ಆರೋಗ್ಯ ತಪಾಸಣೆಗೆ ರಾಹುಲ್- ಪ್ರಿಯಾಂಕಾ ಗಾಂಧಿಯೊಂದಿಗೆ ವಿದೇಶಕ್ಕೆ ಹೊರಟ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ನವದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ.
ನವದೆಹಲಿ: ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ವಿದೇಶಕ್ಕೆ ತೆರಳಲಿದ್ದು, ಮಕ್ಕಳಾದ ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಕೂಡ ಅವರೊಂದಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ (Congress) ಪಕ್ಷದ ಮೂಲಗಳು ತಿಳಿಸಿವೆ. ಆದರೆ, ಇನ್ನೂ ಪ್ರಯಾಣದ ದಿನಾಂಕ ಅಥವಾ ಸೋನಿಯಾ ಗಾಂಧಿ ಭೇಟಿ ನೀಡುವ ಸ್ಥಳದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಸೆಪ್ಟೆಂಬರ್ 4ರಂದು ರಾಹುಲ್ ಗಾಂಧಿ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ. ಹಾಗಾಗಿ, ಅದಾದ ಬಳಿಕವೇ ಅವರು ಸೋನಿಯಾ ಗಾಂಧಿಯನ್ನು ಕರೆದುಕೊಂಡು ವಿದೇಶಕ್ಕೆ ತೆರಳುವ ಸಾಧ್ಯತೆಯಿದೆ.
“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ನವದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಪ್ರಯಾಣಿಸಲಿದ್ದಾರೆ. ರಾಹುಲ್ ಗಾಂಧಿ ಸೆಪ್ಟೆಂಬರ್ 4ರಂದು ನವದೆಹಲಿಯಲ್ಲಿ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಇದನ್ನೂ ಓದಿ: Rahul Gandhi: ಪ್ರಧಾನಿ ಮೋದಿ ಚೀನಾ ಜೊತೆ ಸೇರಿ ತ್ರಿವರ್ಣ ಧ್ವಜದ ಒಪ್ಪಂದ ಮಾಡಿಕೊಂಡಿದ್ದಾರೆ; ರಾಹುಲ್ ಗಾಂಧಿ ಟೀಕೆ
ಕಾಂಗ್ರೆಸ್ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ‘ಭಾರತ್ ಜೋಡೋ ಯಾತ್ರೆ’ಗೆ ಸೆಪ್ಟೆಂಬರ್ 7ರಿಂದ ಸಿದ್ಧತೆ ನಡೆಸುತ್ತಿರುವ ಸಮಯದಲ್ಲಿಯೇ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಲಿರುವ ವಿಷಯ ಬೆಳಕಿಗೆ ಬಂದಿದೆ.