Mulayam Singh Yadav Death : ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿ ಅನೇಕ ಗಣ್ಯರ ಸಂತಾಪ
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್(82) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್(82) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರು ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ಉತ್ತಮ ನಾಯಕರಾಗಿ ಪ್ರಶಂಸಿಸಲ್ಪಟ್ಟರು. ಅವರು ಶ್ರದ್ಧೆಯಿಂದ ಜನರ ಸೇವೆ ಸಲ್ಲಿಸಿದರು ಮತ್ತು ಲೋಕನಾಯಕ್ ಜೆಪಿ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
PM Modi remembers Samajwadi Party supremo Mulayam Singh Yadav and says he was “a key soldier for democracy during the Emergency”.
“His Parliamentary interventions were insightful and emphasised on furthering national interest,” PM adds.
(file photo) pic.twitter.com/FnWEmbsuSa
— ANI (@ANI) October 10, 2022
ಮುಲಾಯಂ ಸಿಂಗ್ ಯಾದವ್ ಯುಪಿ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು. ರಕ್ಷಣಾ ಸಚಿವರಾಗಿ ಅವರು ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಒಳನೋಟವುಳ್ಳವು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಒತ್ತು ನೀಡಿದ್ದರು ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
श्री मुलायम सिंह यादव का निधन देश के लिए अपूरणीय क्षति है। साधारण परिवेश से आए मुलायम सिंह यादव जी की उपलब्धियां असाधारण थीं। ‘धरती पुत्र’ मुलायम जी जमीन से जुड़े दिग्गज नेता थे। उनका सम्मान सभी दलों के लोग करते थे। उनके परिवार-जन व समर्थकों के प्रति मेरी गहन शोक-संवेदनाएं!
— President of India (@rashtrapatibhvn) October 10, 2022
ಮುಲಾಯಂ ಸಿಂಗ್ ಯಾದವ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಪರಿಸರದಿಂದ ಬಂದ ಮುಲಾಯಂ ಸಿಂಗ್ ಯಾದವ್ ಜಿಯವರ ಸಾಧನೆಗಳು ಅಸಾಧಾರಣವಾದವು. ಎಲ್ಲ ಪಕ್ಷಗಳ ಜನರೂ ಅವರನ್ನು ಗೌರವಿಸುತ್ತಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಆಳವಾದ ಸಂತಾಪ ಎಂದು ರಾಷ್ಟ್ರಪತಿ ಮುರ್ಮು ಟ್ವೀಟ್ ಮಾಡಿದ್ದಾರೆ.
राजनीति में विरोधी होने के बावजूद मुलायम सिंह जी के सबसे अच्छे संबंध थे। जब भी उनसे भेंट होती तो वे बड़े खुले मन से अनेक विषयों पर बात करते। अनेक अवसरों पर उनसे हुई बातचीत मेरी स्मृति में सदैव तरोताज़ा रहेगी। दुःख की इस घड़ी में उनके परिजनों एवं समर्थकों के प्रति मेरी संवेदनाएँ।
— Rajnath Singh (@rajnathsingh) October 10, 2022
ರಾಜಕೀಯದಲ್ಲಿ ಹಗೆತನವಿದ್ದರೂ, ಮುಲಾಯಂ ಸಿಂಗ್ ಅವರು ಉತ್ತಮ ಸಂಬಂಧವನ್ನು ಹೊಂದಿದ್ದರು. ಅವರನ್ನು ಭೇಟಿಯಾದಾಗಲೆಲ್ಲ ಹಲವು ವಿಷಯಗಳ ಬಗ್ಗೆ ಬಹಳ ಮುಕ್ತ ಮನಸ್ಸಿನಿಂದ ಮಾತನಾಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ಅವರೊಂದಿಗಿನ ಸಂವಾದಗಳು ನನ್ನ ನೆನಪಿನಲ್ಲಿ ಸದಾ ತಾಜಾವಾಗಿರುತ್ತವೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ ಎಂದು ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
Deeply saddened about the passing away of the Samajwadi Party leader, former Union Minister and Uttar Pradesh Chief Minister Shri Mulayam Singh Yadav Ji. His demise is a loss to the national polity. My deepest condolences to his family and admirers. Om Shanti. pic.twitter.com/lxplA0dCQB
— B.S.Yediyurappa (@BSYBJP) October 10, 2022
ಸಮಾಜವಾದಿ ಪಕ್ಷದ ನಾಯಕ, ಮಾಜಿ ಕೇಂದ್ರ ಸಚಿವರು ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಜಿ ಅವರ ನಿಧನದ ಬಗ್ಗೆ ತೀವ್ರ ದುಃಖವಾಗಿದೆ. ಅವರ ನಿಧನದಿಂದ ರಾಷ್ಟ್ರ ರಾಜಕಾರಣಕ್ಕೆ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಆಳವಾದ ಸಂತಾಪಗಳು. ಓಂ ಶಾಂತಿ ಎಂದು ಕರ್ನಾಟಕದ ಮಾಜಿ ಮುಖ್ಯಮಮತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:29 am, Mon, 10 October 22