Sonia Gandhi: ರಾಜ್ಯಸಭೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ
ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಜತೆಗಿದ್ದರು.15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಏಪ್ರಿಲ್‌ನಲ್ಲಿ ನಿವೃತ್ತರಾಗುತ್ತಿದ್ದು, ಫೆಬ್ರವರಿ 27 ರಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ.
ದೆಹಲಿ ಫೆಬ್ರುವರಿ 14: ಸೋನಿಯಾ ಗಾಂಧಿ (Sonia Gandhi) ಮುಂಬರುವ ರಾಜ್ಯಸಭಾ ಚುನಾವಣೆಗೆ (Rajya sabha) ರಾಜಸ್ಥಾನದಿಂದ (Rajasthan) ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ ಜೈಪುರದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಜತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು. ಮಾಜಿ ಕಾಂಗ್ರೆಸ್ ಅಧ್ಯಕ್ಷರು ರಾಜಸ್ಥಾನದಿಂದ ಸಂಸತ್ತಿನ ಮೇಲ್ಮನೆಯಲ್ಲಿ ಕಾಂಗ್ರೆಸ್ ಅನ್ನು ಪ್ರತಿನಿಧಿಸುತ್ತಾರೆ. 1998 ಮತ್ತು 2022 ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ.
#WATCH | Jaipur | Congress Parliamentary Party Chairperson Sonia Gandhi files her nomination for the Rajya Sabha election, from Rajasthan.
Rahul Gandhi, Priyanka Gandhi Vadra, Ashok Gehlot and Govind Singh Dotasra are with her.
(Video: Rajasthan Vidhan Sabha PRO) pic.twitter.com/htQ5rSFOvV
— ANI (@ANI) February 14, 2024
ಕಾಂಗ್ರೆಸ್ ಪಕ್ಷ ರಾಜ್ಯದಿಂದ ಒಂದು ರಾಜ್ಯಸಭಾ ಸ್ಥಾನವನ್ನು ಗೆಲ್ಲುವುದು ಖಚಿತವಾಗಿದೆ. ಐದು ಬಾರಿ ಲೋಕಸಭೆ ಸಂಸದರಾಗಿ ಸೇವೆ ಸಲ್ಲಿಸಿದ ನಂತರ ಮೇಲ್ಮನೆಯಲ್ಲಿ 77 ರ ಹರೆಯದ ನಾಯಕಿ ಸೋನಿಯಾ ಅವರ ಮೊದಲ ಅವಧಿ ಆಗಿದೆ. ಲೋಕಸಭೆಯಲ್ಲಿ ರಾಯ್ ಬರೇಲಿಯನ್ನು ಪ್ರತಿನಿಧಿಸಿರುವ ಸೋನಿಯಾ ಗಾಂಧಿ ಅವರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು 1999 ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು.
15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಏಪ್ರಿಲ್‌ನಲ್ಲಿ ನಿವೃತ್ತರಾಗುತ್ತಿದ್ದು, ಫೆಬ್ರವರಿ 27 ರಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. ರಾಜಸ್ಥಾನದಿಂದ ಚುನಾವಣೆ ನಡೆಯಲಿರುವ ಮೂರು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಗೆಲ್ಲಲು ಕಾಂಗ್ರೆಸ್ ಅನುಕೂಲಕರವಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರು ವರ್ಷಗಳ ಅಧಿಕಾರಾವಧಿಯನ್ನು ಏಪ್ರಿಲ್‌ನಲ್ಲಿ ಪೂರ್ಣಗೊಳಿಸಿದ ನಂತರ ಸ್ಥಾನ ತೆರವಾಗಲಿದೆ.
ಅವರು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ಮೇಲ್ಮನೆ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ನಂತರ ರಾಜ್ಯಸಭೆಗೆ ಪ್ರವೇಶಿಸಿದ ಗಾಂಧಿ ಕುಟುಂಬದ ಎರಡನೇ ಸದಸ್ಯರಾಗಿದ್ದಾರೆ.
ಇದನ್ನೂ ಓದಿ:ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್, ರಾಜಸ್ಥಾನದಿಂದ ಸೋನಿಯಾ ಸ್ಪರ್ಧೆ
ಸೋನಿಯಾ ಗಾಂಧಿ ಅವರು ಚುನಾವಣೆಯಲ್ಲಿ ಗಳಿಸಿದ ಮತಗಳು
2019 ರ ಲೋಕಸಭೆ ಚುನಾವಣೆ
Elections.in ಪ್ರಕಾರ 2019 ರಲ್ಲಿ ನಡೆದ ಕೊನೆಯ ಲೋಕಸಭಾ ಚುನಾವಣೆಯಲ್ಲಿ, ಸೋನಿಯಾ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಒಟ್ಟು 55.8 ಶೇಕಡಾ ಮತಗಳನ್ನು ಗಳಿಸಿದರು, ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರು 38.36 ಶೇಕಡಾ ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರು.
2014 ರ ಲೋಕಸಭೆ ಚುನಾವಣೆ
IndiaVotes.com ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಸೋನಿಯಾ ಗಾಂಧಿ ಅವರು ರಾಯ್ ಬರೇಲಿಯಲ್ಲಿ 5.26 ಲಕ್ಷ ಅಥವಾ 63.8 ರಷ್ಟು ಮತ ಗಳಿಸಿದ್ದು ಬಿಜೆಪಿಯಿಂದ ಸ್ಪರ್ಧಿಸಿದ ಅಜಯ್ ಅಗರವಾಲ್ ಅವರನ್ನು ಸೋಲಿಸಿದರು.
2009 ರ ಲೋಕಸಭಾ ಚುನಾವಣೆ
2009 ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರು ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದು ಶೇಕಡಾ 72.2 ಅಥವಾ 4.8 ಲಕ್ಷ ಮತ ಪಡೆದರು. ಬಹುಜನ ಸಮಾಜ ಪಕ್ಷದ ಆರ್ ಎಸ್ ಕುಶ್ವಾಹ 1.09 ಲಕ್ಷ ಮತಗಳನ್ನು (ಶೇ 16.4) ಗಳಿಸಿ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಜೆಪಿಯ ಆರ್ ಬಿ ಸಿಂಗ್ 25 ಸಾವಿರ (ಶೇ. 3.8) ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
2004 ರ ಲೋಕಸಭಾ ಚುನಾವಣೆ
2004 ರ ಲೋಕಸಭಾ ಚುನಾವಣೆಯಲ್ಲಿ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿಯವರು 3.78 ಲಕ್ಷ ಅಥವಾ ಸುಮಾರು 58.8 ಶೇಕಡಾ ಮತಗಳನ್ನು ಪಡೆದರು. ಸೋನಿಯಾ ಸಮಾಜವಾದಿ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ಸಿಂಗ್ ಅವರನ್ನು ಸುಮಾರು 2.50 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:35 pm, Wed, 14 February 24