AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Sonia Gandhi admitted to Hospital: ಕಾಂಗ್ರೆಸ್ ವರಿಷ್ಠೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಯಮಿತ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿರುವುದಾಗಿ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಆಸ್ಪತ್ರೆಯಿಂದ ಅಧಿಕೃತ ಪ್ರಕಟಣೆ ಇನ್ನಷ್ಟೇ ಪ್ರಕಟವಾಗಬೇಕಿದೆ.

Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಸೋನಿಯಾ ಗಾಂಧಿImage Credit source: tv9
ಗಣಪತಿ ಶರ್ಮಾ
|

Updated on:May 13, 2026 | 12:49 PM

Share

ನವದೆಹಲಿ, ಮೇ 13: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸೋನಿಯಾ ಗಾಂಧಿ ಅವರು ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮುಖ್ಯಾಂಶಗಳು

  • ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
  • ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ವರಿಷ್ಠೆ
  • ಕೇರಳ ಪ್ರವಾಸ ರದ್ದುಗೊಳಿಸಿ ಆಸ್ಪತ್ರೆಗೆ ಧಾವಿಸಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ

ಏತನ್ಮಧ್ಯೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇರಳ ಪ್ರವಾಸ ರದ್ದುಗೊಳಿಸಿ ಆಸ್ಪತ್ರೆಗೆ ಧಾವಿಸಿದ್ದಾರೆ.

ಕೋಝಿಕ್ಕೋಡ್‌ನಲ್ಲಿ ನಡೆದ ರ್ಯಾಲಿಯಲ್ಲಿ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಕಾರಣ ಸ್ಥಳಕ್ಕೆ ಬರಲಾಗದೇ ಇರುವುದನ್ನು ತಿಳಿಸಿದರು. ‘ನಾನು ಅಲ್ಲಿಗೆ ಬರಬೇಕಿತ್ತು, ಆದರೆ ನನ್ನ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಮಗನಾಗಿ ನಾನು ಅವರ ಬಗ್ಗೆ ಚಿಂತಿತನಾಗಿದ್ದೇನೆ. ಆದ್ದರಿಂದ ನಾನು ಅವರೊಂದಿಗೆ ಇರಲು ನಿರ್ಧರಿಸಿದೆ. ಕೇರಳದ ಜನರು ಇದನ್ನು ಅರ್ಥಮಾಡಿಕೊಳ್ಳುತ್ತಾರೆಂದು ನನಗೆ ತಿಳಿದಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಈ ಹಿಂದೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾಗ ಕೇರಳದ ನರ್ಸ್ ಒಬ್ಬರು ಸಾಂತ್ವನ ಹೇಳಿ ಸಮಾಧಾನಪಡಿಸಿದ್ದನ್ನು ರಾಹುಲ್ ಗಾಂಧಿ ನೆನಪಿಸಿಕೊಂಡರು.

ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಈ ಹಿಂದೆ, ಮಾರ್ಚ್ 25 ರಂದು, ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹವಾಮಾನದಲ್ಲಿನ ದಿಢೀರ್ ಬದಲಾವಣೆಯಿಂದ ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Wed, 13 May 26

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More