ಮಹಾರಾಷ್ಟ್ರದಲ್ಲಿ ಡಿಸೆಂಬರ್​ ಮೊದಲ ವಾರ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ

ದೆಹಲಿ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇದೀಗ ಬದ್ಧ ವೈರಿಗಳಾದ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಒಂದಾಗಿವೆ. ಶಿವಸೇನೆ ಮತ್ತು ಎನ್​ಸಿಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ. ಮೈತ್ರಿ ಬಗ್ಗೆ ಖಚಿತ ಪಡಿಸಿದ ಎನ್​ಸಿಪಿ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಸಮ್ಮತಿ ದೊರೆತಿದೆ ಎಂದಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಎನ್​ಸಿಪಿ ನಾಯಕರು ಸಭೆ ಸೇರಿ […]

ಮಹಾರಾಷ್ಟ್ರದಲ್ಲಿ ಡಿಸೆಂಬರ್​ ಮೊದಲ ವಾರ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ
Follow us
ಸಾಧು ಶ್ರೀನಾಥ್​
|

Updated on:Nov 20, 2019 | 6:01 PM

ದೆಹಲಿ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇದೀಗ ಬದ್ಧ ವೈರಿಗಳಾದ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಒಂದಾಗಿವೆ. ಶಿವಸೇನೆ ಮತ್ತು ಎನ್​ಸಿಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ.

ಮೈತ್ರಿ ಬಗ್ಗೆ ಖಚಿತ ಪಡಿಸಿದ ಎನ್​ಸಿಪಿ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಸಮ್ಮತಿ ದೊರೆತಿದೆ ಎಂದಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಎನ್​ಸಿಪಿ ನಾಯಕರು ಸಭೆ ಸೇರಿ ಹೊಸ ಸರ್ಕಾರ ರಚನೆ ಸಂಬಂಧ ಅಂತಿಮ ಮಾತುಕತೆ ನಡೆಸಲಿದ್ದಾರೆ. ಡಿಸೆಂಬರ್​ ಮೊದಲ ವಾರದಲ್ಲಿ ಮಹಾರಾಷ್ಟ್ರದಲ್ಲಿ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ವಿಚಾರದಲ್ಲಿ ತಲಾ ಎರಡೂವರೆ ವರ್ಷ ಮುಖ್ಯಮಂತ್ರಿ ಸ್ಥಾನ ಹೊಂದಲು ಶಿವಸೇನೆ, ಎನ್​ಸಿಪಿ ಜತೆ ಮಾತುಕತೆ ಫೈನಲ್ ಆಗಿದ್ದು, ಕಾಂಗ್ರೆಸ್​ಗೆ ಡಿಸಿಎಂ ಸ್ಥಾನ ನೀಡಲು ಒಪ್ಪಿಗೆ ದೊರೆತಿದೆ. ಇದೇ ವೇಳೆ, ಶಾಸಕರ ಸಂಖ್ಯೆ ಆಧಾರದಲ್ಲಿ ಶಿವಸೇನೆ, ಎನ್​ಸಿಪಿ, ಕಾಂಗ್ರೆಸ್​ಗೆ ಸಚಿವ ಸ್ಥಾನಗಳು ಹಂಚಿಕೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.

Published On - 5:27 pm, Wed, 20 November 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್