ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಇಂದು ಮತ್ತೊಮ್ಮೆ ಕೊವಿಡ್-19 (COVID-19) ಪಾಸಿಟಿವ್ ದೃಢಪಟ್ಟಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಸರ್ಕಾರಿ ಪ್ರೋಟೋಕಾಲ್ ಪ್ರಕಾರ ಅವರು ಕ್ವಾರಂಟೈನ್ ಆಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ ಸೋನಿಯಾ ಗಾಂಧಿ ಅವರ ಮಗಳು ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೂಡ ಕೊರೊನಾ ಸೋಂಕು ತಗುಲಿತ್ತು. ಜೂನ್ ಆರಂಭದಲ್ಲಿ ಸೋನಿಯಾ ಗಾಂಧಿ ಅವರಿಗೆ ಕೊವಿಡ್-19 ದೃಢಪಟ್ಟಿತ್ತು. ಅವರಿಗೆ ಕೊರೊನಾವೈರಸ್ ಪತ್ತೆಯಾದ ನಂತರ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 20ರಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.
Congress President Smt.Sonia Gandhi has tested positive for Covid-19 today. She will remain in isolation as per Govt. protocol.
आज कांग्रेस अध्यक्ष श्रीमती सोनिया गांधी का कोविड-19 टेस्ट रिपोर्ट पॉजिटिव आया है। वह सरकार द्वारा जारी प्रोटोकॉल का पालन करते हुए आइसोलेशन में रहेंगी।
— Jairam Ramesh (@Jairam_Ramesh) August 13, 2022
ಇದನ್ನೂ ಓದಿ: Priyanka Gandhi Vadra: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೊಮ್ಮೆ ಕೊವಿಡ್ ಪಾಸಿಟಿವ್ ದೃಢ
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೋನಿಯಾ ಗಾಂಧಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
Published On - 3:18 pm, Sat, 13 August 22