AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಲ್ ಗೂಂಡಾ ರೀತಿ ಮಾತಾಡ್ತಾರೆ; ಮೋದಿಯ ಅವಹೇಳನಕ್ಕೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 1 ವಾರ ಉಳಿದಿದೆ. ಇಂದು ಆರ್‌ಜೆಡಿಯ ತೇಜಸ್ವಿ ಯಾದವ್ ಅವರ ಜೊತೆಗಿನ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ಮತಕ್ಕಾಗಿ ಡ್ಯಾನ್ಸ್ ಮಾಡೋಕೆ ಹೇಳಿದರೂ ಮಾಡುತ್ತಾರೆ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪ್ರಧಾನಿ ಮೋದಿ ಮತ್ತು ಬಿಹಾರದ ಮತದಾರರನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಬಿಜೆಪಿ ಆರೋಪಿಸಿದೆ.

ಲೋಕಲ್ ಗೂಂಡಾ ರೀತಿ ಮಾತಾಡ್ತಾರೆ; ಮೋದಿಯ ಅವಹೇಳನಕ್ಕೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
Rahul Gandhi In Bihar
ಸುಷ್ಮಾ ಚಕ್ರೆ
|

Updated on: Oct 29, 2025 | 5:20 PM

Share

ನವದೆಹಲಿ, ಅಕ್ಟೋಬರ್ 29: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಇಂದು ಬಿಹಾರದಲ್ಲಿ ಚುನಾವಣಾ (Bihar Elections) ಪ್ರಚಾರವನ್ನು ಮಾಡಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿಕೊಂಡು ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. “ಪ್ರಧಾನಿ ಮೋದಿಯವರಿಗೆ ನಿಮ್ಮ ಮತ ಮಾತ್ರ ಬೇಕು. ನೀವೇನಾದರೂ ಮತಗಳಿಗಾಗಿ ಬದಲಾಗಿ ಡ್ಯಾನ್ಸ್ ಮಾಡಲು ಹೇಳಿದರೆ ಮೋದಿ ವೇದಿಕೆಯಲ್ಲಿ ನೃತ್ಯ ಕೂಡ ಮಾಡುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ಲೋಕಲ್ ಗೂಂಡಾ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, “ರಾಹುಲ್ ಗಾಂಧಿ ತಾವೊಬ್ಬ ರಾಜಕೀಯ ನಾಯಕ ಎಂಬುದನ್ನು ಮರೆತು ಲೋಕಲ್ ಗೂಂಡಾ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಪ್ರಧಾನಿಗೆ ಮತ ಹಾಕಿದ ಪ್ರತಿಯೊಬ್ಬ ವ್ಯಕ್ತಿಯನ್ನು ಕೂಡ ಅವರು ಅವಮಾನಿಸಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ: ಮತಕ್ಕಾಗಿ ಮೋದಿ ಡ್ಯಾನ್ಸ್ ಬೇಕಿದ್ರೂ ಮಾಡುತ್ತಾರೆ; ಬಿಹಾರದಲ್ಲಿ ರಾಹುಲ್ ಗಾಂಧಿ ಲೇವಡಿ

“ರಾಹುಲ್ ಗಾಂಧಿ ಭಾರತೀಯ ಮತದಾರರು ಮತ್ತು ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡಿದ್ದಾರೆ. ಕಾಂಗ್ರೆಸ್ ಬಹಿರಂಗವಾಗಿ ದೇಶದೊಳಗೆ ನುಗ್ಗುವವರೊಂದಿಗೆ ನಿಂತಿದ್ದಾರೆ. ಅಕ್ರಮ ವಲಸಿಗರಿಗೆ ಅವರು ಬೆಂಬಲ ನೀಡುತ್ತಿದ್ದಾರೆ” ಎಂದು ಅಮಿತ್ ಮಾಳವಿಯಾ ಆರೋಪಿಸಿದ್ದಾರೆ.

” ರಾಹುಲ್ ಗಾಂಧಿ ಜಾನಪದ ನಂಬಿಕೆಯ ಮಹಾನ್ ಹಬ್ಬವಾದ ಛತ್ ಪೂಜಾವನ್ನು ಅವಮಾನಿಸುವ ಮೂಲಕ ತಮ್ಮ ಬಿಹಾರ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬಿಹಾರದ ಭಕ್ತರು ಯಮುನಾದ ವಿಷಕಾರಿ ನೊರೆಯಲ್ಲಿ ಮುಳುಗಿ ಪೂಜೆಯನ್ನು ಮಾಡಬೇಕಾಗಿತ್ತು. ಆದರೆ ಮೋದಿ ಸರ್ಕಾರದ ಅಡಿಯಲ್ಲಿ ಯಮುನಾ ಘಾಟ್‌ಗಳಲ್ಲಿ ಸರಿಯಾದ ವ್ಯವಸ್ಥೆಗಳನ್ನು ಮಾಡಲಾಗಿತ್ತು” ಎಂದು ಮಾಳವೀಯ ಹೇಳಿದ್ದಾರೆ.

ಇದನ್ನೂ ಓದಿ: ವಿದೇಶಕ್ಕೆ ಹೋಗಿ ಭಾರತದ ವಿರುದ್ಧ ವಿಷ ಕಾರುವ ಮೊದಲ ಸಂಸದ ರಾಹುಲ್ ಗಾಂಧಿ: ಕಿರಣ್ ರಿಜಿಜು

“ರಾಹುಲ್ ಗಾಂಧಿ ಸನಾತನ ಧರ್ಮದ ವಿರುದ್ಧ, ಜಾನಪದ ಉತ್ಸವಗಳ ವಿರುದ್ಧ ಮತ್ತು ಬಿಹಾರದ ವಿರುದ್ಧ ಹೇಳಿಕೆ ನೀಡಿದ್ದಾರೆ. ಬಿಹಾರ ರಾಜ್ಯದ ಹಬ್ಬಗಳು ಮತ್ತು ಜಾನಪದ ಸಂಸ್ಕೃತಿಯನ್ನು ಅವಮಾನಿಸಿರುವ ರಾಹುಲ್ ಗಾಂಧಿ ಬಿಹಾರವನ್ನು ತೊರೆಯುವ ಮೊದಲು ಸಾರ್ವಜನಿಕ ಕ್ಷಮೆಯಾಚಿಸಬೇಕು” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?