ಶ್ರೀ ರಂಗನಾಥಸ್ವಾಮಿ ದೇವಸ್ಥಾನದಿಂದ ನೀಡಿದ ‘ವಿಶೇಷ ಉಡುಗೊರೆ’ಯನ್ನು ರಾಮಲಲ್ಲಾಗೆ ಸಮರ್ಪಿಸಿದ ಮೋದಿ

ತಿರುಚಿರಾಪಳ್ಳಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ vನರೇಂದ್ರ ಮೋದಿ. ಈ ಭೇಟಿ ವೇಳೆ ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ದೇವರ ಪರವಾಗಿ ಪ್ರಧಾನಿಗೆ ಉಡುಗೊರೆ, ಒಂದು ಸೆಟ್ ಸೀರೆಗಳು ಮತ್ತು ಇತರ ವಸ್ತುಗಳನ್ನು ನೀಡಲಾಗಿತ್ತು.

ಶ್ರೀ ರಂಗನಾಥಸ್ವಾಮಿ ದೇವಸ್ಥಾನದಿಂದ ನೀಡಿದ ‘ವಿಶೇಷ ಉಡುಗೊರೆ’ಯನ್ನು ರಾಮಲಲ್ಲಾಗೆ ಸಮರ್ಪಿಸಿದ ಮೋದಿ
ವಿಶೇಷ ಉಡುಗೊರೆ
Follow us
ರಶ್ಮಿ ಕಲ್ಲಕಟ್ಟ
|

Updated on: Jan 23, 2024 | 4:55 PM

ತಿರುಚಿರಾಪಲ್ಲಿ: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ (Ram lalla) ಪ್ರಾಣ ಪ್ರತಿಷ್ಠೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಶ್ರೀರಂಗಂನ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ(Sri Ranganathaswamy Temple) ಆಗಮಿಸಿ ಪೂಜೆ ಸಲ್ಲಿಸಿದ್ದರು. ದೇವಾಲಯಕ್ಕೆ ಆಗಮಿಸಿದ ಪ್ರಧಾನಿಗೆ ಅಲ್ಲಿನ ಅರ್ಚಕರು ಪೂರ್ಣಕುಂಭ ಸ್ವಾಗತ ನೀಡಿದ್ದರು. ತಿರುಚ್ಚಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಶ್ರೀರಂಗಂ ದೇವಸ್ಥಾನದಲ್ಲಿ ಕಂಬ ರಾಮಾಯಣದ ಶ್ಲೋಕಗಳನ್ನು ಆಲಿಸಿದರು. ರಾಮಾಯಣದ ಅತ್ಯಂತ ಹಳೆಯ ಆವೃತ್ತಿಗಳಲ್ಲಿ, ಕಂಬ ರಾಮಾಯಣವನ್ನು ತಮಿಳು ಕವಿ ಕಂಬನ್ ರಚಿಸಿದ್ದಾರೆ.

ತಿರುಚಿರಾಪಳ್ಳಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ ಮೋದಿ. ಈ ಭೇಟಿ ವೇಳೆ ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ದೇವರ ಪರವಾಗಿ ಪ್ರಧಾನಿಗೆ ಉಡುಗೊರೆ, ಒಂದು ಸೆಟ್ ಸೀರೆಗಳು ಮತ್ತು ಇತರ ವಸ್ತುಗಳನ್ನು ನೀಡಲಾಗಿತ್ತು. ಅಯೋಧ್ಯೆಯಲ್ಲಿರುವ ರಾಮಮಂದಿರಕ್ಕೆ ಕೊಂಡೊಯ್ಯಲಿರುವ ವಿಶೇಷ ಉಡುಗೊರೆಯಾಗಿತ್ತು ಇದು.

ನಿನ್ನೆ (ಜನವರಿ 22) ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಮೋದಿಯವರು ಈ ಉಡುಗೊರೆಯನ್ನು ರಾಮಲಲ್ಲಾನಿಗೆ ಸಮರ್ಪಿಸಿದ್ದಾರೆ.

ಶ್ರೀರಂಗಂ ದೇವಾಲಯ ಬಗ್ಗೆ

ಶ್ರೀರಂಗಂ ದೇವಾಲಯವು ಶ್ರೀ ರಂಗನಾಥರಿಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದೆ. ಶ್ರೀರಂಗಂ ದೇವಾಲಯವು ಭಾರತದ ಅತಿದೊಡ್ಡ ದೇವಾಲಯ ಹಾಗೂ ವಿಶ್ವದ ಶ್ರೇಷ್ಠ ಧಾರ್ಮಿಕ ಸಂಕೀರ್ಣಗಳಲ್ಲಿ ಒಂದಾಗಿದೆ. ರಂಗನಾಥಸ್ವಾಮಿ ದೇವಾಲಯವನ್ನು ವಿಜಯನಗರ ಕಾಲದಲ್ಲಿ (1336-1565) ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. ತಮಿಳಿನಲ್ಲಿ “ನಮ್ಮ ದೇವರು” ಮತ್ತು “ಸುಂದರ ವರ” ಎಂದು ಕರೆಯಲ್ಪಡುವ ನಮ್ಮ ಪೆರುಮಾಳ್ ಮತ್ತು ಅಝಗಿಯ ಮಣವಾಳನ್ ಎಂದು ಕರೆಯಲ್ಪಡುವ ದೇವತೆಯ ವಾಸಸ್ಥಾನ, ಭವ್ಯವಾದ ರಂಗನಾಥಸ್ವಾಮಿ ದೇವಾಲಯವು ಭಗವಾನ್ ವಿಷ್ಣುವಿನ ಒರಗಿರುವ ಭಂಗಿಯಲ್ಲಿರುವ ಭಗವಾನ್ ರಂಗನಾಥನ ನೆಲೆಯಾಗಿದೆ.

ಈ ದೇವಾಲಯವು ಭಗವಾನ್ ರಾಮನೊಂದಿಗೆ ಸಂಪರ್ಕವನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಶ್ರೀರಂಗದಲ್ಲಿ ಪೂಜಿಸಲ್ಪಡುವ ದೇವರು ವಿಷ್ಣುವಿನ ರೂಪವಾದ ಶ್ರೀ ರಂಗನಾಥ ಸ್ವಾಮಿ. ಶ್ರೀರಂಗಂನಲ್ಲಿರುವ ವಿಗ್ರಹವನ್ನು ಮೂಲತಃ ಭಗವಾನ್ ರಾಮ ಮತ್ತು ಅವನ ಪೂರ್ವಜರು ಪೂಜಿಸುತ್ತಿದ್ದರು ಎಂದು ನಂಬಲಾಗಿದೆ. ಇದನ್ನು ಬ್ರಹ್ಮನು ರಾಮನ ಪೂರ್ವಜರಿಗೆ ಕೊಟ್ಟನು ಎಂಬ ನಂಬಿಕೆ ಇದೆ.

ತಮಿಳುನಾಡಿನ ಈ ಪುರಾತನ ದೇಗುಲಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಧೋತಿ ಮತ್ತು ಶಾಲು ಧರಿಸಿದ್ದರು. ಅಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ದೇವಸ್ಥಾನದ ಆನೆಗೆ ಆಹಾರ ನೀಡಿ ಆಶೀರ್ವಾದ ಪಡೆದರು. ದ್ವೀಪವೊಂದರಲ್ಲಿ ನೆಲೆಸಿರುವ, ಕಾವೇರಿ ಮತ್ತು ಕೊಳ್ಳಿಡಂ ನದಿಗಳ ಸಂಗಮದಲ್ಲಿರುವ ಶ್ರೀರಂಗಂ ದೇವಾಲಯವು ತಮಿಳುನಾಡಿನ ಪುರಾತನ ವೈಷ್ಣವ ದೇವಾಲಯವಾಗಿದೆ. ಇದು ಸಂಗಮ್ ಯುಗದ ಹಿಂದಿನದು. ಈ ದೇವಾಲಯವನ್ನು ‘ಬೂಲೋಗ ವೈಕುಂಠಂ’ ಅಥವಾ ‘ಭೂಮಿಯ ಮೇಲಿನ ವೈಕುಂಠಂ’ ಎಂದೂ ಕರೆಯಲಾಗುತ್ತದೆ. ವೈಕುಂಠ ವಿಷ್ಣುವಿನ ಶಾಶ್ವತ ನಿವಾಸವಾಗಿದೆ.

ಇದನ್ನೂ ಓದಿ: ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: ತಮಿಳುನಾಡಿನ ಈ ಪುರಾತನ ದೇಗುಲಕ್ಕಿದೆ ಶ್ರೀರಾಮನ ನಂಟು

ಆನೆಯಿಂದ ಆಶೀರ್ವಾದ

ಮೋದಿ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದಾಗ ದೇವಾಲಯದ ಆನೆ ಪ್ರಧಾನಿ ಅವರನ್ನು ಆಶೀರ್ವದಿಸಿದ್ದು ಮಾತ್ರವಲ್ಲದೆ ಮೌತ್ ಆರ್ಗನ್ ಕೂಡಾ ನುಡಿಸಿದೆ. ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಳೆದ ನಂತರ ಪ್ರಧಾನಿ ಶ್ರೀ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ರಾಮೇಶ್ವರಂಗೆ ತೆರಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್