Presidential Poll: ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಹೆಸರು ಸೂಚಿಸಿದ ಎಡಪಕ್ಷಗಳು

Gopalkrishna Gandhi: ರಾಷ್ಟ್ರಪತಿ ಚುನಾವಣೆ ಸನ್ನಿಹಿತವಾಗುತ್ತಿದ್ದು, ಎಡಪಕ್ಷಗಳೆಲ್ಲವೂ ಸೇರಿ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿಯವರ ಹೆಸರನ್ನು ಸೂಚಿಸಿವೆ. ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಪ್ರತಿಪಕ್ಷಗಳ ಮುಂದಿರುವ ದೊಡ್ಡ ಸವಾಲು. ಇಲ್ಲಿಯವರೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಹೆಸರು ಈ ರೇಸ್‌ನಲ್ಲಿ ಮುಂಚೂಣಿಯಲ್ಲಿತ್ತು.

Presidential Poll: ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಹೆಸರು ಸೂಚಿಸಿದ ಎಡಪಕ್ಷಗಳು
Gopalkrishna Gandhi
Follow us
TV9 Web
| Updated By: ನಯನಾ ರಾಜೀವ್

Updated on:Jun 15, 2022 | 12:24 PM

ರಾಷ್ಟ್ರಪತಿ ಚುನಾವಣೆ( Presidential Election) ಸನ್ನಿಹಿತವಾಗುತ್ತಿದ್ದು, ಎಡಪಕ್ಷಗಳೆಲ್ಲವೂ ಸೇರಿ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿಯವರ ಹೆಸರನ್ನು ಸೂಚಿಸಿವೆ. ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಪ್ರತಿಪಕ್ಷಗಳ ಮುಂದಿರುವ ದೊಡ್ಡ ಸವಾಲು. ಇಲ್ಲಿಯವರೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಹೆಸರು ಈ ರೇಸ್‌ನಲ್ಲಿ ಮುಂಚೂಣಿಯಲ್ಲಿತ್ತು.

ಎಡಪಕ್ಷಗಳ ಸಲಹೆಯನ್ನು ಶರದ್ ಪವಾರ್ ವಿರೋಧಿಸಿಲ್ಲ. ಹೀಗಿರುವಾಗ ಈಗ ಈ ಹೊಸ ಮುಖದ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಶುರುವಾಗಿದೆ. ಮೂಲಗಳ ಪ್ರಕಾರ, ಎಡಪಕ್ಷಗಳು ಮಂಗಳವಾರ ಶರದ್ ಪವಾರ್ ಅವರೊಂದಿಗೆ ಸಭೆ ನಡೆಸಿವೆ. ಈ ಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಮೊಮ್ಮಗ ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಎಡಪಕ್ಷಗಳು ಸೂಚಿಸಿದ್ದವು.

ಈ ಸಲಹೆಗೆ ಶರದ್ ಪವಾರ್ ವಿರುದ್ಧವಾಗಿಲ್ಲ ಎಂದು ಹೇಳಲಾಗುತ್ತಿದೆ. ಅದೇ ಸಮಯದಲ್ಲಿ, ಗೋಪಾಲಕೃಷ್ಣ ಗಾಂಧಿ ಅದನ್ನು ಪರಿಗಣಿಸಲು ಸಮಯ ಕೋರಿದ್ದಾರೆ. ಇಂದಿನ ಸಭೆಗಳಲ್ಲಿ ಅವರ ಹೆಸರು ಪ್ರಸ್ತಾಪವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿಪಕ್ಷಗಳ ಕಸರತ್ತಿನ ನಡುವೆಯೇ ಕೆಲವು ನಾಯಕರು ಪರ್ಯಾಯ ಮಾರ್ಗವಾಗಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಒಂದು ದಿನ ಮುಂಚಿತವಾಗಿ ವರದಿಯಾಗಿದೆ.

2017ರಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿದ್ದ ಗಾಂಧಿ ಅವರು ಎಂ ವೆಂಕಯ್ಯ ನಾಯ್ಡು ಅವರ ವಿರುದ್ಧ ಸೋತಿದ್ದರು. ಕೆಲವು ವಿರೋಧ ಪಕ್ಷಗಳ ನಾಯಕರು ದೂರವಾಣಿ ಮೂಲಕ ಗಾಂಧಿ ಅವರನ್ನು ಮಾತನಾಡಿಸಿ ವಿರೋಧ ಪಕ್ಷದ ಅಭ್ಯರ್ಥಿಯಾಗುವಂತೆ ಕೇಳಿಕೊಂಡರು ಎಂದು ಮೂಲಗಳು ತಿಳಿಸಿವೆ. ಅಧ್ಯಕ್ಷರ, ಚುನಾವಣೆಗೆ ಸ್ಪರ್ಧಿಸುವ ಮನವಿಯನ್ನು ಪರಿಗಣಿಸುವಂತೆ ಒತ್ತಾಯಿಸಲಾಗಿದೆ.

ಮೂಲಗಳ ಪ್ರಕಾರ, ಇನ್ನೂ ಕೆಲವು ಹೆಸರುಗಳನ್ನು ಸಹ ಪರಿಗಣಿಸಲಾಗುತ್ತಿದ್ದು, ಅವರ ಒಪ್ಪಿಗೆ ಪಡೆಯಲು ವಿರೋಧ ಪಕ್ಷದ ನಾಯಕರು ಸಹ ಅವರನ್ನು ಸಂಪರ್ಕಿಸಿದ್ದಾರೆ. 2004 ರಿಂದ 2009 ರವರೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಗೋಪಾಲ್ ಕೃಷ್ಣ ಗಾಂಧಿ ಅವರು ಈ ನಾಯಕರಿಂದ ಬುಧವಾರದವರೆಗೆ ಸಮಯ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Wed, 15 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್