ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಒಂದೇ ಕುಟುಂಬದ ಐವರ ಜಲಸಮಾಧಿ
ಹೈದರಾಬಾದ್: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಕೊತ್ತಪಲ್ಲಿ ಬಳಿ ಈ ದುರಂತ ನಡೆದಿದೆ. ಕೊತ್ತಪಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಕಾರು ನಿಯಂತ್ರಣ ತಪ್ಪಿದಾಗ ಈ ಘಟನೆ ನಡೆದಿದೆ. ರಸ್ತೆ ಪಕ್ಕದ ಕಾಲುವೆಗೆ ಬಿದ್ದ ಕಾರಣ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ. ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು ಒಂದು ಮಗು ಮೃತಪಟ್ಟವರು. ಘಟನೆಯಲ್ಲಿ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲ ಒಡಿಶಾ ಮೂಲದವರೆಂದು ಗುರುತಿಸಲಾಗಿದೆ.
Follow us on
ಹೈದರಾಬಾದ್: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಕೊತ್ತಪಲ್ಲಿ ಬಳಿ ಈ ದುರಂತ ನಡೆದಿದೆ.
ಕೊತ್ತಪಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಕಾರು ನಿಯಂತ್ರಣ ತಪ್ಪಿದಾಗ ಈ ಘಟನೆ ನಡೆದಿದೆ. ರಸ್ತೆ ಪಕ್ಕದ ಕಾಲುವೆಗೆ ಬಿದ್ದ ಕಾರಣ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ. ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು ಒಂದು ಮಗು ಮೃತಪಟ್ಟವರು. ಘಟನೆಯಲ್ಲಿ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲ ಒಡಿಶಾ ಮೂಲದವರೆಂದು ಗುರುತಿಸಲಾಗಿದೆ.