ಬೈಕ್​ಗೆ ಕಾರು ಡಿಕ್ಕಿ ಹೊಡೆಸಿದ ಅಪ್ರಾಪ್ತ ಬಾಲಕ, ಹಾಲಿನ ವ್ಯಾಪಾರಿ ಸ್ಥಳದಲ್ಲೇ ಸಾವು

ಹಾಲಿನ ವ್ಯಾಪಾರಿ ಇದ್ದ ಬೈಕ್​ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್​ನಲ್ಲಿ ನಡೆದಿದೆ, ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಎಸ್‌ಯುವಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಆರೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಕಾರು
Follow us
ನಯನಾ ರಾಜೀವ್
|

Updated on: Aug 30, 2024 | 11:55 AM

ಹಾಲಿನ ವ್ಯಾಪಾರಿ ಇದ್ದ ಬೈಕ್​ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್​ನಲ್ಲಿ ನಡೆದಿದೆ, ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಎಸ್‌ಯುವಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಆರೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ದ್ವಿಚಕ್ರ ವಾಹನಕ್ಕೆ ರಾಂಗ್ ಸೈಡ್ ನಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದ್ದು ನವೀನ್ ವೈಷ್ಣವ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಚಾಲಕನಿಗೆ 17 ವರ್ಷ ವಯಸ್ಸಾಗಿರುವುದರಿಂದ, ಎಸ್‌ಯುವಿ ಮಾಲೀಕ ಇಕ್ಬಾಲ್ ಜಿವಾನಿ (48) ಮತ್ತು ಅವರ ಮಗ ಮೊಹಮ್ಮದ್ ಫಾಜ್ ಇಕ್ಬಾಲ್ ಜಿವಾನಿ (21) ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಓಡಿ ಹೋಗಲು ಯತ್ನಿಸಿದ್ದ, ಆದರೆ ಗಾಯಗಳಾದ ಹಿನ್ನೆಲೆಯಲ್ಲಿ ಓಡಲಾಗದೆ ಪೊಲೀಸ್​ ಕೈಗೆ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ಓದಿ: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಮದ್ಯದ ಅಮಲಿನಲ್ಲಿದ್ದರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಪಘಾತಕ್ಕೂ ಮುನ್ನ ಆರೋಪಿ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾನಾ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದರು. ಇತ್ತೀಚೆಗೆ ಅಪ್ರಾಪ್ತ ಮಕ್ಕಳಿಂದ ಅಪಘಾತ ಹೆಚ್ಚಾಗುತ್ತಿದೆ. ಇನ್ನೂ ಪೋಷಕರು ಎಚ್ಚೆತ್ತುಕೊಳ್ಳದಿದ್ದರೆ ಸಾವು ಹೆಚ್ಚಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು