AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Nigam: ಸೋನು ನಿಗಮ್, ತಂಡದ ಮೇಲೆ ಮುಂಬೈಯಲ್ಲಿ ಹಲ್ಲೆ; ವಿಡಿಯೋ ವೈರಲ್

ಖ್ಯಾತ ಗಾಯಕ ಸೋನು ನಿಗಮ್ ಮತ್ತು ತಂಡದವರ ಮೇಲೆ ಹಲ್ಲೆ ಸೋಮವಾರ ರಾತ್ರಿ ಮುಂಬೈಯ ಚೆಂಬೂರು ಎಂಬಲ್ಲಿ ಹಲ್ಲೆ ನಡೆದಿದೆ. ಸಂಗೀತ ಕಾರ್ಯಕ್ರಮವೊಂದರ ಸಂದರ್ಭ ಈ ಘಟನೆ ನಡೆದಿದೆ.

Ganapathi Sharma
| Edited By: |

Updated on:Feb 21, 2023 | 2:55 PM

Share

ಮುಂಬೈ: ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಮತ್ತು ತಂಡದವರ ಮೇಲೆ ಹಲ್ಲೆ ಸೋಮವಾರ ರಾತ್ರಿ ಮುಂಬೈಯ (Mumbai) ಚೆಂಬೂರು (Chembur) ಎಂಬಲ್ಲಿ ಹಲ್ಲೆ ನಡೆದಿದೆ. ಸಂಗೀತ ಕಾರ್ಯಕ್ರಮವೊಂದರ ಸಂದರ್ಭ ಘಟನೆ ನಡೆದೆ. ವ್ಯಕ್ತಿಯೊಬ್ಬ ಸೋನು ನಿಗಮ್ ಮತ್ತು ತಂಡದವರ ಮೇಲೆ ಹಲ್ಲೆ ಮಾಡಿ ಅವರನ್ನು ವೇದಿಕೆಯಿಂದ ತಳ್ಳುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಇನ್ನಷ್ಟೇ ದೃಢಪಡಬೇಕಿದ್ದು, ಪೊಲೀಸರು ನಿಗಮ್ ಅವರಿಂದ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ. ಶಿವಸೇನಾದ ಉದ್ಧವ್ ಠಾಕ್ರೆ ಬಣದ ಶಾಸಕ ಪ್ರಕಾಶ್​ ಫರ್ತೆಪೇಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಘಟನೆ ಸಂಬಂಧ ಮುಂಬೈಯ ಚೆಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಚೆಂಬೂರು ಉತ್ಸವದಲ್ಲಿ ಸೋನು ನಿಗಮ್ ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಅವರ ಜತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದು ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಶಾಸಕರ ಭೇಟಿಗೆ ಅವಕಾಶ ನೀಡದ್ದಕ್ಕೆ ಬೆಂಬಲಿಗರು ಗಲಾಟೆ ನಡೆಸಿದ್ದಾರೆ. ಸೋನು ನಿಗಮ್ ಭದ್ರತಾ ಸಿಬ್ಬಂದಿ, ಶಾಸಕರ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಸೋನು ನಿಗಮ್ ಸೇರಿ ಹಲವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ‘ಪದ್ಮಶ್ರೀ ಪ್ರಶಸ್ತಿ ಕೊಡೋಕೆ ಈಗ ಸಮಯ ಸಿಕ್ಕಿತೇ?’ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದ ಸೋನು ನಿಗಮ್​

ಈ ಮಧ್ಯೆ, ಶಾಸಕ ಪ್ರಕಾಶ್​ ಫರ್ತೆಪೇಕರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೋನು ನಿಗಮ್ ವೇದಿಕೆಯಿಂದ ಕೆಳಗಿಳಿಯುತ್ತಿದ್ದಾಗ ಕೆಲವರು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ಆ ಸಮಯದಲ್ಲಿ ಅವರ ಅಂಗರಕ್ಷಕರು ಆ ಜನರನ್ನು ದೂರ ತಳ್ಳಲು ಪ್ರಯತ್ನಿಸುತ್ತಿದ್ದರು. ಆ ಸಂದರ್ಭ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು. ಸೋನು ನಿಗಮ್‌ಗೆ ಏನೂ ಆಗಿಲ್ಲ ಎಂದು ಹೇಳಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಪ್ರಕಾಶ್​ ಫರ್ತೆಪೇಕರ್ ಮಗನ ಮೇಲೆ ಆರೋಪ

ಪ್ರಕಾಶ್​ ಫರ್ತೆಪೇಕರ್ ಮಗ ವೇದಿಕೆಯಿಂದ ಹೊರಹೋಗುವಂತೆ ಸೋನು ನಿಗಮ್ ಮ್ಯಾನೇಜರ್​ಗೆ ಸೂಚಿಸಿದ್ದಲ್ಲದೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ನಿಗಮ್ ತಂಡದವರು ದೂರಿದ್ದಾರೆ. ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕರ ಪುತ್ರ ಮೊದಲು ಸೋನು ಅಂಗರಕ್ಷಕ ಹರಿ ಅವರನ್ನು ತಳ್ಳಿ ನಂತರ ಸೋನು ಅವರನ್ನು ತಳ್ಳಿದ್ದಾರೆ. ಈ ಸಮಾರಂಭದಲ್ಲಿ ಸೋನು ನಿಗಮ್ ಅವರ ಪುತ್ರ ರಬ್ಬಾನಿ ಖಾನ್ ಕೂಡ ಉಪಸ್ಥಿತರಿದ್ದರು. ಇವರು ಘರ್ಷಣೆ ವೇಳೆ ವೇದಿಕೆಯಿಂದ ಕೆಳಗೆ ಬಿದ್ದರು. ಅವರಿಗೆ ಗಾಯಗಳಾಗಿದ್ದು, ಚೆಂಬೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಯಕರ ತಂಡದವರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 am, Tue, 21 February 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?