ಮತ್ತೊಮ್ಮೆ ಆ್ಯಂಜಿಯೋಪ್ಲಾಸ್ಟಿಗೆ ಒಳಗಾದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ; ಎರಡು ಸ್ಟೆಂಟ್​ ಅಳವಡಿಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿ, ಸೌರವ್​ ಗಂಗೂಲಿಯವರ ಆರೋಗ್ಯ ವಿಚಾರಿಸಿದ್ದಾರೆ.

ಮತ್ತೊಮ್ಮೆ ಆ್ಯಂಜಿಯೋಪ್ಲಾಸ್ಟಿಗೆ ಒಳಗಾದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ; ಎರಡು ಸ್ಟೆಂಟ್​ ಅಳವಡಿಕೆ
ಸೌರವ್ ಗಂಗೂಲಿ
Follow us
Lakshmi Hegde
|

Updated on:Jan 28, 2021 | 7:03 PM

ಕೋಲ್ಕತ್ತ: ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿಯವರು ಇಂದು ಎರಡನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಅವರಿಗೆ ವುಡ್​ಲ್ಯಾಂಡ್​ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಿ, ಎರಡು ಸ್ಟೆಂಟ್​ಗಳನ್ನು ಅಳವಡಿಸಲಾಗಿದೆ.

ಈ ತಿಂಗಳ ಪ್ರಾರಂಭದಲ್ಲಿ ಜಿಮ್​ ಮಾಡುತ್ತಿದ್ದ ಸೌರವ್​ ಗಂಗೂಲಿ ತಲೆ ಸುತ್ತಿನಿಂದ ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಹೃದಯ ಸಮಸ್ಯೆಯಿರುವುದು ಗೊತ್ತಾಗಿತ್ತು. ಹಾಗೇ ಮೊದಲ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಮೊನ್ನೆ ಮತ್ತೆ ಗಂಗೂಲಿಯವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿಯವರೂ ಸೌರವ್​ ಗಂಗೂಲಿಯವರ ರಿಪೋರ್ಟ್​ಗಳನ್ನು ಪರಿಶೀಲಿಸಿದ್ದರು. ಇಂದು ಅವರ ಸಮಕ್ಷಮದಲ್ಲಿ ಸ್ಟೆಂಟ್ ಅಳವಡಿಸಲಾಗಿದೆ.

ಇನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿ, ಸೌರವ್​ ಗಂಗೂಲಿಯವರ ಆರೋಗ್ಯ ವಿಚಾರಿಸಿದ್ದಾರೆ.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

Published On - 6:55 pm, Thu, 28 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್