Railway Vacancy 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 1,191 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಟಿಐ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ. ದಕ್ಷಿಣ ಪೂರ್ವ ಮಧ್ಯ ರೈಲ್ವೆ (SECR) 1191 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಹಾಗೂ ಐಟಿಐ ಅಂಕಗಳ ಆಧಾರದ ಮೇಲೆ ನೇರ ಆಯ್ಕೆ ಇರಲಿದೆ. ಬಿಲಾಸ್‌ಪುರ ಮತ್ತು ರಾಯ್‌ಪುರ ಡಿವಿಷನ್‌ಗಳಲ್ಲಿ ಈ ಹುದ್ದೆಗಳಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಿ.

Railway Vacancy 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 1,191 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ

Updated on: May 14, 2026 | 3:24 PM

ನೀವು ಐಟಿಐ (ITI) ಮುಗಿಸಿ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸಿದ್ದರೆ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ದಕ್ಷಿಣ ಪೂರ್ವ ಮಧ್ಯ ರೈಲ್ವೆ (SECR) ವಿವಿಧ ಟ್ರೇಡ್‌ಗಳಲ್ಲಿ ಖಾಲಿ ಇರುವ ಒಟ್ಟು 1,191 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆದ್ದರಿಂದ ಆಸಕ್ತರು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

ರೈಲ್ವೆ ಇಲಾಖೆಯ ಬಿಲಾಸ್‌ಪುರ ಮತ್ತು ರಾಯ್‌ಪುರ ಡಿವಿಷನ್‌ಗಳಲ್ಲಿ ಈ ನೇಮಕಾತಿ ನಡೆಯುತ್ತಿದೆ.

  • ಒಟ್ಟು ಹುದ್ದೆಗಳು: 1,191

  • ಹುದ್ದೆಯ ಹೆಸರು: ಅಪ್ರೆಂಟಿಸ್ (Apprentice)

ಅರ್ಹತಾ ಮಾನದಂಡಗಳು

  1. ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

  2. ತಾಂತ್ರಿಕ ಅರ್ಹತೆ: ಸಂಬಂಧಿತ ಟ್ರೇಡ್‌ನಲ್ಲಿ NCVT/SCVT ಮಾನ್ಯತೆ ಪಡೆದ ITI ಪ್ರಮಾಣಪತ್ರವನ್ನು ಹೊಂದಿರಬೇಕು.

  3. ವಯೋಮಿತಿ:

  • ಕನಿಷ್ಠ 15 ವರ್ಷಗಳು ತುಂಬಿರಬೇಕು.
  • ಗರಿಷ್ಠ 24 ವರ್ಷ ಮೀರಿರಬಾರದು.
  • (ಸರ್ಕಾರದ ನಿಯಮಗಳ ಪ್ರಕಾರ SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ).

ಆಯ್ಕೆ ಪ್ರಕ್ರಿಯೆ ಹೇಗೆ?

ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ನಿಮ್ಮ 10ನೇ ತರಗತಿಯ ಅಂಕಗಳು ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಸರಾಸರಿಯನ್ನು ಆಧರಿಸಿ ಮೆರಿಟ್ ಪಟ್ಟಿಯ (Merit List) ಮೂಲಕ ನೇರ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಅರ್ಜಿ ಸಲ್ಲಿಸುವ ವಿಧಾನ

  • ಆಸಕ್ತ ಅಭ್ಯರ್ಥಿಗಳು ರೈಲ್ವೆ ಇಲಾಖೆಯ ಅಧಿಕೃತ ಪೋರ್ಟಲ್ apprenticeshipindia.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

  • ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಶೈಕ್ಷಣಿಕ ದಾಖಲೆಗಳು ಮತ್ತು ಫೋಟೋಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಲು ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಕೊನೆಯ ಕ್ಷಣದ ಗಡಿಬಿಡಿ ತಪ್ಪಿಸಲು ಇಂದೇ ಅರ್ಜಿ ಸಲ್ಲಿಸಿ. ಇದು ಅಪ್ರೆಂಟಿಸ್‌ಶಿಪ್ ತರಬೇತಿಯಾಗಿದ್ದು, ಇದನ್ನು ಯಶಸ್ವಿಯಾಗಿ ಮುಗಿಸಿದವರಿಗೆ ರೈಲ್ವೆಯ ಮುಂಬರುವ ಕಾಯಂ ಉದ್ಯೋಗ ನೇಮಕಾತಿಯಲ್ಲಿ ಶೇ. 20ರಷ್ಟು ಮೀಸಲಾತಿ ಮತ್ತು ಆದ್ಯತೆ ನೀಡಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us