AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲಿಂಗ್ ಫ್ಯಾನ್​ಗೆ ಸ್ಪ್ರಿಂಗ್! ಆತ್ಮಹತ್ಯೆಗೆ ತಡೆಗೆ ರಾಜಸ್ಥಾನದ ಕೋಟಾ ಹಾಸ್ಟೆಲ್​​​ಗಳಿಂದ ಹೊಸ ಪ್ರಯೋಗ​

Ceiling fans fitted with springs to prevent suicide; ಒಬ್ಬ ವ್ಯಕ್ತಿಯು ವಸತಿಗೃಹದಲ್ಲಿ ಸೀಲಿಂಗ್‌ ಫ್ಯಾನ್​ಗೆ ನೇಣುಹಾಕಿಕೊಳ್ಳಲು ಯತ್ನಿಸುತ್ತಿರುತ್ತಾರೆ. ಆದರೆ, ಅದಕ್ಕೆ ಸ್ಪ್ರಿಂಗ್ ಅಳವಡಿಸಿದ್ದರಿಂದ, ವ್ಯಕ್ತಿಯು ನೇಣು ಹಾಕಿ ಕೆಳಜಾರಿದಾಗ ಅವರ ಜತೆಗೇ ಫ್ಯಾನ್ ಕೂಡ ಕೆಳಬೀಳುವ ದೃಶ್ಯ ‘ಎಎನ್​ಐ’ ವಿಡಿಯೋದಲ್ಲಿದೆ.

ಸೀಲಿಂಗ್ ಫ್ಯಾನ್​ಗೆ ಸ್ಪ್ರಿಂಗ್! ಆತ್ಮಹತ್ಯೆಗೆ ತಡೆಗೆ ರಾಜಸ್ಥಾನದ ಕೋಟಾ ಹಾಸ್ಟೆಲ್​​​ಗಳಿಂದ ಹೊಸ ಪ್ರಯೋಗ​
ಸೀಲಿಂಗ್ ಫ್ಯಾನ್​ಗೆ ಸ್ಪ್ರಿಂಗ್!
ಗಣಪತಿ ಶರ್ಮಾ
|

Updated on:Aug 18, 2023 | 6:31 PM

Share

ಕೋಟಾ, ಆಗಸ್ಟ್ 18: ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ರಾಜಸ್ಥಾನದ (Rajasthan) ಕೋಟಾದ (Kota) ಹಾಸ್ಟೆಲ್​​​ಗಳು ಮತ್ತು ಪೇಯಿಂಗ್ ಗೆಸ್ಟ್‌ಗಳು ಹೊಸದೊಂದು ಐಡಿಯಾ ಕಂಡುಕೊಂಡಿವೆ! ಹಾಸ್ಟೆಲ್​​​ಗಳು ಮತ್ತು ಪೇಯಿಂಗ್ ಗೆಸ್ಟ್‌ಗಳು ಕೊಠಡಿಗಳಲ್ಲಿ ಸೀಲಿಂಗ್ ಫ್ಯಾನ್‌ಗಳನ್ನು ನೇತುಹಾಕಲು ಸ್ಪ್ರಿಂಗ್‌ಗಳನ್ನು ಅಳವಡಿಸಲು ಆರಂಭಿಸಿವೆ. ಪರಿಣಾಮವಾಗಿ ಸೀಲಿಂಗ್ ಫ್ಯಾನ್​​ಗಳಿಗೆ ನೇಣು ಹಾಕಿ ಆತ್ಮಹತ್ಯೆ ಮಾಡುವವರ ಸಂಖ್ಯೆಯಾದರೂ ಕಡಿಮೆಯಾಗಲಿ ಎಂಬುದು ಅವರ ಆಶಯ. ಈ ವಿಚಾರವಾಗಿ ‘ಎಎನ್​ಐ’ ಸುದ್ದಿಸಂಸ್ಥೆ ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ವ್ಯಕ್ತಿಯೊಬ್ಬರು, ಸೀಲಿಂಗ್ ಫ್ಯಾನ್​ಗಳಿಗೆ ಸ್ಪ್ರಿಂಗ್ ಅಳವಡಿಸುವುದರಿಂದ ಹೇಗೆ ಆತ್ಮಹತ್ಯೆ ತಡೆಯಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಒಬ್ಬ ವ್ಯಕ್ತಿಯು ವಸತಿಗೃಹದಲ್ಲಿ ಸೀಲಿಂಗ್‌ ಫ್ಯಾನ್​ಗೆ ನೇಣುಹಾಕಿಕೊಳ್ಳಲು ಯತ್ನಿಸುತ್ತಿರುತ್ತಾರೆ. ಆದರೆ, ಅದಕ್ಕೆ ಸ್ಪ್ರಿಂಗ್ ಅಳವಡಿಸಿದ್ದರಿಂದ, ವ್ಯಕ್ತಿಯು ನೇಣು ಹಾಕಿ ಕೆಳಜಾರಿದಾಗ ಅವರ ಜತೆಗೇ ಫ್ಯಾನ್ ಕೂಡ ಕೆಳಬೀಳುವ ದೃಶ್ಯ ‘ಎಎನ್​ಐ’ ವಿಡಿಯೋದಲ್ಲಿದೆ.

ಸೀಲಿಂಗ್ ಫ್ಯಾನ್​ಗೆ ಸ್ಪ್ರಿಂಗ್; ವಿಡಿಯೋ ನೋಡಿ

ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಪ್ರಕರಣಗಳನ್ನು ಕಡಿಮೆ ಮಾಡಲು ಕೋಟಾದ ಎಲ್ಲಾ ಹಾಸ್ಟೆಲ್‌ಗಳು ಮತ್ತು ಪೇಯಿಂಗ್ ಗೆಸ್ಟ್ ಕೊಠಡಿಗಳಲ್ಲಿ ಸ್ಪ್ರಿಂಗ್ ಲೋಡೆಡ್ ಫ್ಯಾನ್‌ಗಳನ್ನು ಅಳವಡಿಸಲಾಗಿದೆ ಎಂದು ‘ಎಎನ್​ಐ’ ವರದಿ ತಿಳಿಸಿದೆ. ಇದು ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದನ್ನು ಕಾದು ನೋಡಬೇಕಷ್ಟೆ.

ಈ ಮಧ್ಯೆ, ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ತೆಗೆದುಕೊಳ್ಳುವ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಮೇಲೆ ಗಮನ ಕೇಂದ್ರೀಕರಿಸಲು ಮತ್ತು ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಕೋಟಾದಲ್ಲಿ ಈ ವರ್ಷ ಇಲ್ಲಿಯವರೆಗೆ 20 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಪಡೆಯುತ್ತಿರುವ ಜೆಇಇ ಮತ್ತು ನೀಟ್ ಆಕಾಂಕ್ಷಿಗಳ ಮಾನಸಿಕ ಆರೋಗ್ಯದ ಬಗ್ಗೆ ಕಳವಳ ವ್ಯಕ್ತವಾಗುವಂತೆ ಮಾಡಿದೆ.

ಇದನ್ನೂ ಓದಿ: ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಒಲ್ಲೆ ಎಂದ ಗಂಡ, ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಮಂಗಳವಾರವಷ್ಟೇ ಬಿಹಾರದ 18 ವರ್ಷದ ಜೆಇಇ ಆಕಾಂಕ್ಷಿಯೊಬ್ಬರು ಮಹಾವೀರ್ ನಗರದಲ್ಲಿನ ತನ್ನ ಪಿಜಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಆಗಸ್ಟ್‌ನಲ್ಲಿ ವರದಿಯಾದ ನಾಲ್ಕನೇ ಆತ್ಮಹತ್ಯೆ ಪ್ರಕರಣವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Fri, 18 August 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?