AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥುವಾ ದಾಳಿಗೂ ಮುನ್ನ ಉಗ್ರರು ಜನರ ಹಣೆಗೆ ಬಂದೂಕಿಟ್ಟು ಅಡುಗೆ ಮಾಡಿಸಿಕೊಂಡಿದ್ದರು

ಕಥುವಾದಲ್ಲಿ ಭಯೋತ್ಪಾದಕರು ಸೈನಿಕರ ಮೇಲೆ ನಡೆಸಿದ ಹೊಂಚು ದಾಳಿಗೂ ಮುನ್ನ ಜನರ ಹಣೆಗೆ ಬಂದೂಕಿಟ್ಟು ಅಡುಗೆ ತಯಾರಿಸಿಕೊಂಡಿದ್ದರು ಎನ್ನುವ ವಿಚಾರ ಬಹಿರಂಗಗೊಂಡಿದೆ. ದಾಳಿಯ ಸಂದರ್ಭದಲ್ಲಿ ಭಯೋತ್ಪಾದಕರು ಬಾಡಿಕ್ಯಾಮ್‌ಗಳನ್ನು ಧರಿಸಿದ್ದರು. ಇವರು ಸೇನಾ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದರು. ಯೋಧರು ಗಾಯಗೊಂಡಿದ್ದರೂ ಸಹ ಅವರ ಯೋಜನೆಯನ್ನು ವಿಫಲಗೊಳಿಸಿದರು.

ಕಥುವಾ ದಾಳಿಗೂ ಮುನ್ನ ಉಗ್ರರು ಜನರ ಹಣೆಗೆ ಬಂದೂಕಿಟ್ಟು ಅಡುಗೆ ಮಾಡಿಸಿಕೊಂಡಿದ್ದರು
ಭಾರತೀಯ ಸೈನಿಕರು
ನಯನಾ ರಾಜೀವ್
|

Updated on: Jul 11, 2024 | 10:24 AM

Share

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಉಗ್ರರು ಹೊಂಚು ದಾಳಿ ನಡೆಸುವುದಕ್ಕೂ ಮುನ್ನ ಜನರ ಹಣೆಗೆ ಬಂದೂಕಿಟ್ಟು ಅಡುಗೆ ಮಾಡಿಸಿಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮಚೇಡಿ ಪ್ರದೇಶದಲ್ಲಿ ಉಗ್ರರು ಸೇನಾ ವಾಹನಗಳ ಮೇಲೆ ದಾಳಿ ನಡೆಸಿದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದರು. ಆರು ಮಂದಿ ಗಾಯಗೊಂಡಿದ್ದರು. ಕಥುವಾ ಪಟ್ಟಣದಿಂದ 150 ಕಿ.ಮೀ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದ ಬಳಿಯ ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ಮಧ್ಯಾಹ್ನ 3.30 ರ ಸುಮಾರಿಗೆ ಉಗ್ರರು ಹೊಂಚು ಹಾಕಿ, ಸೇನಾ ವಾಹನದ ಮೇಲೆ ಗ್ರೇನೆಡ್ ಹಾಗೂ ಗುಂಡಿನ ದಾಳಿ ನಡೆಸಿದ್ದರು.

ದಾಳಿಯ ಸಂದರ್ಭದಲ್ಲಿ ಭಯೋತ್ಪಾದಕರು ಬಾಡಿಕ್ಯಾಮ್‌ಗಳನ್ನು ಧರಿಸಿದ್ದರು ಮತ್ತು ಹೆಚ್ಚಿನ ಧೈರ್ಯ ಮತ್ತು ಶೌರ್ಯವನ್ನು ಪ್ರದರ್ಶಿಸಿದ ಸೇನಾ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲು ಬಯಸಿದ್ದರು ಮತ್ತು ಯೋಧರು ಗಾಯಗೊಂಡಿದ್ದರೂ ಸಹ ಅವರ ಯೋಜನೆಯನ್ನು ವಿಫಲಗೊಳಿಸಿದರು ಎಂದು ಮೂಲಗಳು ತಿಳಿಸಿವೆ.

ಇದು ಒಂದು ತಿಂಗಳ ಅವಧಿಯಲ್ಲಿ ಜಮ್ಮು ಪ್ರದೇಶದಲ್ಲಿ ನಡೆದ ಐದನೇ ಭಯೋತ್ಪಾದಕ ದಾಳಿಯಾಗಿದೆ. ಮೂಲಗಳ ಪ್ರಕಾರ, ಭಯೋತ್ಪಾದಕರು ಭದ್ರತಾ ರಚನೆಗಳಿಂದ ಬಹಳ ದೂರದಲ್ಲಿರುವ ಮತ್ತು ಕಳಪೆ ರಸ್ತೆ ಸಂಪರ್ಕವನ್ನು ಹೊಂದಿರುವ ಪ್ರದೇಶಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ:ಚತ್ತೀಸ್​ಗಡ್​ನಲ್ಲಿ ನಕ್ಸಲರ ಅಟ್ಟಹಾಸ; ಗುಂಡಿನ ಚಕಮಕಿಯಲ್ಲಿ 22 ಯೋಧರು ಹುತಾತ್ಮ

20 ಕ್ಕೂ ಹೆಚ್ಚು ಶಂಕಿತರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ, ಭದ್ರತಾ ಏಜೆನ್ಸಿಗಳು ದಾಳಿಯ ಬಗ್ಗೆ ತಮ್ಮ ತನಿಖೆಯನ್ನು ತೀವ್ರಗೊಳಿಸಿವೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ ಆದರೆ ಉಗ್ರರು ಸಮೀಪದ ಅರಣ್ಯಕ್ಕೆ ಓಡಿಹೋದರು. ಜೂನ್ 12 ಮತ್ತು 13 ರಂದು, ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದರು.

ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದರು. ಜೂನ್ 26 ರಂದು ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಮೂವರು ವಿದೇಶಿ ಉಗ್ರರು ಮೃತಪಟ್ಟಿದ್ದರು.

ಜೂನ್ 9 ರಂದು ರಿಯಾಸಿ ಜಿಲ್ಲೆಯ ಶಿವ ಖೋರಿ ದೇವಸ್ಥಾನದಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಚಾಲಕ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿರುವ ಘಟನೆಯೂ ನಡೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ