2 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿಯವರಿಗೆ ಏನಾಗಿದೆ? ಈಗ ಹೇಗಿದ್ದಾರೆ? ಆಸ್ಪತ್ರೆ ವೈದ್ಯರು ನೀಡಿದ ಮಾಹಿತಿ ಇಲ್ಲಿದೆ
ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿರುವ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಏನಾಗಿದೆ? ಈಗ ಅವರ ಆರೋಗ್ಯ ಹೇಗಿದೆ ಎನ್ನುವ ಬಗ್ಗೆ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಜನವರಿ 04ರಂದು ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಸೋನಿಯಾ ದೆಹಲಿಯಲ್ಲಿರುವ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ (Sir Gangaram Hospital) ಚಿಕಿತ್ಸೆ ಪಡೆಯುತ್ತಿದ್ದು, ಇಂದು(ಜ.06) ಆಸ್ಪತ್ರೆ ವೈದ್ಯರು ಸೋನಿಯಾ ಗಾಂಧಿ ಅವರ ಆರೋಗ್ಯದ(Sonia Gandhi Health Update) ಬಗ್ಗೆ ಮಾಹಿತಿ( ನೀಡಿದ್ದಾರೆ.
ಇದನ್ನೂ ಓದಿ: Sonia Gandhi Health: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆ ವೈದ್ಯರು ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿ ಅವರು ಶ್ವಾಸಕೋಶದಲ್ಲಿ ಸೋಂಕಿನಿಂದ ಬಳಲುತ್ತಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ, ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Sonia Gandhi, Chairperson UPA, who is admitted at Sir Gangaram Hospital for a viral respiratory infection is stable and is making a gradual recovery: Sir Gangaram Hospital, Delhi pic.twitter.com/Ri3MmSiDv0
— ANI (@ANI) January 6, 2023
ಮಂಗಳವಾರದಿಂದಲೇ ಸೋನಿಯಾ ಗಾಂಧಿ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಜ.04ರಂದು ಚಿಕಿತ್ಸೆಗಾಗಿ ದೆಹಲಿಯಲ್ಲಿರುವ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ಕಾರಣಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ್ದ ಭಾರತ್ ಜೋಡೋ ಯಾತ್ರೆಯನ್ನು ಅರ್ಧಕ್ಕೆ ಬಿಟ್ಟು ದೆಹಲಿಗೆ ವಾಪಸ್ ಆಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ಉತ್ತರ ಪ್ರದೇಶದ ಬಾಗ್‌ಪತ್‌ನ ಮಾವಿಕಲನ್‌ನಲ್ಲಿ ರಾತ್ರಿ ಸ್ಥಗಿತಗೊಂಡ ನಂತರ ಬುಧವಾರ ಬೆಳಿಗ್ಗೆ 6 ಗಂಟೆಗೆ ತನ್ನ ಪ್ರಯಾಣವನ್ನು ಪುನರಾರಂಭಿಸಿತು. ಆದರೆ, ಯಾತ್ರೆಯ ಪುನರಾರಂಭದಲ್ಲಿ ಪ್ರಿಯಾಂಕಾ ಗಾಂಧಿ ರಾಹುಲ್ ಗಾಂಧಿ ಜೊತೆ ಸೇರಲಿಲ್ಲ. ರಾಹುಲ್ ಹಾಗೂ ಪ್ರಿಯಾಂಕ್ ಗಾಂಧಿ ಅವರು ಯಾತ್ರೆಯನ್ನು ಅರ್ಧಕ್ಕೆ ಬಿಟ್ಟು ಆಸ್ಪತ್ರಗೆ ದೌಡಾಯಿಸಿದ್ದರಿಂದ ಎಲ್ಲರನ್ನೂ ಆತಂಕಕ್ಕೀಡು ಮಾಡಿತ್ತು.
ಸೋನಿಯಾ ಅವರ ಅನಾರೋಗ್ಯದ ಸುದ್ದಿ ತಿಳಿದ ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡಿ, ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿಯವರು ಅನಾರೋಗ್ಯಕ್ಕೆ ಈಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ತಿಳಿದು ಅತೀವ ಬೇಸರವಾಗಿದೆ. ಅವರು ಬೇಗನೇ ಚೇತರಿಸಿಕೊಂಡು ಆರೋಗ್ಯವಂತರಾಗಿ ವಾಪಸ್ ಬರಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.