ಶೋಪಿಯಾನ್ನ ಅರಣ್ಯದಲ್ಲಿ ಎನ್ಕೌಂಟರ್: 3 ಉಗ್ರರ ಸದೆಬಡಿದ ಭದ್ರತಾ ಪಡೆ
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲಾರ್‌ನ ಶುಕ್ರೂ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕ(Terrorist)ರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಮೂವರು ಉಗ್ರರು ಹತರಾಗಿದ್ದಾರೆ. ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡವು ಅರಣ್ಯ ಪ್ರದೇಶದಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ. ಪಡೆಗಳ ಜಂಟಿ ತಂಡವು ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರಗಾಮಿಗಳು ಪಡೆಗಳ ಮೇಲೆ ಗುಂಡು ಹಾರಿಸಿದರು, ಗುಂಡಿನ ಚಕಮಕಿ ನಡೆಯಿತು.

ಶೋಪಿಯಾನ್, ಮೇ 13: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲಾರ್‌ನ ಶುಕ್ರೂ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕ(Terrorist)ರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಮೂವರು ಉಗ್ರರು ಹತರಾಗಿದ್ದಾರೆ. ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡವು ಅರಣ್ಯ ಪ್ರದೇಶದಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ. ಪಡೆಗಳ ಜಂಟಿ ತಂಡವು ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರಗಾಮಿಗಳು ಪಡೆಗಳ ಮೇಲೆ ಗುಂಡು ಹಾರಿಸಿದರು, ಗುಂಡಿನ ಚಕಮಕಿ ನಡೆಯಿತು.
ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.ಮೂಲಗಳ ಪ್ರಕಾರ ಎರಡರಿಂದ ಮೂರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಕಾರಣರಾದವರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸುವ ಪೋಸ್ಟರ್‌ಗಳು ಪುಲ್ವಾಮಾ ಜಿಲ್ಲೆಯಾದ್ಯಂತ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಎನ್‌ಕೌಂಟರ್ ನಡೆದಿದೆ.
ಮತ್ತಷ್ಟು ಓದಿ: ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ; ಭದೇರ್ವಾದಲ್ಲಿ ಜನರ ದಂಡು
ಇತ್ತೀಚೆಗೆ ನಡೆದ ಘಟನೆ ಬಂಡಿಪೋರಾದಲ್ಲಿ ಎನ್ಕೌಂಟರ್; ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಕಾಳಗ, ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆದಿದ್ದು, ಅಡಗಿ ಕುಳಿತಿರುವ ಉಗ್ರರು ಹಾಗೂ ಭಾರತೀಯ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು.
ಬಂಡಿಪೋರಾ ಜಿಲ್ಲೆಯ ಕುಲ್ನರ್ ಬಾಜಿಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.
ಪರಿಣಾಮ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ಸ್ಥಳವನ್ನು ಸುತ್ತುವರೆದಿರುವ ಸೇನಾಪಡೆ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಬದಲಾಯಿಸಿದ್ದು, ದಾಳಿಗೆ ತಕ್ಕ ಉತ್ತರ ನೀಡುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




