AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ
ನಯನಾ ರಾಜೀವ್
|

Updated on:Jan 13, 2024 | 2:43 PM

Share

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಆಯ್ಕೆಮಾಡಲಾಗಿದೆ.  ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಲು ಕೇಳಲಾಗಿತ್ತು ಆದರೆ ಪ್ರಸ್ತಾವನೆಯನ್ನು ನಿತೀಶ್​ ನಿರಾಕರಿಸಿದ್ದಾರೆ.

ವಾಸ್ತವವಾಗಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ 26 ಪಕ್ಷಗಳ ಮೈತ್ರಿಕೂಟದ ಮಹತ್ವದ ಸಭೆ ಶನಿವಾರ ನಡೆಯಿತು. ಈ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಮಮತಾ ಬ್ಯಾನರ್ಜಿ ಮತ್ತು ಉದ್ಧವ್ ಠಾಕ್ರೆ ಸಭೆಗೆ ಹಾಜರಾಗಿರಲಿಲ್ಲ. ಸಭೆ ಮುಗಿದ ಬಳಿಕ ಬಿಹಾರ ಸಚಿವ ಸಂಜಯ್ ಝಾ ಈ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: ಸೀಟು ಹಂಚಿಕೆ, ಕಾಂಗ್ರೆಸ್​ನಿಂದ ಅಂತರ ಕಾಯ್ದುಕೊಂಡ ಮಮತಾ, ಇಂಡಿಯಾ ಮೈತ್ರಿಯಿಂದ ಬೇರ್ಪಡುವ ತಯಾರಿಯೇ?

ಇದೇ ವೇಳೆ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದರು. ಇಂಡಿಯಾ ಮೈತ್ರಿಕೂಟದ ಸಭೆಗೂ ಮುನ್ನ ಮುಕುಲ್ ವಾಸ್ನಿಕ್ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಭೇಟಿ ಮಾಡಿದ್ದರು.

ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಕುಲ್ ವಾಸ್ನಿಕ್ ಕೂಡ ಉಪಸ್ಥಿತರಿದ್ದರು. ಅವರು ಕಾಂಗ್ರೆಸ್‌ನ ರಾಷ್ಟ್ರೀಯ ಮೈತ್ರಿ ಸಮಿತಿಯ ಸಂಚಾಲಕರಾಗಿದ್ದಾರೆ. ಇದೀಗ ನಿತೀಶ್​ ಕುಮಾರ್​ಗೆ ಇಂಡಿಯಾ ಮೈತ್ರಿಕೂಡದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿದೆ.

ಐಎನ್‌ಡಿಐಎ ಮೈತ್ರಿಕೂಟದ ಪಕ್ಷಗಳ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಸೀಟು ಹಂಚಿಕೆ ಸವಾಲಾಗಿರುವಾಗ ಸಂಚಾಲಕರಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ನಿತೀಶ್‌ಕುಮಾರ್ ಹೇಳಿ ಸಂಚಾಲಕರ ಹುದ್ದೆಯನ್ನು ನಿರಾಕರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳು ಆದಷ್ಟು ಶೀಘ್ರ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಜೊತೆಯಾಗಿ ಚುನಾವಣಾ ರ್‍ಯಾಲಿ ನಡೆಸುವುದು ಮತ್ತು ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಸಾಧ್ಯವಾಗಲಿದೆ ಎನ್ನುವ ಒಲವು ವ್ಯಕ್ತಪಡಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:13 pm, Sat, 13 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ