ಸಾಮಾಜಿಕ ಮಾಧ್ಯಮದಲ್ಲಿ ಸ್ಪೈಸ್‌ಜೆಟ್‌ನ ಎರಡು ವಿಮಾನಗಳಿಗೆ ಬಾಂಬ್ ಬೆದರಿಕೆ

ಅಗತ್ಯ ಅನುಮೋದನೆಗಳನ್ನು ಪಡೆದ ನಂತರ, ವಿಮಾನವನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಿಮಾನ ಸಂಸ್ಥೆ ಹೇಳಿದೆ. ಕಳೆದ ಎರಡು ದಿನಗಳಲ್ಲಿ, ಕೆಲವು ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಸುಮಾರು 13 ಭಾರತೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ, ಆದರೆ ವಿಮಾನಗಳಲ್ಲಿ ಅನುಮಾನಾಸ್ಪದ ಏನೂ ಕಂಡುಬಂದಿಲ್ಲ.

ಸಾಮಾಜಿಕ ಮಾಧ್ಯಮದಲ್ಲಿ ಸ್ಪೈಸ್‌ಜೆಟ್‌ನ ಎರಡು ವಿಮಾನಗಳಿಗೆ ಬಾಂಬ್ ಬೆದರಿಕೆ
ಸ್ಪೈಸ್ ಜೆಟ್
Follow us
ರಶ್ಮಿ ಕಲ್ಲಕಟ್ಟ
|

Updated on: Oct 16, 2024 | 6:48 PM

ದೆಹಲಿ ಅಕ್ಟೋಬರ್ 16: ತಮ್ಮ ಎರಡು ವಿಮಾನಗಳಿಗೆ ಎಕ್ಸ್ ಹ್ಯಾಂಡಲ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ಸ್ಪೈಸ್‌ಜೆಟ್ ಬುಧವಾರ ಹೇಳಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಗಿದೆ. ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆ ಎಂದು ಏರ್‌ಲೈನ್ಸ್ ವಕ್ತಾರರು ತಿಳಿಸಿದ್ದಾರೆ. ಎರಡೂ ವಿಮಾನಗಳಲ್ಲಿನ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಅಗತ್ಯ ಅನುಮೋದನೆಗಳನ್ನು ಪಡೆದ ನಂತರ, ವಿಮಾನವನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಿಮಾನ ಸಂಸ್ಥೆ ಹೇಳಿದೆ. ಕಳೆದ ಎರಡು ದಿನಗಳಲ್ಲಿ, ಕೆಲವು ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಸುಮಾರು 13 ಭಾರತೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ, ಆದರೆ ವಿಮಾನಗಳಲ್ಲಿ ಅನುಮಾನಾಸ್ಪದ ಏನೂ ಕಂಡುಬಂದಿಲ್ಲ.

“ಅಕ್ಟೋಬರ್ 16, 2024 ರಂದು, ಸ್ಪೈಸ್‌ಜೆಟ್‌ನ ಎಕ್ಸ್ ಹ್ಯಾಂಡಲ್ ಎರಡು ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಸೂಚಿಸುವ ನೇರ ಸಂದೇಶವನ್ನು ಸ್ವೀಕರಿಸಿತು. ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ತಿಳಿಸಲಾಯಿತು ಮತ್ತು ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಯಿತು. ಎರಡೂ ವಿಮಾನಗಳಲ್ಲಿನ ಪ್ರಯಾಣಿಕರು ಸುರಕ್ಷಿತವಾಗಿ ಇಳಿದರು. ಅಗತ್ಯ ಅನುಮೋದನೆಗಳನ್ನು ಪಡೆದ ನಂತರ ವಿಮಾನ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೆಲವು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಯಿತು, ಆದರೆ ಕೆಲವು ವಿಮಾನಯಾನ ಸಂಸ್ಥೆಗಳು ಎಲ್ಲಾ ಪ್ರಯಾಣಿಕರನ್ನು ಮರು-ಸ್ಕ್ರೀನ್ ಮಾಡಬೇಕಾಗಿತ್ತು, ಇದು ದೊಡ್ಡ ವಿಳಂಬ ಮತ್ತು ಅನಾನುಕೂಲತೆಗೆ ಕಾರಣವಾಯಿತು.

ವಿಮಾನಯಾನ ಸಂಸ್ಥೆಗಳಿಗೆ ನಕಲಿ ಬಾಂಬ್ ಬೆದರಿಕೆಗಳನ್ನು ನೀಡಿದ ಹೆಚ್ಚಿನ ಸಾಮಾಜಿಕ ಮಾಧ್ಯಮ ಖಾತೆಗಳು ದೇಶದ ಹೊರಗಿನಿಂದ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದ್ದು ತಕ್ಷಣವೇ ಅವುಗಳನ್ನು ರದ್ದುಗೊಳಿಸಲಾಗಿದೆ. ಸೈಬರ್ ಸೆಕ್ಯುರಿಟಿ ಏಜೆನ್ಸಿಗಳು ಸಹ ಜಾಗರೂಕವಾಗಿರುತ್ತವೆ. ಈ ಸುಳ್ಳು ಬೆದರಿಕೆಗಳಿಗೆ ಲಿಂಕ್ ಆಗಿರುವ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಟ್ರ್ಯಾಕ್ ಮಾಡುತ್ತಿವೆ.

ಇಂದು ಬೆಳಗ್ಗೆ ಗೃಹ ವ್ಯವಹಾರಗಳ ಸಚಿವಾಲಯವು ನಕಲಿ ಬಾಂಬ್ ಬೆದರಿಕೆ ಸಂದೇಶಗಳಿಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಸಚಿವಾಲಯದಿಂದ ವರದಿಯನ್ನು ಕೇಳಿದೆ.

ನಾಗರಿಕ ವಿಮಾನಯಾನ ಸಚಿವಾಲಯ, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‌ಎಫ್), ಬ್ಯೂರೋ ಆಫ್ ಸಿವಿಲ್ ಏವಿಯೇಷನ್, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಬಾಂಬ್ ಬೆದರಿಕೆಗಳ ಕುರಿತು ವರದಿ ಸಲ್ಲಿಸುವಂತೆ ಎಂಎಚ್‌ಎ ಸೂಚನೆ ನೀಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

“ಎಂಎಚ್‌ಎಯ ಹಿರಿಯ ಅಧಿಕಾರಿಗಳು ಈ ವಿಷಯದ ಬಗ್ಗೆ ವರದಿಯನ್ನು ಸಿದ್ಧಪಡಿಸಲು ಮತ್ತು ಅದನ್ನು ಸಲ್ಲಿಸಲು ವಾಯುಯಾನ ವಲಯದ ಎಲ್ಲಾ ಸಂಬಂಧಪಟ್ಟ ಭದ್ರತಾ ಏಜೆನ್ಸಿಗಳಿಗೆ ಸೂಚಿಸಿದ್ದಾರೆ. ತನಿಖೆಯನ್ನು ಕೇಂದ್ರ ಗುಪ್ತಚರ ಸಂಸ್ಥೆಯು ಮೇಲ್ವಿಚಾರಣೆ ಮಾಡುತ್ತದೆ ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: ಆಕಾಶ ಏರ್‌ನ ದೆಹಲಿ-ಬೆಂಗಳೂರು ವಿಮಾನಕ್ಕೆ ಬಾಂಬ್ ಬೆದರಿಕೆ

ಏತನ್ಮಧ್ಯೆ, ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!