ದೆಹಲಿ ಹಿಂಸಾಚಾರ ಪೂರ್ವಯೋಜಿತ: ಶಾ ರಾಜೀನಾಮೆಗೆ ಸೋನಿಯಾ ಒತ್ತಾಯ
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಕಳೆದ ಎರಡು ದಿನಗಳಿಂದ ಪ್ರತಿಭಟನಾಕಾರರ ಆಕ್ರೋಶಕ್ಕೆ 20ಕ್ಕೂ ಹೆಚ್ಚು ಜನ ದಾರುಣವಾಗಿ ಮೃತಪಟ್ಟಿದ್ದಾರೆ. ಕರ್ಫ್ಯೂ ನಡುವೆಯೂ ಮೌಜ್ಪುರ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಲವರು ಊರು ತೊರೆಯುತ್ತಿದ್ದಾರೆ. ಅಮಿತ್ ಶಾ ರಾಜೀನಾಮೆ ನೀಡಲಿ: ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ಹಿಂಸಾಚಾರ ಪೂರ್ವನಿಯೋಜಿತ ಕೃತ್ಯ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಜತೆ ಕಾಂಗ್ರೆಸ್ ಇರುತ್ತೆ. ಹಿಂಸಾಚಾರ […]
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಕಳೆದ ಎರಡು ದಿನಗಳಿಂದ ಪ್ರತಿಭಟನಾಕಾರರ ಆಕ್ರೋಶಕ್ಕೆ 20ಕ್ಕೂ ಹೆಚ್ಚು ಜನ ದಾರುಣವಾಗಿ ಮೃತಪಟ್ಟಿದ್ದಾರೆ. ಕರ್ಫ್ಯೂ ನಡುವೆಯೂ ಮೌಜ್ಪುರ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಲವರು ಊರು ತೊರೆಯುತ್ತಿದ್ದಾರೆ.
ಅಮಿತ್ ಶಾ ರಾಜೀನಾಮೆ ನೀಡಲಿ: ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ಹಿಂಸಾಚಾರ ಪೂರ್ವನಿಯೋಜಿತ ಕೃತ್ಯ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಜತೆ ಕಾಂಗ್ರೆಸ್ ಇರುತ್ತೆ. ಹಿಂಸಾಚಾರ ತಡೆಯಲು ಕೇಂದ್ರ ಹಾಗೂ ದೆಹಲಿ ಸರ್ಕಾರ ವಿಫಲವಾಗಿವೆ. ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದರ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಸೋನಿಯ ಗಾಂಧಿ ಆಗ್ರಹಿಸಿದ್ದಾರೆ.
ಹಿಂಸಾಚಾರದ ಹಿಂದೆ ಬಿಜೆಪಿ ಕೈವಾಡ ಇದೆ: ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿದ್ರು. ಆದ್ರೆ, ಬಿಜೆಪಿ ನಾಯಕರ ವಿರುದ್ಧ ಹಿಂಸಾಚಾರ ತಡೆಗಟ್ಟಲು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ, ಪೊಲೀಸರ ವೈಫಲ್ಯದಿಂದ ಹಿಂಸಾಚಾರ ನಡೆಯುತ್ತಿದೆ. ಇನ್ನು ಹಿಂಸಾಚಾರದ ಹಿಂದೆ ಬಿಜೆಪಿ ಕೈವಾಡ ಇದೆ. ಹಿಂಸಾಚಾರದ ವೇಳೆ ಕೇಂದ್ರ ಗೃಹ ಸಚಿವರು ಎಲ್ಲಿದ್ದರು? ಹಿಂಸಾಚಾರದ ವೇಳೆ ದೆಹಲಿ ಸಿಎಂ ಏನು ಮಾಡುತ್ತಿದ್ದರು? ಹಿಂಸಾಚಾರ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಇರಲಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಲಭೆ ಪೀಡಿತ ಪ್ರದೇಶಗಳಲ್ಲಿ ತಕ್ಷಣ ದೆಹಲಿ ಸಿಎಂ, ಗೃಹ ಸಚಿವರು ಭೇಟಿ ನೀಡಿ ಅಲ್ಲಿನ ನಿವಾಸಿಗಳಿಗೆ ಧೈರ್ಯ ತುಂಬಲಿ. ಹಾಗೇ ನಿವಾಸಿಗಳಿಗೆ ಭದ್ರತೆಯನ್ನು ಹೆಚ್ಚಿಸಬೇಕು ಎಂದು ಸೋನಿಯಾ ಗಾಂಧಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ನಾಳೆ ರಾಷ್ಟ್ರಪತಿ ಭವನಕ್ಕೆ ಕಾಂಗ್ರೆಸ್ ನಾಯಕರ ಪಾದಯಾತ್ರೆ: ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಕಾಂಗ್ರೆಸ್ ನಾಯಕರ ಪಾದಯಾತ್ರೆ ಹೊರಡಲು ತೀರ್ಮಾನಿಸಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲಿದ್ದಾರೆ.
Published On - 2:00 pm, Wed, 26 February 20