AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಂದ ಬಿಡುಗಡೆಗೊಂಡ ಬೆನ್ನಲ್ಲೇ ಅಜಮ್ ಖಾನ್ ಬಂಧನ; 14 ದಿನ ನ್ಯಾಯಾಂಗ ಕಸ್ಟಡಿಗೆ

ನಕಲಿ ಪಾನ್ ಕಾರ್ಡ್ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್ ಅವರು ಮತ್ತೆ ಬಂಧಿತರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಸ್​ಪಿ ಮುಖಂಡನನ್ನು ಬಂಧಿಸಿದ್ದಾರೆ. ಅವರನ್ನು 14 ದಿನ ಜುಡಿಶಿಯಲ್ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.

ಜೈಲಿಂದ ಬಿಡುಗಡೆಗೊಂಡ ಬೆನ್ನಲ್ಲೇ ಅಜಮ್ ಖಾನ್ ಬಂಧನ; 14 ದಿನ ನ್ಯಾಯಾಂಗ ಕಸ್ಟಡಿಗೆ
ಅಜಮ್ ಖಾನ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 01, 2026 | 6:44 PM

Share

ನವದೆಹಲಿ, ನವೆಂಬರ್ 1: ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಮೊಹಮ್ಮದ್ ಅಜಮ್ ಖಾನ್ (Mohammad Azam Khan) ಅವರಿಗೆ ಕಾನೂನು ಸಂಕಷ್ಟ ಮುಂದುವರಿದಿದೆ. ಎರಡು ಪಾನ್ ಕಾರ್ಡ್ ಹೊಂದಿರುವ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್‌ನಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಕೇವಲ ಒಂದೇ ದಿನದಲ್ಲಿ, ಜಾರಿ ನಿರ್ದೇಶನಾಲಯವು (ED) ಅವರನ್ನು ಹಣ ವರ್ಗಾವಣೆ (Money Laundering) ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದು, ವಿಶೇಷ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಡ್ಯುಯಲ್ ಪಾನ್ ಕಾರ್ಡ್ ಪ್ರಕರಣದಲ್ಲಿ ಹೈಕೋರ್ಟ್ ಶಿಕ್ಷೆಯನ್ನು ತಡೆಹಿಡಿದು ಜಾಮೀನು ನೀಡಿದ್ದರಿಂದ ಅಜಮ್ ಖಾನ್ ಜೈಲಿನಿಂದ ಹೊರಬಂದಿದ್ದರು. ಆದರೆ ರಾಂಪುರದ ಮೊಹಮ್ಮದ್ ಅಲಿ ಜೋಹರ್ ವಿಶ್ವವಿದ್ಯಾಲಯಕ್ಕೆ (Mohammad Ali Jauhar University) ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಡಿ (ED) ಅಧಿಕಾರಿಗಳು ಅವರನ್ನು ತಕ್ಷಣವೇ ವಶಕ್ಕೆ ಪಡೆದರು.

ಇದನ್ನೂ ಓದಿ: ದೆಹಲಿಯಲ್ಲಿ ಬಿಎಸ್-6 ನಿಯಮಗಳು ಜಾರಿ; ಬಿಎಸ್-6 ಅಲ್ಲದ ವಾಹನಗಳಿಗೆ ಇಲ್ಲ ಪ್ರವೇಶ; ಹೊರವಲಯದಲ್ಲಿ ಟ್ರಾಫಿಕ್ ಜಾಮ್

ನ್ಯಾಯಾಂಗ ಬಂಧನದ ಜೊತೆ ಸೂಕ್ತ ವೈದ್ಯಕೀಯ ವ್ಯವಸ್ಥೆ

ಇಡಿ ಅಧಿಕಾರಿಗಳು ಅಜಮ್ ಖಾನ್ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಣಕಾಸು ಅಕ್ರಮಗಳು ಮತ್ತು ಸಾಕ್ಷ್ಯಗಳ ಮರೆಮಾಚುವಿಕೆ ಕುರಿತು ವಿಚಾರಣೆ ನಡೆಸಲು ಕಸ್ಟಡಿಗೆ ನೀಡುವಂತೆ ಕೋರಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಖಾನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಖಚಿತಪಡಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

ಜೋಹರ್ ವಿಶ್ವವಿದ್ಯಾಲಯ ಹಗರಣದ ಆರೋಪ

ರಾಜಸ್ಥಾನ ಹಾಗೂ ರಾಂಪುರದಲ್ಲಿ ಜೋಹರ್ ವಿಶ್ವವಿದ್ಯಾಲಯದ ನಿರ್ಮಾಣ ಮತ್ತು ಫಂಡಿಂಗ್​ನಲ್ಲಿ ಬೃಹತ್ ಮಟ್ಟದ ಹಣಕಾಸು ಅಕ್ರಮಗಳು ನಡೆದಿವೆ ಎಂದು ಇಡಿ ಆರೋಪಿಸಿದೆ. ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡಿರುವುದು, ಸಾರ್ವಜನಿಕ PWD ಗುತ್ತಿಗೆಗಳನ್ನು ಪಡೆದವರು ಡೊನೇಶನ್ ಹೆಸರಲ್ಲಿ ಖಾಸಗಿ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ತಿರುಗಿಸಿರುವುದು ಮತ್ತು ಸರ್ಕಾರಿ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪಗಳು ಇವರ ಮೇಲಿವೆ.

ಇದನ್ನೂ ಓದಿ: ಅರ್ನಬ್ ಚಂಡಮಾರುತದ ಹೊಡೆತದ ಬೆನ್ನಲ್ಲೇ ಮತ್ತೊಂದು ಅಪಾಯ: ಆಂಧ್ರಕ್ಕೆ ಹೊಸ ಚಂಡಮಾರುತದ ಆತಂಕ

ಇಡಿ ಈಗಾಗಲೇ ಈ ವಿಶ್ವವಿದ್ಯಾಲಯದ ಸುಮಾರು 426 ಕೋಟಿ ರೂ ಮೂಲ ಮೌಲ್ಯದ (ಮಾರುಕಟ್ಟೆ ಮೌಲ್ಯ ಸುಮಾರು 1,170 ಕೋಟಿ ರೂ.) ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಐಟಿ ರಿಟರ್ನ್ಸ್​ನಲ್ಲಿ ತೋರಿಸಿದ್ದಕ್ಕೂ ವಾಸ್ತವಕ್ಕೂ ವ್ಯತ್ಯಾಸ

ಯೂನಿವರ್ಸಿಟಿ ಕ್ಯಾಂಪಸ್​ನ 59 ಕಟ್ಟಡಗಳ ನಿರ್ಮಾಣ ವೆಚ್ಚ 494.46 ಕೋಟಿ ರೂ ಎಂದು ಜಿಲ್ಲಾ ಮೌಲ್ಯಮಾಪನ ಅಧಿಕಾರಿ ಗಣಿಸಿದ್ದಾರೆ. ಆದರೆ, ಟ್ರಸ್ಟ್​ನಿಂದ ಸಲ್ಲಿಸಲಾದ ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್​ನಲ್ಲಿ ವೆಚ್ಚ ಕೇವಲ 78.32 ಕೋಟಿ ರೂ ಎಂದು ತೋರಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ