Baba Siddique: ಬಾಬಾ ಸಿದ್ದಿಕಿ ಕೊಲೆ ಹಿಂದಿದೆಯಾ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್ ಕೈವಾಡ?

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರೂ ಆರೋಪಿಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ದಾಳಿಯ ಹೊಣೆಯನ್ನು ಗ್ಯಾಂಗ್ ಇನ್ನೂ ಹೊತ್ತುಕೊಂಡಿಲ್ಲ.

Baba Siddique: ಬಾಬಾ ಸಿದ್ದಿಕಿ ಕೊಲೆ ಹಿಂದಿದೆಯಾ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್ ಕೈವಾಡ?
ಬಾಬಾ ಸಿದ್ದಿಕಿImage Credit source: Lokmat Times
Follow us
ನಯನಾ ರಾಜೀವ್
|

Updated on: Oct 13, 2024 | 8:32 AM

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರೂ ಆರೋಪಿಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ದಾಳಿಯ ಹೊಣೆಯನ್ನು ಗ್ಯಾಂಗ್ ಹೊತ್ತುಕೊಂಡಿಲ್ಲ.

ಆರೋಪಿಗಳಿಬ್ಬರನ್ನೂ ಮುಂಬೈ ಪೊಲೀಸರು ಗುರುತಿಸಿ ಬಂಧಿಸಿದ್ದು, ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ಕರ್ನೈಲ್ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಧರ್ಮರಾಜ್ ಹರ್ಯಾಣದವನು ಎನ್ನಲಾಗಿದೆ.

ವಿಚಾರಣೆ ವೇಳೆ ಆರೋಪಿಗಳು ತಮ್ಮನ್ನು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಎಂದು ಗುರುತಿಸಿಕೊಂಡಿದ್ದಾರೆ. ಆರೋಪಿಗಳು ಕಳೆದ 25-30 ದಿನಗಳಿಂದ ಈ ಕೃತ್ಯ ಎಸಗಲು ಸಿದ್ಧತೆ ನಡೆಸಿದ್ದರು. ಮೂವರು ಆರೋಪಿಗಳು ಆಟೋ ರಿಕ್ಷಾದ ಮೂಲಕ ಬಾಂದ್ರಾ ಪೂರ್ವಕ್ಕೆ ಬಂದಿದ್ದರು. ಮೂವರು ಆರೋಪಿಗಳು ಅಲ್ಲಿ ಸ್ವಲ್ಪ ಸಮಯ ಕಳೆದರು ಮತ್ತು ಬಾಬಾ ಸಿದ್ದಿಕಿ ಬರುವವರೆಗೆ ಕಾಯುತ್ತಿದ್ದರು. ಇದಾದ ಬಳಿಕ ಬಾಬಾ ಸಿದ್ದಿಕಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಮತ್ತಷ್ಟು ಓದಿ: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಮುಂಬೈನ ಬಾಂದ್ರಾ ಪೂರ್ವ ಪ್ರದೇಶದಲ್ಲಿ ಶನಿವಾರ ರಾತ್ರಿ ಹತ್ಯೆ ಮಾಡಲಾಗಿದೆ. ಅವರ ಮೇಲೆ ಮೂವರು ಗುಂಡು ಹಾರಿಸಿದ್ದಾರೆ.

ನಿರ್ಮಲ್ ನಗರದ ಕೋಲ್ಗೇಟ್ ಗ್ರೌಂಡ್ ಬಳಿ ಇರುವ ಬಾಬಾ ಸಿದ್ದಿಕಿ ಪುತ್ರ ಹಾಗೂ ಶಾಸಕ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಇಬ್ಬರನ್ನು ಬಂಧಿಸಲಾಗಿದೆ.

ಬಾಬಾ ಸಿದ್ದಿಕಿ ಅವರು ಬಾಂದ್ರಾ (ಪಶ್ಚಿಮ) ಕ್ಷೇತ್ರವನ್ನು ವಿಧಾನಸಭೆಯಲ್ಲಿ ಮೂರು ಬಾರಿ ಪ್ರತಿನಿಧಿಸಿದ್ದರು. ಮುಂಬೈನ ಪ್ರಮುಖ ಮುಸ್ಲಿಂ ನಾಯಕ ಸಿದ್ದಿಕಿ, ಹಲವಾರು ಬಾಲಿವುಡ್ ತಾರೆಯರ ನಿಕಟವರ್ತಿ ಎಂದು ತಿಳಿದುಬಂದಿದೆ.

ಈ ಆಘಾತಕಾರಿ ಘಟನೆಯ ನಂತರ, ಪ್ರತಿಪಕ್ಷಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದವು. ರಾಜ್ಯದಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಶೀಘ್ರದಲ್ಲೇ ಅವರ ದಿನಾಂಕಗಳನ್ನು ಪ್ರಕಟಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ