ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಆಸ್ಪತ್ರೆಗೆ ದಾಖಲು

ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಪತ್ನಿ ಡೋನಾ ಗಂಗೂಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಆಸ್ಪತ್ರೆಗೆ ದಾಖಲು
ಸೌರವ್​ ಗಂಗೋಲಿ ಮತ್ತು ಪತ್ನಿ ಡೋನಾ ಗಂಗೂಲಿ
Edited By: ವಿವೇಕ ಬಿರಾದಾರ

Updated on: Oct 05, 2022 | 10:54 PM

ಕೋಲ್ಕತ್ತಾ: ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧ್ಯಕ್ಷ ಸೌರವ್ ಗಂಗೂಲಿ ಅವರ ಪತ್ನಿ ಡೋನಾ ಗಂಗೂಲಿ (Sourav Ganguly) ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ, ಕೀಲು ನೋವು ಮತ್ತು ದದ್ದುಗಳಂತಹ ಚಿಕೂನ್‌ಗುನ್ಯಾ ರೋಗಲಕ್ಷಣಗಳು ಕಂಡುಬಂದ ಹಿನ್ನೆಲೆ ಮಂಗಳವಾರ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ಎನ್​ಡಿಟಿವಿ ವರದಿ ಮಾಡಿದೆ. ​

ಡೋನಾ ಗಂಗೂಲಿ ಅವರು ಚಿಕೂನ್‌ಗುನ್ಯಾದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರು ಜ್ವರದಿಂದ ಬಳಲುತ್ತಿದ್ದರೂ, ಆರೋಗ್ಯ ಸ್ಥಿರವಾಗಿದೆ ಎಂದು ವುಡ್‌ಲ್ಯಾಂಡ್ಸ್ ಆಸ್ಪತ್ರೆಯ ಎಂಡಿ ಮತ್ತು ಸಿಇಒ ಡಾ.ರೂಪಾಲಿ ಬಸು ಹೇಳಿದ್ದಾರೆ. ಡೋನಾ ಗಂಗೂಲಿ ಅವರ ಆರೋಗ್ಯದ ಬಗ್ಗೆ ತೀರ್ವ ನಿಗಾವಹಿಸಲಾಗುತ್ತಿದೆ ಎಂದು ಡಾ.ರೂಪಾಲಿ ಬಸು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 pm, Wed, 5 October 22

TV9 Web

TV9 Kannada

Read More
Loading...
Unable to load recommendations.
Follow Us