AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ನಾಲ್ವರಿಗೆ ಹೈಕಮಾಂಡ್​ ಮಟ್ಟದಲ್ಲಿ ಪ್ರಮುಖ ಹುದ್ದೆ; 2024ರವರೆಗೆ ಸೋನಿಯಾ ಗಾಂಧಿಯೇ ಅಧ್ಯಕ್ಷೆ

Congress: 2017ರ ಡಿಸೆಂಬರ್​​ನಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಅಧ್ಯಕ್ಷನ ಪಟ್ಟಕ್ಕೇರಿದ್ದ ರಾಹುಲ್​ ಗಾಂಧಿ 2019ರಲ್ಲಿ ಅದನ್ನು ತೊರೆದಿದ್ದರು. ಅದಕ್ಕೆ ಕಾರಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿತ್ತು.

ಕಾಂಗ್ರೆಸ್​ನ ನಾಲ್ವರಿಗೆ ಹೈಕಮಾಂಡ್​ ಮಟ್ಟದಲ್ಲಿ ಪ್ರಮುಖ ಹುದ್ದೆ; 2024ರವರೆಗೆ ಸೋನಿಯಾ ಗಾಂಧಿಯೇ ಅಧ್ಯಕ್ಷೆ
ಸೋನಿಯಾ ಗಾಂಧಿ
TV9 Web
| Edited By: |

Updated on: Jul 21, 2021 | 12:20 PM

Share

ದೆಹಲಿ: ‘ಬಿಟ್ಟೇನೆಂದರೂ ಬಿಡದು ಈ ಹುದ್ದೆ..’ ಈ ವಾಕ್ಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಯವರ ಪಾಲಿಗೆ ತುಂಬ ಸೂಕ್ತ ಎಂಬಂತಾಗಿದೆ. 2024ರ ಲೋಕಸಭಾ ಚುನಾವಣೆಯವರೆಗೂ ಸೋನಿಯಾ ಗಾಂಧಿಯವರೇ ಕಾಂಗ್ರೆಸ್ (Congress) ​ನ ಮಧ್ಯಂತರ ಅಧ್ಯಕ್ಷೆಯಾಗಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ 2019ರ ಲೋಕಸಭೆ ಚುನಾವಣೆ(Lok Sabha Election) ಮುಗಿದ ಬಳಿಕ ಕಾಂಗ್ರೆಸ್​ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ(Rahul Gandhi)ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಮತ್ತೆ ಸೋನಿಯಾ ಗಾಂಧಿಯವರೇ ಆ ಸ್ಥಾನ ಏರಿದ್ದರು.

2017ರ ಡಿಸೆಂಬರ್​​ನಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಅಧ್ಯಕ್ಷನ ಪಟ್ಟಕ್ಕೇರಿದ್ದ ರಾಹುಲ್​ ಗಾಂಧಿ 2019ರಲ್ಲಿ ಅದನ್ನು ತೊರೆದಿದ್ದರು. ಅದಕ್ಕೆ ಕಾರಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿತ್ತು. ಕಾಂಗ್ರೆಸ್​ನ ಅಧ್ಯಕ್ಷ ಸ್ಥಾನವನ್ನು ಯಾರಿಗಾದರೂ ವಹಿಸುವವರೆಗೆ ಸೋನಿಯಾ ಗಾಂಧಿಯವರೇ ಮಧ್ಯಂತರ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹಲವು ಬಾರಿ ಸೋನಿಯಾ ಗಾಂಧಿ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಅದೇಕೋ ಆ ಪಕ್ಷಕ್ಕೆ ಒಬ್ಬ ಸಮರ್ಥ ನಾಯಕನನ್ನು ಹುಡುಕಲು ಸಾಧ್ಯವಾಗುತ್ತಿಲ್ಲ. ಹೊಸ ಅಧ್ಯಕ್ಷನ ಆಯ್ಕೆ ಸಂಬಂಧ ಹಲವು ಸಭೆಗಳು ನಡೆದರೂ ಪ್ರಯೋಜನವಾಗಿಲ್ಲ. ಈ ಮಧ್ಯೆ ಕಾಂಗ್ರೆಸ್​ನ ಹಲವು ನಾಯಕರು ಮತ್ತೆ ಅಧ್ಯಕ್ಷನ ಸ್ಥಾನವನ್ನು ರಾಹುಲ್​ ಗಾಂಧಿಯವರೇ ವಹಿಸಿಕೊಳ್ಳಲಿ ಎಂದೂ ಹೇಳುತ್ತಿದ್ದಾರೆ.

ಇದೀಗ ಮೂಲಗಳಿಂದ ಲಭ್ಯವಾದ ಮಾಹಿತಿಯ ಪ್ರಕಾರ ರಾಹುಲ್​ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷನ ಸ್ಥಾನದ ಜವಾಬ್ದಾರಿ ಹೊರುವುದಿಲ್ಲ. 2024ರ ಲೋಕಸಭಾ ಚುನಾವಣೆವರೆಗೂ ಸೋನಿಯಾ ಗಾಂಧಿಯವರೇ ಆ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಈ ಮಧ್ಯೆ ರಾಹುಲ್​ ಗಾಂಧಿಗೆ ಆಪ್ತರಾಗಿರುವ ಕೆಲವು ಯುವ ಕಾಂಗ್ರೆಸ್ಸಿಗರು ತುಂಬ ಪ್ರಮುಖ ಸ್ಥಾನಗಳನ್ನು ಪಡೆಯಲಿದ್ದಾರೆ ಎನ್ನಲಾಗಿದೆ. ಸೋನಿಯಾ ಗಾಂಧಿಯವರು ಮುಂದಿನ ಲೋಕಸಭಾ ಚುನಾವಣೆಯವರೆಗೂ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮುಂದುವರಿಯಲಿದ್ದಾರೆ. ಅವರಿಗೆ ಸಹಾಯ ಮಾಡಲು ಪಕ್ಷ ನಾಲ್ವರು ಕಾರ್ಯಕಾರಿ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲಿದೆ. ಗುಲಾಂ ನಬಿ ಆಜಾದ್​, ಕುಮಾರಿ ಸೆಲ್ಜಾ, ಮುಕುಲ್​ ವಾಸ್ನಿಕ್​, ರಮೇಶ್​ ಚೆನ್ನಿತಾಲಾ, ಸಚಿನ್​ ಪೈಲಟ್ ಈ ಕಾರ್ಯಕಾರಿ ಅಧ್ಯಕ್ಷರಾಗಲಿದ್ದು, ಇವರು ಪ್ರಮುಖ ವಿಚಾರಗಳ ಚರ್ಚೆ, ನಿರ್ಣಯದ ವೇಳೆ ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿಯವರೊಟ್ಟಿಗೆ ಇರುತ್ತಾರೆ ಎಂದು ಕಾಂಗ್ರೆಸ್​ನ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಸದ್ಯ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾಗೆ ಯಾವ ಸ್ಥಾನ ಒಲಿಯಲಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದರೆ ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಣೆ ಹೊಣೆ ಇವರ ಮೇಲೆ ಬೀಳುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: Temple Hundi: ಲಾಕ್​ಡೌನ್​ ಬಳಿಕ ತಿಮ್ಮಪ್ಪನ ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

Sonia Gandhi to continue as Congress president till 2024 lok Sabha Election

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ