ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಇಂದು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರನ್ನು ಭೇಟಿ ಮಾಡಲಿದ್ದಾರೆ. ಇಂದು ಬಿಜೆಪಿ ಆಡಳಿತವಿರುವ 2 ದೊಡ್ಡ ರಾಜ್ಯಗಳಾದ ಗುಜರಾತ್ (Gujarat Assembly Election) ಮತ್ತು ಹಿಮಾಚಲ ಪ್ರದೇಶಗಳ ಚುನಾವಣಾ (Himachal Pradesh Assembly Election) ಫಲಿತಾಂಶ ಪ್ರಕಟವಾಗಲಿದೆ. ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಸೋನಿಯಾ ಗಾಂಧಿ ಇಂದು ಬೆಳಿಗ್ಗೆ 10.15ಕ್ಕೆ ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.
27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿಗೆ ಎಕ್ಸಿಟ್ ಪೋಲ್‌ಗಳು ದೊಡ್ಡ ಗೆಲುವು ನೀಡಲಿದೆ ಎಂದು ಭವಿಷ್ಯ ನುಡಿದಿವೆ. ಹಿಮಾಚಲ ಪ್ರದೇಶದಲ್ಲಿ ಕೂಡ ಕಡಿಮೆ ಅಂತರದಿಂದ ಗೆಲ್ಲಲು ಬಿಜೆಪಿ ಸಜ್ಜಾಗಿದೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ. ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಮರಳಿ ಪಡೆಯುವ ನಿರೀಕ್ಷೆಯಲ್ಲಿದೆ. ಸದ್ಯದ ಮತ ಎಣಿಕೆಯ ಟ್ರೆಂಡ್ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಗುಜರಾತ್‌ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ.