AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Oath Taking Ceremony: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಂದೇ ಭಾರತ್, ಮೆಟ್ರೋ ರೈಲು ಸಿಬ್ಬಂದಿಗೆ ವಿಶೇಷ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ಅವರು ಜೂ.9 ಸಂಜೆ 6 ಗಂಟೆಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಾಗಿದೆ. ಇದೀಗ ಈ ಕಾರ್ಯಕ್ರಮಕ್ಕೆ ವಿಶೇಷ ಗಣ್ಯರಾಗಿ ಸೆಂಟ್ರಲ್ ವಿಸ್ಟಾ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡಿದ ಸಿಬ್ಬಂದಿಗಳು ಹಾಗೂ ಕಾರ್ಮಿಕರನ್ನು ಆಹ್ವಾನಿಸಲಾಗಿದೆ.

PM Modi Oath Taking Ceremony: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಂದೇ ಭಾರತ್, ಮೆಟ್ರೋ ರೈಲು ಸಿಬ್ಬಂದಿಗೆ ವಿಶೇಷ ಆಹ್ವಾನ
ಅಕ್ಷಯ್​ ಪಲ್ಲಮಜಲು​​
|

Updated on: Jun 07, 2024 | 10:47 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಜೂ.9) ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈಗಾಗಲೇ ರಾಷ್ಟ್ರಪತಿ ಭವನದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನು ಈ ಸಮಾರಂಭದಲ್ಲಿ ಅನೇಕ ದೇಶದ ನಾಯಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಇದೀಗ ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳನ್ನಾಗಿ ಸೆಂಟ್ರಲ್ ವಿಸ್ಟಾ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡಿದ ಸಿಬ್ಬಂದಿಗಳು ಹಾಗೂ ಕಾರ್ಮಿಕರನ್ನು ಆಹ್ವಾನಿಸಲಾಗಿದೆ. ಜೂ.9ಕ್ಕೆ ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಕ್ಷ ಆಹ್ವಾನಿತರಾಗಿ ವಿಕ್ಷಿತ್ ಭಾರತ್ ರಾಯಭಾರಿಗಳು” ವಂದೇ ಭಾರತ್ ಮತ್ತು ಮೆಟ್ರೋ ರೈಲುಗಳಲ್ಲಿ ಕೆಲಸ ಮಾಡುವ ರೈಲ್ವೆ ನೌಕರರು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ.

ಇನ್ನು ರಾಷ್ಟ್ರಪತಿ ಭವನದಲ್ಲಿ ಈಗಾಗಲೇ 8,000 ಅತಿಥಿಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ಗೆದ್ದ ನಂತರ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಲಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಎನ್​​ಡಿಎ ಒಕ್ಕೂಟಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಎನ್​ಡಿಎ ಒಕ್ಕೂಟ ನಾಯಕನಾಗಿ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.

ಸಮಾರಂಭಕ್ಕೆ ದಕ್ಷಿಣ ಏಷ್ಯಾದ ವಿವಿಧ ನಾಯಕರನ್ನು ಆಹ್ವಾನಿಸಲಾಗಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಖಚಿತಪಡಿಸಿದ್ದಾರೆ. ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಟ್ಶೆರಿಂಗ್ ಟೋಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೆ ಆಹ್ವಾನಗಳನ್ನು ಕಳುಹಿಸಲಾಗಿದೆ.

ಇನ್ನು ಇಂದು ಕೂಡ ಎನ್​​ಡಿಎ ಮಿತ್ರಕೂಟಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಲ್ಲವನ್ನು ಫೈನಲ್​​ ಮಾಡಲಾಗುವುದು ಎಂದು ಹೇಳಲಾಗಿದೆ. ಇಂದು ಈ ಸಭೆಯಲ್ಲಿ ಯಾರಿಗೆ ಯಾವ ಸಚಿವ ಸ್ಥಾನ ನೀಡಬೇಕು ಹಾಗೂ ಬಿಜೆಪಿ ಯಾವೆಲ್ಲ ಸ್ಥಾನಗಳನ್ನು ತನ್ನಲ್ಲಿ ಇಟ್ಟುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಲಿದೆ. ವರದಿಗಳ ಪ್ರಕಾರ ಪ್ರತಿ ನಾಲ್ಕು ಸಂಸದರಿಗೆ ಒಂದು ಸಚಿವ ಸ್ಥಾನ ನೀಡುವ ಭರವಸೆ ನೀಡಿದೆಯಂತೆ. ಈ ಪ್ರಕಾರ, 16 ಸಂಸದರನ್ನ ಹೊಂದಿರುವ ಟಿಡಿಪಿಗೆ 4 ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. 12 ಸಂಸದರನ್ನ ಹೊಂದಿರುವ ಜೆಡಿಯುಗೆ 3 ಸಚಿವ ಸ್ಥಾನ ಸಿಗಬಹುದು. ಟಿಡಿಪಿಗೆ ಸ್ಪೀಕರ್ ಸ್ಥಾನ ಕೊಡದಿರಲು ಬಿಜೆಪಿ ನಿರ್ಧಾರ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಜೂ.9ಕ್ಕೆ ಪ್ರಮಾಣ ವಚನ ಸ್ವೀಕಾರ

ಚಂದ್ರಬಾಬು ನಾಯ್ಡು ಸ್ಪೀಕರ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಆದರೆ, ಸ್ಪೀಕರ್ ಸ್ಥಾನ ಬಿಟ್ಟುಕೊಡಲು ಒಪ್ಪದ ಬಿಜೆಪಿ, ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡೋದಾಗಿ ಭರವಸೆ ನೀಡಿದೆಯಂತೆ. ಹಾಗೆಯೇ ಮೂರು ಕ್ಯಾಬಿನೆಟ್ ದರ್ಜೆ ಮತ್ತು 2 ರಾಜ್ಯ ಖಾತೆಗೆ ನಾಯ್ಡು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದ್ರೆ, ಫಾರ್ಮುಲಾದಂತೆ 4 ಸ್ಥಚಿವ ಸ್ಥಾನ ನೀಡಲು ಬಿಜೆಪಿ ನಿರ್ಧಾರ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಟಿಡಿಪಿ, ಗ್ರಾಮೀಣಾಭಿವೃದ್ಧಿ ವಸತಿ ಖಾತೆ ಬೇಡಿಕೆ ಇಟ್ಟಿದ್ದರೆ, ಇದರ ಬದಲು ನಾಗರಿಕ ವಿಮಾನಯಾನ ಖಾತೆ ನೀಡೋದಾಗಿ ಬಿಜೆಪಿ ಹೇಳಿದೆಯಂತೆ. ಬಂದರು ಮತ್ತು ಹಡಗು ಖಾತೆ ಬೇಡಿಕೆ ಬದಲು, ಉಕ್ಕು ಖಾತೆ ನೀಡಲು ಬಿಜೆಪಿ ತಿಳಿಸಿದೆಯಂತೆ. ರಸ್ತೆ ಸಾರಿಗೆ, ಹೆದ್ದಾರಿ ಖಾತೆ ಬೇಡಿಕೆಯನ್ನೂ ಒಪ್ಪದ ಬಿಜೆಪಿ, ಇದರ ಬದಲು ಬೇರೆ ಎರಡು ಖಾತೆ ನೀಡುವ ಸಾಧ್ಯತೆ ಇದೆ.

ನಿತೀಶ್ ಕುಮಾರ್‌ ನೇತೃತ್ವದ ಜೆಡಿಯು ಸಹ ಮೂರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದೆ. ಅದರಂತೆ ಮೂರು ಸಚಿವ ಸ್ಥಾನ ಜೆಡಿಯುಗೆ ಸಿಗಬಹುದು. ಆದರೆ, ನಿತೀಶ್ ರೈಲ್ವೆ ಖಾತೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ನೀಡುವ ಸಾಧ್ಯತೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!