ಬೈಕ್​ಗೆ ಕಾರು ಡಿಕ್ಕಿ ಹೊಡೆಸಿದ ಅಪ್ರಾಪ್ತ ಬಾಲಕ, ಹಾಲಿನ ವ್ಯಾಪಾರಿ ಸ್ಥಳದಲ್ಲೇ ಸಾವು

ಹಾಲಿನ ವ್ಯಾಪಾರಿ ಇದ್ದ ಬೈಕ್​ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್​ನಲ್ಲಿ ನಡೆದಿದೆ, ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಎಸ್‌ಯುವಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಆರೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಬೈಕ್​ಗೆ ಕಾರು ಡಿಕ್ಕಿ ಹೊಡೆಸಿದ ಅಪ್ರಾಪ್ತ ಬಾಲಕ, ಹಾಲಿನ ವ್ಯಾಪಾರಿ ಸ್ಥಳದಲ್ಲೇ ಸಾವು
ಕಾರು

Updated on: Aug 30, 2024 | 11:55 AM

ಹಾಲಿನ ವ್ಯಾಪಾರಿ ಇದ್ದ ಬೈಕ್​ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್​ನಲ್ಲಿ ನಡೆದಿದೆ, ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಎಸ್‌ಯುವಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಆರೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ದ್ವಿಚಕ್ರ ವಾಹನಕ್ಕೆ ರಾಂಗ್ ಸೈಡ್ ನಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದ್ದು ನವೀನ್ ವೈಷ್ಣವ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಚಾಲಕನಿಗೆ 17 ವರ್ಷ ವಯಸ್ಸಾಗಿರುವುದರಿಂದ, ಎಸ್‌ಯುವಿ ಮಾಲೀಕ ಇಕ್ಬಾಲ್ ಜಿವಾನಿ (48) ಮತ್ತು ಅವರ ಮಗ ಮೊಹಮ್ಮದ್ ಫಾಜ್ ಇಕ್ಬಾಲ್ ಜಿವಾನಿ (21) ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಓಡಿ ಹೋಗಲು ಯತ್ನಿಸಿದ್ದ, ಆದರೆ ಗಾಯಗಳಾದ ಹಿನ್ನೆಲೆಯಲ್ಲಿ ಓಡಲಾಗದೆ ಪೊಲೀಸ್​ ಕೈಗೆ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ಓದಿ: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಮದ್ಯದ ಅಮಲಿನಲ್ಲಿದ್ದರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಪಘಾತಕ್ಕೂ ಮುನ್ನ ಆರೋಪಿ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾನಾ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದರು. ಇತ್ತೀಚೆಗೆ ಅಪ್ರಾಪ್ತ ಮಕ್ಕಳಿಂದ ಅಪಘಾತ ಹೆಚ್ಚಾಗುತ್ತಿದೆ. ಇನ್ನೂ ಪೋಷಕರು ಎಚ್ಚೆತ್ತುಕೊಳ್ಳದಿದ್ದರೆ ಸಾವು ಹೆಚ್ಚಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us