Sonia Gandhi: ನಾಳೆ ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರು; ಬೆಂಗಳೂರು ಸೇರಿ ದೇಶಾದ್ಯಂತ ಕಾಂಗ್ರೆಸ್​ ಪ್ರತಿಭಟನೆಗೆ ಸಜ್ಜು

Bangalore News: ನಾಳೆ ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್​​ನಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ.

Sonia Gandhi: ನಾಳೆ ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರು; ಬೆಂಗಳೂರು ಸೇರಿ ದೇಶಾದ್ಯಂತ ಕಾಂಗ್ರೆಸ್​ ಪ್ರತಿಭಟನೆಗೆ ಸಜ್ಜು
ಸೋನಿಯಾ ಗಾಂಧಿImage Credit source: The Print
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 20, 2022 | 11:19 AM

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ (Sonia Gandhi) ಸಮನ್ಸ್ ನೀಡಲಾಗಿದೆ. ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್​ನ ನ್ಯಾಷನಲ್ ಹೆರಾಲ್ಡ್ (National Herald Case)​​ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ನಾಳೆ ಇಡಿ ವಿಚಾರಣೆಗೆ ಹಾಜರಾಗಲಿದ್ದು, ಈ ಹಿಂದೆ ಅನಾರೋಗ್ಯದ ಕಾರಣದಿಂದ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದೇ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ರಾಹುಲ್ ಗಾಂಧಿ  (Rahul Gandhi) ವಿಚಾರಣೆಯನ್ನೂ ನಡೆಸಿದ್ದರು. ರಾಹುಲ್ ಗಾಂಧಿ ವಿಚಾರಣೆ ವೇಳೆ ದೇಶಾದ್ಯಂತ ಪ್ರತಿಭಟನೆ ನಡೆಸಿದ ರೀತಿಯಲ್ಲೇ ನಾಳೆಯೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಳೆ ಇಡಿ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ. ಅನಾರೋಗ್ಯ ಕಾಡುತ್ತಿದ್ದರೂ ವಿಚಾರಣೆಗೆ ಎದುರಿಸಲಿರುವ ಸೋನಿಯಾ ಗಾಂಧಿ ಅವರಿಗೆ ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕವನ್ನು ನಿಗದಿಪಡಿಸಲು ಕೋರುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು. ಆದರೆ, ಈಗಾಗಲೇ ಎರಡು ಬಾರಿ ವಿಚಾರಣೆ ಮುಂದೂಡುವಂತೆ ಸಮಯವಕಾಶ ಕೇಳಿದ್ದೇನೆ. ಮತ್ತೆ ಮುಂದೂಡಿಕೆಗೆ ಸಮಯವಕಾಶ ಕೇಳುವುದಿಲ್ಲ. ನಾಳೆ ಇಡಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ 55 ಗಂಟೆಗಳಿಗೂ ಹೆಚ್ಚು ಕಾಲ ಇಡಿ ಅಧಿಕಾರಿಗಳ ಮುಂದೆ ವಿಚಾರಣೆ ಎದುರಿಸಿದ್ದರು.

ಇದನ್ನೂ ಓದಿ: Rahul Gandhi: ಸುಸ್ತಾಗಿದೆ ಎಂದು ಶೇ. 20ರಷ್ಟು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಲೇ ಇಲ್ಲ ಎಂದ ಇಡಿ; ರಾಹುಲ್ ಹೇಳಿದ್ದೇ ಬೇರೆ ಕತೆ!

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುವ ವೇಳೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಲು ಕೈ ನಾಯಕರು ನಿರ್ಧರಿಸಿದ್ದಾರೆ. ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಲಿದ್ದು, ನಾಳೆ ದೆಹಲಿಯ ಸಂಸತ್ ಆವರಣದಲ್ಲೂ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ. ಇಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಯೂತ್ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಕರ್ನಾಟಕ ಸೇರಿದಂತೆ ಪ್ರತಿ ರಾಜ್ಯದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಆಯಾ ರಾಜ್ಯಗಳ ರಾಜಧಾನಿಯಲ್ಲಿ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ.

ಬೆಂಗಳೂರಲ್ಲೂ ಪ್ರತಿಭಟನೆ:

ನಾಳೆ ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್​​ನಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ದ್ವೇಷದ ರಾಜಕಾರಣ ಎಂದು ಆರೋಪಿಸಿ ನಾಳೆ ಪ್ರತಿಭಟನೆ ನಡೆಯಲಿದ್ದು, ಬೃಹತ್ ಱಲಿ ಮೂಲಕ ರಾಜಭವನ ಮುತ್ತಿಗೆಗೆ ನಿರ್ಧರಿಸಲಾಗಿದೆ. ಕಾಂಗ್ರೆಸ್​​ನ ಶಾಸಕರು, ಎಂಎಲ್​ಸಿಗಳು, ರಾಜ್ಯಸಭಾ ಸದಸ್ಯರು, ಸಂಸದರು ಕಡ್ಡಾಯವಾಗಿ ಪ್ರತಿಭಟನೆಯಲ್ಲಿ ಹಾಜರಾಗಲು ಸೂಚನೆ ನೀಡಲಾಗಿದೆ. ನಾಳೆ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.