ಕೋಲ್ಕತ್ತ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಇಂದು ಎರಡನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಅವರಿಗೆ ವುಡ್ಲ್ಯಾಂಡ್ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಿ, ಎರಡು ಸ್ಟೆಂಟ್ಗಳನ್ನು ಅಳವಡಿಸಲಾಗಿದೆ.
ಈ ತಿಂಗಳ ಪ್ರಾರಂಭದಲ್ಲಿ ಜಿಮ್ ಮಾಡುತ್ತಿದ್ದ ಸೌರವ್ ಗಂಗೂಲಿ ತಲೆ ಸುತ್ತಿನಿಂದ ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಹೃದಯ ಸಮಸ್ಯೆಯಿರುವುದು ಗೊತ್ತಾಗಿತ್ತು. ಹಾಗೇ ಮೊದಲ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಮೊನ್ನೆ ಮತ್ತೆ ಗಂಗೂಲಿಯವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿಯವರೂ ಸೌರವ್ ಗಂಗೂಲಿಯವರ ರಿಪೋರ್ಟ್ಗಳನ್ನು ಪರಿಶೀಲಿಸಿದ್ದರು. ಇಂದು ಅವರ ಸಮಕ್ಷಮದಲ್ಲಿ ಸ್ಟೆಂಟ್ ಅಳವಡಿಸಲಾಗಿದೆ.
ಇನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿ, ಸೌರವ್ ಗಂಗೂಲಿಯವರ ಆರೋಗ್ಯ ವಿಚಾರಿಸಿದ್ದಾರೆ.
Published On - 6:55 pm, Thu, 28 January 21