ್‌ಕಾಲಿನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತ್ ಪದ್ಮನಾಭನ್ ಅವರು ಆಂಗ್ಲ ಪತ್ರಿಕೆಯೊಂದಕ್ಕೆ ಈ ವಿಷಯ ತಿಳಿಸಿದ್ದಾರೆ.

ಪೆಂಗ್ವಿನ್ ರಾಂಡಮ್ ಹೌಸ್ ಭಾರತದಲ್ಲಿ ಸೋನಿಯಾ ಗಾಂಧಿಯವರ ಆತ್ಮಕಥೆಯನ್ನು ಪ್ರಕಟಿಸಲಿದೆ. ಈ ಕುರಿತು ಅಧಿಕೃತ ಪ್ರಕಟಣೆಯಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು. ಇದು ನೆಹರೂ ಕುಟುಂಬದ ಮೊದಲ ಸಮಗ್ರ ಆತ್ಮಚರಿತ್ರೆಯಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿ ಹೆಚ್ಚಿಸುತ್ತೇವೆ; ಮಹಾರಾಷ್ಟ್ರದಲ್ಲಿ ರಾಹುಲ್ ಗಾಂಧಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಅನಿರೀಕ್ಷಿತವಾಗಿ ಕೊಲ್ಲಲ್ಪಟ್ಟ ಕಾರಣ ಅವರ ಜೀವನದ ಸಂಪೂರ್ಣ ಜೀವನ ಚರಿತ್ರೆಯನ್ನು ಬರೆಯಲು ಸಾಧ್ಯವಾಗಲಿಲ್ಲ. ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಲೇಖಕ ಪುಪುಲ್ ಜಯಕರ್ ಅವರ ‘ಇಂದಿರಾ ಗಾಂಧಿ: ಎ ಬಯಾಗ್ರಫಿ’, ಸೋನಿಯಾ ಗಾಂಧಿಯವರ ‘ರಾಜೀವ್’ ಮತ್ತು ನೆಹರೂ ಅವರ ‘ಆನ್ ಆಟೋಬಯೋಗ್ರಫಿ: ಟುವರ್ಡ್ ಫ್ರೀಡಂ’ ನೆಹರು-ಗಾಂಧಿ ಕುಟುಂಬದ ಈ ಹಿಂದೆ ಪ್ರಕಟವಾದ ಕೆಲವು ಪುಸ್ತಕಗಳು.

ಇದೇ ಡಿಸೆಂಬರ್‌ನಲ್ಲಿ 78ನೇ ವರ್ಷಕ್ಕೆ ಕಾಲಿಡುತ್ತಿರುವ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆಯ ಕುರಿತು ಇತ್ತೀಚಿನ ಮಾಹಿತಿ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Sat, 5 October 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ