SpiceJet flight ಜೆದ್ದಾದಿಂದ ಹೊರಟ ಸ್ಪೈಸ್‌ಜೆಟ್ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ
ಸ್ಪೈಸ್‌ಜೆಟ್‌ನ SG-306 ವಿಮಾನವು ಕೋಯಿಕ್ಕೋಡ್‌ಗೆ ಪ್ರಯಾಣಿಸುತ್ತಿದ್ದಾಗ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೊಚ್ಚಿಯಲ್ಲಿ ಇಳಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ: ಸೌದಿ ಅರೇಬಿಯಾದ (Saudi Arabia) ಜೆದ್ದಾದಿಂದ ಹೊರಟಿದ್ದ ಸ್ಪೈಸ್‌ಜೆಟ್ (SpiceJet) ವಿಮಾನವು ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೇರಳದ ಕೊಚ್ಚಿ (Kochi) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸ್ಪೈಸ್‌ಜೆಟ್‌ನ SG-306 ವಿಮಾನವು ಕೋಯಿಕ್ಕೋಡ್‌ಗೆ ಪ್ರಯಾಣಿಸುತ್ತಿದ್ದಾಗ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೊಚ್ಚಿಯಲ್ಲಿ ಇಳಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇಂದು ಸಂಜೆ 6.27ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ರಾತ್ರಿ 7.19ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತುರ್ತು ಸ್ಥಿತಿಯನ್ನು ಹಿಂಪಡೆಯಲಾಗಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸಲು ವಿಮಾನ ನಿಲ್ದಾಣವು ಸಂಪೂರ್ಣ ಸಜ್ಜಾಗಿದೆ ಎಂದು ಕೊಚ್ಚಿ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಎಸ್ ಸುಹಾಸ್ ತಿಳಿಸಿದ್ದಾರೆ.
Kozhikode-bound SpiceJet flight from Jeddah diverted to Kochi due to hydraulic system failure. The flight landed safely with all passengers at Kochi: Directorate General of Civil Aviation (DGCA)
— ANI (@ANI) December 2, 2022
ವಿಮಾನ ನಿಲ್ದಾಣದ ಎಚ್ಚರಿಕೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸಕ್ರಿಯಗೊಳಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆದ ನಂತರ, ರನ್‌ವೇಯನ್ನು ಪರಿಶೀಲಿಸಿ ಬಳಿಕ ಸಾಮಾನ್ಯ ಕಾರ್ಯಾಚರಣೆಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ