ಲೋಕಸಭೆ ಕಡೆ ಮುಖ ಮಾಡದ ಸೋನಿಯಾ, ರಾಜ್ಯಸಭಾ ಸದಸ್ಯೆಯಾಗಿ ಪ್ರಯಾಣ ಶುರು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ಇಂದು ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಬರ್ಟ್ ವಾದ್ರಾ ಬಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏಪ್ರಿಲ್ 3 ರಂದು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ತೆರವಾದ ಸ್ಥಾನಕ್ಕೆ ಸೋನಿಯಾ ಬಂದಿದ್ದಾರೆ

ಲೋಕಸಭೆ ಕಡೆ ಮುಖ ಮಾಡದ ಸೋನಿಯಾ, ರಾಜ್ಯಸಭಾ ಸದಸ್ಯೆಯಾಗಿ ಪ್ರಯಾಣ ಶುರು
ಸೋನಿಯಾ ಗಾಂಧಿ
Follow us
ನಯನಾ ರಾಜೀವ್
|

Updated on: Apr 04, 2024 | 12:06 PM

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ಇಂದು ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಬರ್ಟ್ ವಾದ್ರಾ ಬಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏಪ್ರಿಲ್ 3 ರಂದು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ತೆರವಾದ ಸ್ಥಾನಕ್ಕೆ ಸೋನಿಯಾ ಬಂದಿದ್ದಾರೆ.

ಸಭಾನಾಯಕ ಪಿಯೂಷ್ ಗೋಯಲ್ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 1999 ರಿಂದ ನಿರಂತರವಾಗಿ ಲೋಕಸಭಾ ಸದಸ್ಯರಾಗಿದ್ದಾರೆ. ಪ್ರಸ್ತುತ ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಅಮೇಥಿಯ ಲೋಕಸಭಾ ಸದಸ್ಯರೂ ಆಗಿದ್ದಾರೆ. ಅವರು ಸಂಸತ್ತಿನ ಮೇಲ್ಮನೆಗೆ ಹೋಗುತ್ತಿರುವುದು ಇದೇ ಮೊದಲು. ಇದಕ್ಕೂ ಮುನ್ನ ಸೋನಿಯಾ ಗಾಂಧಿ ಲೋಕಸಭೆ ಸದಸ್ಯರಾಗಿದ್ದರು.

ಮತ್ತಷ್ಟು ಓದಿ: ಸೋನಿಯಾ ಗಾಂಧಿ ಆಸ್ತಿ ಒಟ್ಟು ₹12 ಕೋಟಿ, ಇಟಲಿ ಮನೆ ಪಾಲು ₹27 ಲಕ್ಷ; ಸ್ವಂತ ಕಾರು ಇಲ್ಲ

ಫೆಬ್ರವರಿ 8 ರಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಫೆಬ್ರವರಿ 16 ರಂದು ನಾಮಪತ್ರಗಳ ಪರಿಶೀಲನೆ ನಡೆದಿತ್ತು. ಅಭ್ಯರ್ಥಿಗಳು ತಮ್ಮ ಹೆಸರನ್ನು ಫೆಬ್ರವರಿ 20 ರವರೆಗೆ ಹಿಂಪಡೆಯಲು ಅವಕಾಶ ಮಾಡಿಕೊಡಲಾಗಿತ್ತು.

ಸೋನಿಯಾ ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಹಾಗೂ ಮದನ್ ರಾಥೋಡ್​ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರೊಂದಿಗೆ ರಾಜಸ್ಥಾನಕ್ಕಿದ್ದ 10 ರಾಜ್ಯಸಭಾ ಸ್ಥಾನಗಳಲ್ಲಿ ಕಾಂಗ್ರೆಸ್​ 6, ಬಿಜೆಪಿ 4 ಸದಸ್ಯರನ್ನು ಹೊಂದಿದಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ