ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ: ದಿಲ್ಲಿ ನಿಲ್ದಾಣದಲ್ಲಿ ಹೈಅಲರ್ಟ್

ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ದೆಹಲಿ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿದೆ

ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ: ದಿಲ್ಲಿ ನಿಲ್ದಾಣದಲ್ಲಿ ಹೈಅಲರ್ಟ್
IndiGo flight
Edited By:

Updated on: Oct 29, 2022 | 12:19 AM

ನವದೆಹಲಿ: ನವದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ (IndiGo flight) ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಐಜಿಐ ಏರ್‌ಪೋರ್ಟ್‌ನಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು(ಅ.28) ರಾತ್ರಿ ನವದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ 6E-2131 ನಂಬರಿನ ಇಂಡಿಗೋ ವಿಮಾನ ಟೇಕಾಫ್‌ ಆಗುತ್ತಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಪೈಲೆಟ್ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್ ಮಾಡಿದ್ದಾನೆ. ಇದರಿಂದ ಕೆಲ ಕ್ಷಣ ವಿಮಾನ ನಿಲ್ದಾಣದಲ್ಲಿ ಆತಂಕ ಮನೆ ಮಾಡಿದ್ದು, ದೆಹಲಿ ಐಜಿಐ ಏರ್‌ಪೋರ್ಟ್‌ನಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಈ ಘಟನೆ ಬಗ್ಗೆ ಇಂಡಿಗೋ ಸ್ಪಷ್ಟನೆ ನೀಡಿದ್ದು, ತಾಂತ್ರಿಕ ದೋಷದಿಂದ ಈ ಘಟನೆ ನಡೆದಿದೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇಫ್‌ ಆಗಿದ್ದಾರೆ ಎಂದು ಹೇಳಿದೆ.

Published On - 12:00 am, Sat, 29 October 22