G23 ನಾಯಕರೊಂದಿಗೆ ಸಮಾಲೋಚನೆ ಮುಂದುವರಿಸಿದ ಸೋನಿಯಾ ಗಾಂಧಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಂತರವೇ ಬದಲಾವಣೆ

ಸೋನಿಯಾ ಗಾಂಧಿ ಅವರನ್ನು G-23 ಬಣದ ನಾಯಕರಾದ ಆನಂದ್ ಶರ್ಮಾ, ಮನಿಶ್ ತಿಮಾರಿ ಮತ್ತು ವಿವೇಕ್ ಟಂಕ ಭೇಟಿಯಾಗಿ ಮಾತುಕತೆ ನಡೆಸಿದರು.

G23 ನಾಯಕರೊಂದಿಗೆ ಸಮಾಲೋಚನೆ ಮುಂದುವರಿಸಿದ ಸೋನಿಯಾ ಗಾಂಧಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಂತರವೇ ಬದಲಾವಣೆ
ಸೋನಿಯಾ ಗಾಂಧಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 23, 2022 | 11:54 AM

ದೆಹಲಿ: ಕಾಂಗ್ರೆಸ್​ನಲ್ಲಿ ಸಂಘಟನೆ ಬಲಪಡಿಸುವ ದೃಷ್ಟಿಯಿಂದ ನಾಯಕತ್ವ ಬದಲಾವಣೆ ಆಗಬೇಕು ಎಂದು G-23 ನಾಯಕರು ಒತ್ತಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಸಮಾಲೋಚನೆ ಮುಂದುವರಿಸಿದ್ದು, ಇದೇ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ಪಕ್ಷದ ಅಧ್ಯಕ್ಷೀಯ ಚುನಾವಣೆಯ ನಂತರವೇ ಸಂಘಟನಾತ್ಮಕ ಬದಲಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ. G-23 ಬಣದ ನಾಯಕರಾದ ಆನಂದ್ ಶರ್ಮಾ, ಮನಿಶ್ ತಿಮಾರಿ ಮತ್ತು ವಿವೇಕ್ ಟಂಕ ಅವರನ್ನು ತಮ್ಮ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸೋಲು ಅನುಭವಿಸಿದ ನಂತರ ಆಂತರಿಕ ಭಿನ್ನಮತ ಹೆಚ್ಚಾಗಿತ್ತು. ಕಾಂಗ್ರೆಸ್ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಸಾಮೂಹಿಕ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ ಎಂದು G23 ನಾಯಕರು ದೂರಿದ್ದರು.

G-23 ನಾಯಕರು ಪಕ್ಷದ ಸಂಘಟನೆಯಲ್ಲಿ ಸಮಗ್ರ ಬದಲಾವಣೆ ಆಗಬೇಕು ಎಂದು ಹಲವು ಬಾರಿ ಒತ್ತಾಯಿಸಿದ್ದರು. ಮುಂದಿನ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ. ಮೊದಲು ಅದರ ಕಡೆಗೆ ಗಮನ ಕೊಡಿ. ಅದಾದ ನಂತರ ಕೆಲಮಟ್ಟಿಗೆ ಬದಲಾವಣೆಗಳನ್ನು ಮಾಡುತ್ತೇನೆ ಎಂದು ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ G-23 ನಾಯಕರೇ ಆಗಲಿ ಅಥವಾ ಗಾಂಧಿ ಕುಟುಂಬದ ಯಾವೊಬ್ಬ ಸದಸ್ಯರೇ ಆಗಲಿ ಕಪಿಲ್ ಸಿಬಲ್ ಅವರ ಬಗ್ಗೆ ಏನೂ ಹೇಳಲಿಲ್ಲ ಎಂದು ಮೂಲಗಳು ತಿಳಿಸಿವೆ. ಪಕ್ಷದಲ್ಲಿ ಉನ್ನತ ಹಂತದಲ್ಲಿರುವ ಕೆಲ ನಾಯಕರನ್ನು ಯಾವ ತಪ್ಪುಗಳಿಗೂ ಹೊಣೆಗಾರರನ್ನಾಗಿ ಮಾಡುತ್ತಿಲ್ಲ ಎಂದು G-23 ನಾಯಕರು ಆಕ್ಷೇಪಿಸಿದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿರುವ ಪ್ರಧಾನ ಕಾರ್ಯದರ್ಶಿಗಳು ರಾಹುಲ್ ಗಾಂಧಿ ಅವರ ಹೆಸರಿನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದಲ್ಲಿ ಕೆಲವರು ತೆಗೆದುಕೊಳ್ಳುತ್ತಿರುವ ತಪ್ಪು ನಿರ್ಧಾರಗಳಿಂದ ಆಗುತ್ತಿರುವ ಅನಾಹುತಗಳಿಗೆ ಯಾರನ್ನು ಹೊಣೆ ಮಾಡುವುದು ಎಂದು ಸೋನಿಯಾರನ್ನು ಭೇಟಿ ಮಾಡಿದ G-23 ನಾಯಕರು ಪ್ರಶ್ನಿಸಿದರು. ಪಕ್ಷವನ್ನು ಕೆಲವೇ ನಾಯಕರ ಸುಪರ್ದಿಗೆ ಒಪ್ಪಿಸಲು ಆಗುವುದಿಲ್ಲ ಎಂದು ತಮ್ಮ ನಿಲುವು ಸ್ಪಷ್ಟಪಡಿಸಿದರು. ‘ಪಕ್ಷದ ನಾಯಕರು ಪ್ರಸ್ತಾಪಿಸಿರುವ ಎಲ್ಲ ವಿಚಾರಗಳ ಬಗ್ಗೆ ಗಮನ ಹರಿಸುವುದಾಗಿ ಸೋನಿಯಾ ಗಾಂಧಿ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.

ಎಲ್ಲರನ್ನೂ ಒಳಗೊಳ್ಳುವ ಸಾಮೂಹಿಕ ನಾಯಕತ್ವ ಕಾಂಗ್ರೆಸ್ ಪಕ್ಷಕ್ಕೆ ಬೇಕು ಎಂದು G-23 ನಾಯಕರು ಒತ್ತಾಯಿಸಿದರು. ಬಹುತೇಕ G-23 ನಾಯಕರ ಆಕ್ರೋಶವು ಕಾಂಗ್ರೆಸ್​ ಪಕ್ಷದ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ರಣದೀಪ್ ಸುರ್ಜೆವಾಲಾ, ಅಜಯ್ ಮೆಕನ್ ಮತ್ತು ಕೆ.ಸಿ.ವೇಣುಗೋಪಾಲ್ ಅವರ ವಿರುದ್ಧ ತಿರುಗಿದೆ. ಕಾಂಗ್ರೆಸ್ ಪಕ್ಷದ ಇತರ ನಾಯಕರು, ಉನ್ನತ ನಾಯಕತ್ವ ಮತ್ತು G-23 ನಾಯಕರ ನಡುವೆ ಬೆಳೆಯುತ್ತಿರುವ ಭಿನ್ನಮತ ಶಮನಗೊಳಿಸುವ ಉದ್ದೇಶದಿಂದ ಸೋನಿಯಾ ಅವರು ಭಿನ್ನದನಿಯ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಮಾರ್ಚ್ 18ರಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಸೋನಿಯಾ ಗಾಂಧಿ ಭೇಟಿಯಾಗಿದ್ದರು.

ಇದನ್ನೂ ಓದಿ: ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ

ಇದನ್ನೂ ಓದಿ: ಪಾದಯಾತ್ರೆ ನಾಟಕ ಮಾಡುವ ಕಾಂಗ್ರೆಸ್ಸಿಗರಿಗೆ ಮಿತ್ರಪಕ್ಷ ಡಿಎಂಕೆ ಮನವೊಲಿಸುವ ಧೈರ್ಯವಿಲ್ಲವೇ? -ಸಚಿವ ಸುಧಾಕರ್ ಮಾರ್ಮಿಕ ಪ್ರಶ್ನೆ

Published On - 11:52 am, Wed, 23 March 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ