ಚೆನ್ನೈ: ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ S.P. ಬಾಲಸುಬ್ರಮಣ್ಯಂ ಅವರು ಆಗಸ್ಟ್ ಮೊದಲ ವಾರದಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಸ್ಪಿಬಿ ಆರೋಗ್ಯದ ಬಗ್ಗೆ ಪುತ್ರ ಎಸ್ಪಿ ಚರಣ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ತಂದೆಯ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಎಕ್ಮೋ ಮತ್ತು ವೆಂಟಿಲೆಟರ್ನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದಿದ್ದಾರೆ. ಜೊತೆಗೆ ನಮ್ಮ ತಂದೆಗೆ ಚಿಕಿತ್ಸೆ ನೀಡುತ್ತಿರುವ ಎಂಜಿಎಂ ಆಸ್ಪತ್ರೆಯ ಎಲ್ಲಾ ವೈದ್ಯರಿಗೆ ಮತ್ತು ಅಭಿಮಾನಿಗಳ ಪ್ರಾರ್ಥನೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
#spb health update 16/9/20
Dad is stable and is continuing physio. Ekmo and ventilator continue to be on but hopefully for not long. Thanks to the team of doctors from #MGMHealthcare and all of you who have been praying for him.
— S. P. Charan (@charanproducer) September 16, 2020
Published On - 4:17 pm, Wed, 16 September 20