ಮುಂಬೈ: ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಮತ್ತು ತಂಡದವರ ಮೇಲೆ ಹಲ್ಲೆ ಸೋಮವಾರ ರಾತ್ರಿ ಮುಂಬೈಯ (Mumbai) ಚೆಂಬೂರು (Chembur) ಎಂಬಲ್ಲಿ ಹಲ್ಲೆ ನಡೆದಿದೆ. ಸಂಗೀತ ಕಾರ್ಯಕ್ರಮವೊಂದರ ಸಂದರ್ಭ ಘಟನೆ ನಡೆದೆ. ವ್ಯಕ್ತಿಯೊಬ್ಬ ಸೋನು ನಿಗಮ್ ಮತ್ತು ತಂಡದವರ ಮೇಲೆ ಹಲ್ಲೆ ಮಾಡಿ ಅವರನ್ನು ವೇದಿಕೆಯಿಂದ ತಳ್ಳುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಇನ್ನಷ್ಟೇ ದೃಢಪಡಬೇಕಿದ್ದು, ಪೊಲೀಸರು ನಿಗಮ್ ಅವರಿಂದ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ. ಶಿವಸೇನಾದ ಉದ್ಧವ್ ಠಾಕ್ರೆ ಬಣದ ಶಾಸಕ ಪ್ರಕಾಶ್ ಫರ್ತೆಪೇಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಘಟನೆ ಸಂಬಂಧ ಮುಂಬೈಯ ಚೆಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಚೆಂಬೂರು ಉತ್ಸವದಲ್ಲಿ ಸೋನು ನಿಗಮ್ ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಅವರ ಜತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದು ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಶಾಸಕರ ಭೇಟಿಗೆ ಅವಕಾಶ ನೀಡದ್ದಕ್ಕೆ ಬೆಂಬಲಿಗರು ಗಲಾಟೆ ನಡೆಸಿದ್ದಾರೆ. ಸೋನು ನಿಗಮ್ ಭದ್ರತಾ ಸಿಬ್ಬಂದಿ, ಶಾಸಕರ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಸೋನು ನಿಗಮ್ ಸೇರಿ ಹಲವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ‘ಪದ್ಮಶ್ರೀ ಪ್ರಶಸ್ತಿ ಕೊಡೋಕೆ ಈಗ ಸಮಯ ಸಿಕ್ಕಿತೇ?’ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದ ಸೋನು ನಿಗಮ್
ಈ ಮಧ್ಯೆ, ಶಾಸಕ ಪ್ರಕಾಶ್ ಫರ್ತೆಪೇಕರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೋನು ನಿಗಮ್ ವೇದಿಕೆಯಿಂದ ಕೆಳಗಿಳಿಯುತ್ತಿದ್ದಾಗ ಕೆಲವರು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ಆ ಸಮಯದಲ್ಲಿ ಅವರ ಅಂಗರಕ್ಷಕರು ಆ ಜನರನ್ನು ದೂರ ತಳ್ಳಲು ಪ್ರಯತ್ನಿಸುತ್ತಿದ್ದರು. ಆ ಸಂದರ್ಭ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು. ಸೋನು ನಿಗಮ್‌ಗೆ ಏನೂ ಆಗಿಲ್ಲ ಎಂದು ಹೇಳಿದ್ದಾರೆ.
#SonuNigam attacked by Uddhav Thackeray MLA Prakash Phaterpekar son and his goons in music event at Chembur. Sonu has been taken to the hospital nearby. pic.twitter.com/ERjIC96Ytv
— Swathi Bellam (@BellamSwathi) February 20, 2023
ಪ್ರಕಾಶ್ ಫರ್ತೆಪೇಕರ್ ಮಗ ವೇದಿಕೆಯಿಂದ ಹೊರಹೋಗುವಂತೆ ಸೋನು ನಿಗಮ್ ಮ್ಯಾನೇಜರ್ಗೆ ಸೂಚಿಸಿದ್ದಲ್ಲದೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ನಿಗಮ್ ತಂಡದವರು ದೂರಿದ್ದಾರೆ. ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕರ ಪುತ್ರ ಮೊದಲು ಸೋನು ಅಂಗರಕ್ಷಕ ಹರಿ ಅವರನ್ನು ತಳ್ಳಿ ನಂತರ ಸೋನು ಅವರನ್ನು ತಳ್ಳಿದ್ದಾರೆ. ಈ ಸಮಾರಂಭದಲ್ಲಿ ಸೋನು ನಿಗಮ್ ಅವರ ಪುತ್ರ ರಬ್ಬಾನಿ ಖಾನ್ ಕೂಡ ಉಪಸ್ಥಿತರಿದ್ದರು. ಇವರು ಘರ್ಷಣೆ ವೇಳೆ ವೇದಿಕೆಯಿಂದ ಕೆಳಗೆ ಬಿದ್ದರು. ಅವರಿಗೆ ಗಾಯಗಳಾಗಿದ್ದು, ಚೆಂಬೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಯಕರ ತಂಡದವರು ತಿಳಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:46 am, Tue, 21 February 23