ಚಿದು ಭೇಟಿಯಾದ ಸೋನಿಯಾ, ಆದ್ರೆ ಡಿಕೆಶಿಗೆ ಸಿಗಲಿಲ್ಲ ದರುಶನ ಭಾಗ್ಯ.. ಯಾಕೆ?
ದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ಕಾಂಗ್ರೆಸ್ನ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿದ್ದಾರೆ. ಆದ್ರೆ ಅದೇ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಲು ಸೋನಿಯಾ ಗಾಂಧಿಗೆ ಅನುಮತಿ ಸಿಕ್ಕಿಲ್ಲ ಎನ್ನಲಾಗಿದೆ. ಕಾಂಗ್ರೆಸ್ನ ಪ್ರಮುಖ ನಾಯಕರಾದ ಪಿ.ಚಿದಂಬರಂ ಮತ್ತು ಡಿಕೆ ಶಿವಕುಮಾರ್ ಭೇಟಿಗೆ ಸೋನಿಯಾ ಗಾಂಧಿ ತೆರಳಿದ್ದರು. ಆದ್ರೆ ಜೈಲಧಿಕಾರಿಗಳು ಪಿ.ಚಿದಂಬರಂ ಅಥವಾ ಡಿಕೆ ಶಿವಕುಮಾರ್ ಈ ಇಬ್ಬರಲ್ಲಿ ಒಬ್ಬರನ್ನ ಮಾತ್ರ ಭೇಟಿ ಮಾಡಲು ಸೋನಿಯಾ ಗಾಂಧಿಗೆ ಅನುಮತಿ […]
ದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ಕಾಂಗ್ರೆಸ್ನ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿದ್ದಾರೆ. ಆದ್ರೆ ಅದೇ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಲು ಸೋನಿಯಾ ಗಾಂಧಿಗೆ ಅನುಮತಿ ಸಿಕ್ಕಿಲ್ಲ ಎನ್ನಲಾಗಿದೆ.
ಕಾಂಗ್ರೆಸ್ನ ಪ್ರಮುಖ ನಾಯಕರಾದ ಪಿ.ಚಿದಂಬರಂ ಮತ್ತು ಡಿಕೆ ಶಿವಕುಮಾರ್ ಭೇಟಿಗೆ ಸೋನಿಯಾ ಗಾಂಧಿ ತೆರಳಿದ್ದರು. ಆದ್ರೆ ಜೈಲಧಿಕಾರಿಗಳು ಪಿ.ಚಿದಂಬರಂ ಅಥವಾ ಡಿಕೆ ಶಿವಕುಮಾರ್ ಈ ಇಬ್ಬರಲ್ಲಿ ಒಬ್ಬರನ್ನ ಮಾತ್ರ ಭೇಟಿ ಮಾಡಲು ಸೋನಿಯಾ ಗಾಂಧಿಗೆ ಅನುಮತಿ ನೀಡಲಾಗಿತ್ತು. ಹೀಗಾಗಿ ಪಿ.ಚಿದಂಬರಂ ಅವರನ್ನು ಮಾತ್ರ ಸೋನಿಯಾ ಗಾಂಧಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದ್ದಾರೆ. ಇನ್ನು ಸೋನಿಯಾ ಗಾಂಧಿ ಭೇಟಿ ವೇಳೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸಹ ಉಪಸ್ಥಿತರಿದ್ದರು.
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಗರಣದಲ್ಲಿ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಜೈಲು ಪಾಲಾಗಿದ್ರೆ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿದ್ದಾರೆ.
Published On - 1:06 pm, Mon, 23 September 19