Parliament Special Session: ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ ವಿಶೇಷ ಅಧಿವೇಶ

ಸೆಪ್ಟೆಂಬರ್ 18ರಿಂದ ಪ್ರಾರಂಭವಾಗಲಿರುವ 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನವು ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಗಣೇಶ ಚತುರ್ಥಿಯ ಅಂದರೆ ಸೆಪ್ಟೆಂಬರ್ 19ರಂದು ಎರಡನೇ ದಿನದ ಅಧಿವೇಶವನ್ನು 2023 ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿರುವ ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ.

Parliament Special Session:  ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ ವಿಶೇಷ ಅಧಿವೇಶ
ಸಾಂದರ್ಭಿಕ ಚಿತ್ರ

Updated on: Sep 06, 2023 | 3:12 PM

ದೆಹಲಿ, ಸೆ.6: ಸೆಪ್ಟೆಂಬರ್ 18ರಿಂದ ಪ್ರಾರಂಭವಾಗಲಿರುವ 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನವು (Parliament Special Session) ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಗಣೇಶ ಚತುರ್ಥಿಯ ಅಂದರೆ ಸೆಪ್ಟೆಂಬರ್ 19ರಂದು ಎರಡನೇ ದಿನದ ಅಧಿವೇಶವನ್ನು 2023 ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿರುವ ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ. ಈ ಬಗ್ಗೆ ಕೇಂದ್ರದ ಮೂಲಗಳು ತಿಳಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಸಂಸತ್ತಿನ ಎಲ್ಲ ಕಾರ್ಯಚಟುವಟಿಕೆಗಳು ಸೆಪ್ಟೆಂಬರ್ 19ರಂದು, ಹೊಸದಾಗಿ ಉದ್ಘಾಟನೆಗೊಂಡಿರುವ ಸಂಸತ್ತಿನ ಕಟ್ಟಡಕ್ಕೆ ಬದಲಾಗಲಿವೆ ಎಂದು ವರದಿ ಹೇಳಿದೆ. ಸಂಸತ್ತಿನ ಉಭಯ ಸದನಗಳ ಅಧಿವೇಶನವು ಪ್ರಶ್ನೋತ್ತರ ಸಮಯ ಅಥವಾ ಖಾಸಗಿ ಸದಸ್ಯರ ವ್ಯವಹಾರವಿಲ್ಲದೆ ನಡೆಯಲಿದೆ ಎಂದು ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿ ಶನಿವಾರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಧಿವೇಶನವು ಐದು ದಿನಗಳ ಕಾಲ ನಡೆಯಲಿದ್ದು, ಅಧಿವೇಶದ ಕಾರ್ಯಚಟುವಿಟಕೆಗಳ ಬಗ್ಗೆ ಸದಸ್ಯರಿಗೆ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಲೋಕಸಭೆ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ “ವಿಶೇಷ ಅಧಿವೇಶನ” ವನ್ನು ನಡೆಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದರು. ಇನ್ನು ಸಂಸತ್ತಿನ ಯಾವೆಲ್ಲ ವಿಚಾರಗಳು ಚರ್ಚೆಯಾಗಲಿದೆ. ಜತೆಗೆ ಸದನದ ಕಾರ್ಯಸೂಚಿಯ ಬಗ್ಗೆ ತಿಳಿಸಿಲ್ಲ ಎಂಬ ಮಾತುಗಳು ವಿರೋಧ ಪಕ್ಷಗಳಿಂದ ಕೇಳಿ ಬರುತ್ತಿದೆ.

ಇದನ್ನೂ ಓದಿ: ಸೆಪ್ಟೆಂಬರ್​ 18 ರಿಂದ 22ರವರೆಗೆ ಸಂಸತ್ ವಿಶೇಷ ಅಧಿವೇಶನ

ಸರ್ಕಾರ ಒಂದು ವರ್ಷದಲ್ಲಿ ಮೂರು ಅಧಿವೇಶಗಳನ್ನು (ಬಜೆಟ್, ಮಾನ್ಸೂನ್ ಮತ್ತು ಚಳಿಗಾಲ ಅಧಿವೇಶ) ನಡೆಸುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ಆದರೆ ಈ ವಿಶೇಷ ಅಧಿವೇಶನದ ಕಾರ್ಯಸೂಚಿ ಅಥವಾ ಅಧಿವೇಶದ ಬಗ್ಗೆ ಪ್ರಲ್ಹಾದ್ ಜೋಶಿ ಅವರು ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ ಎಂದು ಹೇಳಲಾಗಿದೆ. ಇನ್ನು ಈ ಅಧಿವೇಶವನ್ನು ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜತೆಗೆ ಈಗಾಗಲೇ ಒಂದು ದೇಶ, ಒಂದು ಚುನಾವಣೆ ಪರಿಶೀಲನೆಗೆ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಸಮಿತಿಯನ್ನು ಕೂಡ ರಚನೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us