ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್; ಏನಿದು ಪ್ರಕರಣ?

ಜೂನ್ 2 ರಂದು ಹಾಜರಾಗುವಂತೆ  ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿದೆ.  ಈ ಪ್ರಕರಣವು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ್ದು...

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್; ಏನಿದು ಪ್ರಕರಣ?
ಸೋನಿಯಾ - ರಾಹುಲ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 01, 2022 | 9:24 PM

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮತ್ತು ಅವರ ಪುತ್ರ ರಾಹುಲ್ ಗಾಂಧಿ (Rahul Gandhi) ಅವರಿಗೆ ಜಾರಿ ನಿರ್ದೇಶನಾಲಯ (Enforcement Directorate) ಸಮನ್ಸ್ ಜಾರಿ ಮಾಡಿದೆ. ಜೂನ್ 2 ರಂದು ಹಾಜರಾಗುವಂತೆ  ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿದೆ.  ಈ ಪ್ರಕರಣವು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ್ದು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು  ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಟಿಸುತ್ತಿದ್ದು, ಇದು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಎಜೆಎಲ್‌ಗೆ ಭೂಮಿ ಹಂಚಿಕೆಯಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ಇಡಿ ತನಿಖೆ ನಡೆಸುತ್ತಿದೆ. ಜೂನ್ 2 ರಂದು ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿದ್ದು, ಜೂನ್ 8 ರಂದು ಸೋನಿಯಾ ಗಾಂಧಿ ಅವರು ಏಜೆನ್ಸಿಯ ಮುಂದೆ ಹಾಜರಾಗಲಿದ್ದಾರೆ.

ಏನಿದು ಪ್ರಕರಣ?

  1. ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಎಜೆಎಲ್‌ಗೆ ಪಂಚಕುಲದಲ್ಲಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಸಂಸ್ಥೆ ಆರೋಪಿಸಿತ್ತು. ಭೂಮಿಯನ್ನು 1982 ರಲ್ಲಿ ಮಂಜೂರು ಮಾಡಲಾಯಿತು, ಆದರೆ 1992 ರಲ್ಲಿ ಹಿಂತೆಗೆದುಕೊಳ್ಳಲಾಯಿತು. ಆದಾಗ್ಯೂ,  ಹಳೆಯ ದರದಲ್ಲಿಯೇ ಹೂಡಾ ಇದನ್ನು ಹೊಸದಾಗಿ ಮಂಜೂರು ಮಾಡಿದ್ದಾರೆ ಎಂದು ಇಡಿ ಹೇಳಿದೆ.
  2. ಹೂಡಾ ಅವರು ಹರ್ಯಾಣ ನಗರಾಭಿವೃದ್ಧಿ ಪ್ರಾಧಿಕಾರದ ಅಭಿಪ್ರಾಯವನ್ನು ತಳ್ಳಿಹಾಕಿದ್ದು, ಎಜೆಎಲ್​​ಗೆ ಮತ್ತೆ ಭೂಮಿಯನ್ನು ಮಂಜೂರು ಮಾಡಿದ್ದಾರೆ. ಇದರಿಂದಾಗಿ ₹64 ಕೋಟಿ ನಷ್ಟವಾಗಿದೆ ಎಂದು ಸಂಸ್ಥೆ ಹೇಳುತ್ತದೆ. 2008 ರಿಂದ 2012 ರವರೆಗೆ ಹೇಳಲಾದ ಪ್ಲಾಟ್‌ನಲ್ಲಿ ನಿರ್ಮಾಣಕ್ಕಾಗಿ ಮಾಜಿ ಮುಖ್ಯಮಂತ್ರಿ ಎಜೆಎಲ್‌ಗೆ ಮೂರು ಅನಗತ್ಯ ಎಕ್ಸ್ ಟೆನ್ಶನ್ ನೀಡಿದ್ದಾರೆ ಎಂದು ಅದು ಆರೋಪಿಸಿದೆ.
  3. ಇದನ್ನೂ ಓದಿ
    Image
    Breaking ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿಗೆ ಇಡಿ ಸಮನ್ಸ್
    Image
    Satyendar Jain ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಜೂನ್ 9ರ ವರೆಗೆ ಇಡಿ ಕಸ್ಟಡಿಗೆ
    Image
    ಸೋನಿಯಾ ಗಾಂಧಿಯವರ ಮೂಲ ಯಾವುದು ಅಂತ ಸಿದ್ದರಾಮಯ್ಯ ಮೊದಲು ಹೇಳಲಿ: ಪ್ರತಾಪ್ ಸಿಂಹ
  4. ಫೆಡರಲ್ ಏಜೆನ್ಸಿಯ ಈ ಕ್ರಮವು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಖಜಾಂಚಿ ಪವನ್ ಬನ್ಸಾಲ್ ಅವರನ್ನು ಈ ವರ್ಷದ ಏಪ್ರಿಲ್‌ನಲ್ಲಿ ಪ್ರಶ್ನಿಸಿದ ನಂತರ  ಬಂದಿದೆ. ಖರ್ಗೆ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (ವೈಐಎಲ್) ಸಿಇಒ ಆಗಿದ್ದು, ಬನ್ಸಾಲ್ ಎಜೆಎಲ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
  5. ಜಾರಿ ನಿರ್ದೇಶನಾಲಯವು ಎಜೆಎಲ್ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಕಾರ್ಯನಿರ್ವಹಣೆಯಲ್ಲಿ ಷೇರುದಾರರ ಮಾದರಿ ಮತ್ತು ಹಣಕಾಸಿನ ವಹಿವಾಟುಗಳು ಮತ್ತು ಪಕ್ಷದ ಕಾರ್ಯನಿರ್ವಾಹಕರ ಪಾತ್ರವನ್ನು ತನಿಖೆ ನಡೆಸುತ್ತಿದೆ. ವೈಐಎಲ್ ಪ್ರವರ್ತಕರಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ